ಕಡೂರಿನಲ್ಲಿ ಕಾಂಗ್ರೆಸ್ ಗೆಲವು ಖಚಿತ: ವಿಶ್ವಾಸ
ಕಡೂರು: ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಲಿದ್ದು ಜೆಡಿಎಸ್, ಕೆಜೆಪಿ, ಬಿಜೆಪಿ ಪಕ್ಷಗಳು ಎರಡು ಮತ್ತು ಮೂರನೇ ಸ್ಥಾನಕ್ಕೆ ಪೈಪೋಟಿ ನಡೆಸಲಿವೆ ಎಂದು ಕಡೂರು ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಕೆ.ಎಸ್. ಆನಂದ್ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಳೆದ 5ವರ್ಷದಿಂದ ಬಿಜೆಪಿ ಸರ್ಕಾರದ ಭ್ರಷ್ಟಾಚಾರದಿಂದ ಬೇಸತ್ತು ಜನರು ಕಾಂಗ್ರೆಸ್ ಕಡೆ ಮುಖ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ. ಮಲ್ಲಿಕಾರ್ಜುನ್ರನ್ನು ಆಯ್ಕೆಮಾಡುವ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡಲಲಾಗುವುದು ಎಂದು ಹೇಳಿದರು.
ಡಿ.ಲಕ್ಷ್ಮಣ್ ಮಾತನಾಡಿ, ಕೆ.ಬಿ. ಮಲ್ಲಿಕಾರ್ಜುನ್ರ ವ್ಯಕ್ತಿತ್ವ ಕಾಂಗ್ರೆಸ್ ಗೆಲುವಿಗೆ ಕಾರಣವಾಗಲಿದೆ. ಬಿಜೆಪಿ ಶಾಸಕರು ಅಭಿವೃದ್ಧಿ ಕಡೆಗಣಿಸಿದ್ದಾರೆ. ಕ್ಷೇತ್ರಕ್ಕೆ ಆಗತ್ಯವಾಗಿರುವ ಶಾಶ್ವತ ಕುಡಿಯುವ ನೀರು ತರಲು ಕೆ.ಬಿ. ಮಲ್ಲಿಕಾರ್ಜುನ್ರಿಗೆ ಮತನೀಡಬೇಕು ಎಂದರು.
ಮಾಜಿ ಪುರಸಭಾಧ್ಯಕ್ಷ ಕೆ.ಜಿ. ಶ್ರೀನಿವಾಸಮೂರ್ತಿ ಮಾತನಾಡಿದರು. ಗೋಷ್ಠಿಯಲ್ಲಿ ಪುರಸಭಾ ಸದಸ್ಯ ಕೋಳಿ ಲೋಕೇಶ್, ಎನ್. ಬಶೀರ್ ಸಾಬ್, ಕೆ. ಎಂ. ಸೋಮಶೇಖರ್, ಎಂ. ಮಾದಪ್ಪ, ರೇಣುಕಾರಾಧ್ಯ, ಖಾದರ್, ರಿಯಾಜ್, ಕೆ.ಜಿ. ಲೋಕೇಶ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

