ಚಿಕ್ಕಮಗಳೂರು

ಬಿಜೆಪಿ- ಜೆಡಿಎಸ್ ಒಂದೇ ನಾಣ್ಯದ ಎರಡು ಮುಖ

Published On :

ಕ.ಪ್ರ.ವಾರ್ತೆ, ಚಿಕ್ಕಮಗಳೂರು, ಏ.28
ಬಿಜೆಪಿ ಮತ್ತು ಜೆಡಿಎಸ್ ಒಂದೇ ನಾಣ್ಯದ ಎರಡು ಮುಖಗಳು ಎಂದು ಸಂಸದ ಜಯಪ್ರಕಾಶ್ ಹೆಗ್ಡೆ ಆರೋಪಿಸಿದ್ದಾರೆ.
ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಪ್ರಚಾರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಜೆಪಿ ಪಕ್ಷದ ಮುಖಂಡರನ್ನು ಕಾಂಗ್ರೆಸ್ ಪಕ್ಷಕ್ಕೆ ಸ್ವಾಗತಿಸಿ ಮಾತನಾಡಿದ ಅವರು, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ನಡುವೆ ಯಾವುದೇ ವ್ಯತ್ಯಾಸಗಳಿಲ್ಲ, ಅವೆರಡು ಒಂದೇ ಎಂದರು.
ಒಂದು ಬಾರಿ ಅಧಿಕಾರಕ್ಕೆ ಬಂದ ಬಿಜೆಪಿ ಅಂತರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಮರ್ಯಾದೆ ಹರಾಜು ಮಾಡಿದೆ. ದೇಶವಷ್ಟೇ ಅಲ್ಲ, ವಿದೇಶದಲ್ಲೂ ಕರ್ನಾಟಕದ ಭ್ರಷ್ಟಚಾರ ಹಗರಣಗಳು ಚರ್ಚೆಯಾಗುತ್ತಿವೆ. ಇದು, ನಾಚಿಕೆಗೇಡಿನ ಸಂಗತಿ ಎಂದು ಹೇಳಿದರು.
ಅನುದಾನ ದುರ್ಬಳಕೆ: ವಿವಿಧ ಜನಪ್ರಿಯ ಯೋಜನೆಗಳ ರೂಪದಲ್ಲಿ ಕರ್ನಾಟಕಕ್ಕೆ ಕೇಂದ್ರ ಸರ್ಕಾರ 90 ಸಾವಿರ ಕೋಟಿ ಅನುದಾನ ನೀಡಿದೆ. ಅದನ್ನು ಸರಿಯಾಗಿ ಬಳಸಿಕೊಳ್ಳದೆ ದುರುಪಯೋಗವಾಗಿದ್ದು, ಬಂದ ಅನುದಾನಕ್ಕೆ ಸರಿಯಾದ ಲೆಕ್ಕ ನೀಡದೆ ಲೋಪವೆಸಗಿದ್ದಾರೆ ಎಂದು ಆರೋಪಿಸಿದ ಅವರು, ಕರ್ನಾಟಕದಲ್ಲಿರುವ ಜನವಿರೋಧಿ ಸರ್ಕಾರವನ್ನು ಕಿತ್ತೋಗೆಯಲು ಪಣ ತೊಡಬೇಕೆಂದರು.
ಪಕ್ಷ ಸೇರ್ಪಡೆಗೊಂಡ ಕೆಜೆಪಿ ಮುಖಂಡ ಎ.ಎಸ್.ಎಸ್. ಆರಾಧ್ಯ ಮಾತನಾಡಿ, ಬಿಜೆಪಿಯಲ್ಲಿ ಆದಂತಹ ಕಚ್ಚಾಟ, ಭ್ರಷ್ಟಾಚಾರ, ಸ್ವಜನಪಕ್ಷಪಾತ ಸಹಿಸಲಿಕ್ಕೆ ಸಾಧ್ಯವಿಲ್ಲ. ಸರ್ಕಾರಿ ಇಲಾಖೆಯಲ್ಲಿ ಜವಾನನಿಂದಲೂ ಹಣ ವಸೂಲಿ ಮಾಡಿದ ಉದಾಹರಣೆ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎಂದು ಹೇಳಿದರು.
ಮುಖಂಡರ ಕೊರತೆ: ಪಕ್ಷಕ್ಕೆ ಸೇರ್ಪಡೆಗೊಂಡು ಮಾತನಾಡಿದ ಜಿಲ್ಲಾ ಕೆಜೆಪಿ ಮಹಿಳಾ ಘಟಕದ ಅಧ್ಯಕ್ಷೆ ಮಂಜುಳಮ್ಮ, ಕೆಜೆಪಿಯಲ್ಲಿ ತಮ್ಮನ್ನು ಗೌರವದಿಂದ ನಡೆಸಿಕೊಳ್ಳಲಿಲ್ಲ ಹಾಗೂ ಅಲ್ಲಿ ಮುಖಂಡರ ಕೊರತೆ ಇತ್ತು, ನಾವು ಪಕ್ಷ ಸೇರ್ಪಡೆಗೊಳ್ಳಲು ಶಾಂತೇಗೌಡರ ಮೇಲಿನ ಅಭಿಮಾನ ಕಾರಣವೆಂದರು.
ಕಾರ್ಯಕ್ರಮದಲ್ಲಿ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಕೆ.ಎಸ್. ಶಾಂತೇಗೌಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಎಲ್. ಮೂರ್ತಿ, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎ.ಎನ್. ಮಹೇಶ್, ಜಿಲ್ಲಾ ಕಾಂಗ್ರೆಸ್ ಮಹಾಪ್ರಧಾನ ಕಾರ್ಯದರ್ಶಿ ಕೆ. ಮಹಮದ್ ಹಾಗೂ ಉಪಾಧ್ಯಕ್ಷ ರಾಜಶೇಖರ್ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.