ಚಿಕ್ಕಮಗಳೂರು

ಮಾದರಿ ಕ್ಷೇತ್ರದ ಕನಸು: ರಾಜೇಂದ್ರ

Published On :

ನರಸಿಂಹರಾಜಪುರ: ಶೃಂಗೇರಿ ಕ್ಷೇತ್ರವನ್ನು ಅಭಿವೃದ್ಧಿಯಲ್ಲಿ ಮಾದರಿ ಕ್ಷೇತ್ರವನ್ನಾಗಿ ಮಾಡುವ ಆಸೆ ಹೊತ್ತು ಚುನಾವಣೆಗೆ ಸ್ಪರ್ಧಿಸಿರುವುದಾಗಿ ಶೃಂಗೇರಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ತಳಕಾನೆ ರಾಜೇಂದ್ರ ತಿಳಿಸಿದರು.
 ಸೋಮವಾರ ನಾಗರಮಕ್ಕಿಯಲ್ಲಿ ನಡೆದ ಜೆಡಿಎಸ್ ಪ್ರಚಾರ ಸಭೆಯಲ್ಲಿ ಮಾತನಾಡಿ, ಕಳೆದ 20 ವರ್ಷದಿಂದಲೂ ಶೃಂಗೇರಿ ಕ್ಷೇತ್ರದಲ್ಲಿ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಿದ ಎಚ್.ಟಿ. ರಾಜೇಂದ್ರರನ್ನು ವಿಧಾನ ಪರಿಷತ್ತಿಗೆ ಆಯ್ಕೆ ಮಾಡಬೇಕಾಗಿದೆ. ನನ್ನನ್ನು ಗೆಲ್ಲಿಸುವ ಮೂಲಕ ರೈತ ಪರವಾಗಿ ಹೋರಾಟ ಮಾಡುತ್ತಿರುವ ಎಚ್.ಡಿ. ಕುಮಾರಸ್ವಾಮಿ ಅವರ ಕೈ ಬಲಪಡಿಸಬೇಕಾಗಿದೆ ಎಂದು ಅವರು ಮನವಿ ಮಾಡಿದರು.
 ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಚ್.ಟಿ. ರಾಜೇಂದ್ರ ಮಾತನಾಡಿ, ಕಾಂಗ್ರೆಸ್ ಹಾಗೂ ಬಿಜೆಪಿ ರೈತರನ್ನು ಮರೆತಿವೆ. ರಾಷ್ಟ್ರೀಯ ಪಕ್ಷಗಳ ಮಲತಾಯಿ ಧೋರಣೆಯಿಂದಾಗಿ ತಮಿಳುನಾಡು, ಉತ್ತರ ಪ್ರದೇಶ, ಪ.ಬಂಗಾಳ ಮುಂತಾದ ರಾಜ್ಯಗಳಲ್ಲಿ ಪ್ರಾದೇಶಿಕ ಪಕ್ಷಗಳ ಉದಯವಾಯಿತು. ಕಾವೇರಿ ವಿಚಾರದಲ್ಲಿ ಕೇಂದ್ರ ಸರ್ಕಾರ ಕರ್ನಾಟಕದ ಹಿತ ಮರೆತು ತಮಿಳುನಾಡಿನ ಕಡೆಗೆ ವಾಲಿರುವುದಕ್ಕೆ ಆ ರಾಜ್ಯದ ಪ್ರಾದೇಶಿಕ ಪಕ್ಷಗಳೇ ಕಾರಣವಾಗಿದೆ. ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ಕೇಂದ್ರದ ಮಲತಾಯಿ ಧೋರಣೆ ವಿರೋದಿಸಲಿದ್ದೇವೆ ಎಂದು ತಿಳಿಸಿದರು. ಮ್ಯಾಮ್ಕೋಸ್ ಮಾಜಿ ನಿರ್ದೇಶಕ ಅರವಿಂದ್, ಹೂಸೂರು ಸುರೇಶ್, ಬೆಮ್ಮನೆ ಮೋಹನ್, ಎಚ್.ಜಿ. ಯೋಗೇಂದ್ರ,ಬಿ.ಟಿ. ರವಿ, ಗಣಪತಿ, ಎಚ್.ಡಿ. ನಾರಾಯಣ, ಸುಬೋದ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.