ನೀರಾವರಿಗಾಗಿ ಜೆಡಿಎಸ್ ಬೆಂಬಲಿಸಿ
ಕ.ಪ್ರ.ವಾರ್ತೆ, ಕಡೂರು, ಏ.30
ಜನಪರ ಆಡಳಿತ, ಕುಡಿಯುವ ನೀರು ಮತ್ತು ಕಡೂರು ತಾಲೂಕಿನ ರೈತರ ಜಮೀನಿಗೆ ನೀರೊದಗಿಸುವ ಯೋಜನೆಗಳ ಜಾರಿಯಾಗಲು ನಮ್ಮ ನಾಯಕ ವೈ.ಎಸ್.ವಿ. ದತ್ತ ಅವರಿಗೆ ಮತ ನೀಡಬೇಕು ಎಂದು ಜೆಡಿಎಸ್ ನಗರ ಘಟಕದ ಅಧ್ಯಕ್ಷ ಭಂಡಾರಿ ಶ್ರೀನಿವಾಸ್ ಹೇಳಿದರು.
ಅವರು ಕಡೂರಿನ ಹಳೇಪೇಟೆ, ಕೆ.ಎಲ್.ವಿ. ವೃತ್ತ, ಟಿ.ಬಿ.ರಸ್ತೆ, ಅಂಬೇಡ್ಕರ್ ನಗರ, ಬಸೇಶವರ ವೃತ್ತ ಸೇರಿದಂತೆ ಪಟ್ಟಣದ ಹಲವೆಡೆ ತಮ್ಮ ಬೆಂಬಲಿಗರೊಂದಿಗೆ ಮನೆ ಮನೆಗೆ ತೆರಳಿ ಮತಯಾಚಿಸಿ ಮಾತನಾಡಿದರು.
ಪ್ರೀತಿ ವಿಶ್ವಾಸ: ಕಡೂರು ವಿಧಾನಸಭಾ ಕ್ಷೇತ್ರದಲ್ಲಿ ಜನ ಸಾಮಾನ್ಯರಲ್ಲಿ ಸಾಮಾನ್ಯರಾಗಿರುವ ಜೆಡಿಎಸ್ ಅಭ್ಯರ್ಥಿ ವೈ.ಎಸ್.ವಿ. ದತ್ತ ಕಳೆದ 2007 ರಿಂದ ಕ್ಷೇತ್ರದಲ್ಲಿ ಎಲ್ಲ ವರ್ಗದ ಜನರ ಪ್ರೀತಿ ವಿಶ್ವಾಸ ಗಳಿಸಿ ಜಾತ್ಯತೀತತೆ ರಾಜಕಾರಣ ಮಾಡುತ್ತಾ ಸೇವೆ ಮಾಡುತ್ತಿದ್ದಾರೆ ಎಂದರು.
ತಮ್ಮ ವಿಪ ಸದಸ್ಯರ ಅವಧಿಯಲ್ಲಿ ಹಾಗೂ ಲೋಕಸಭಾ ಸದಸ್ಯರಾಗಿರುವ ಮಾಜಿ ಪ್ರಧಾನಿ ಎಚ್. ಡಿ.ದೇವೇಗೌಡರ ಲೋಕಸಭಾ ಸದಸ್ಯರ ನಿಧಿಯಿಂದ ಕಡೂರು ವಿಧಾನಸಭಾ ಕ್ಷೇತ್ರದ ಎಲ್ಲಾ ಗ್ರಾಮಗಳ ಅಭಿವೃದ್ಧಿ ಹಿತದೃಷ್ಟಿಯಿಂದ ಸಮುದಾಯ ಭವನ, ಶಾಲೆ, ಅಂಗನವಾಡಿ ಕಟ್ಟಡ, ಗ್ರಾಮೀಣ ರಸ್ತೆ ಸೇರಿದಂತೆ ಕೋಟ್ಯಂತರ ರು. ಅನುದಾನದಲ್ಲಿ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗಿದೆ ಎಂದರು.
ಮಾದರಿ ಕ್ಷೇತ್ರ: ಇದೀಗ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ದತ್ತ ಅವರು ಕಡೂರು ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡಲು ಕಂಕಣತೊಟ್ಟು ವಿಧಾನಸಭಾ ಚುನಾವಣಾ ಕಣಕ್ಕೆ ಇಳಿದಿದ್ದಾರೆ ಎಂದರು.
ಕಡೂರು ತಾಲೂಕಿನ ಹಲವು ದಶಕದಿಂದ ನೆನೆಗುದಿಗೆ ಬಿದ್ದಿರುವ ಹೆಬ್ಬೆ ಯೋಜನೆಯಿಂದ ಮದಗದಕೆರೆಗೆ ನೀರು ಹರಿಸುವ ಮತ್ತು ಆಮೆಗತಿಯಲ್ಲಿ ನಡೆಯುತ್ತಿರುವ ಕಡೂರು, ಬೀರೂರು ಪಟ್ಟಣಗಳ ಜನರಿಗೆ ಶಾಶ್ವತ ಕುಡಿಯುವ ನೀರು ಒದಗಿಸುವ ಭದ್ರಾ ಯೋಜನೆ ಕಾಮಗಾರಿ ಚುರುಕುಗೊಳಿಸಿ, ಎಲ್ಲಾ ಕ್ಷೇತ್ರಗಳನ್ನು ಅಭಿವೃದ್ಧಿಗೊಳಿಸಬೇಕು ಎನ್ನುವ ಅವರ ಆಶಯಕ್ಕೆ ಕಡೂರು ಪಟ್ಟಣ ಸೇರಿದಂತೆ ಕ್ಷೇತ್ರದ ಜನರು ಮತ ನೀಡಿ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.
ಜೆಡಿಎಸ್ ಮುಂಖಂಡ ಕೆ.ಎಚ್. ಲಕ್ಕಣ್ಣ, ಬಸಣ್ಣ, ಕೆ.ಎಸ್. ತಿಪ್ಪೇಶ್, ಮಂಜುನಾಥ್, ಎನ್. ಇಮಾಮ್, ಬಸವರಾಜು, ಕಾಂತರಾಜು ಮೊದಲಾದವರು ಉಪಸ್ಥಿತರಿದ್ದು ಮಾತನಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

