'ವಿಧ್ಯಾರ್ಥಿಗಳಲ್ಲಿ ಧನಾತ್ಮಕ ಚಿಂತನೆ ಅಗತ್ಯ'
ಕ.ಪ್ರ.ವಾರ್ತೆ, ನರಸಿಂಹರಾಜಪುರ, ಏ.30
ವಿದ್ಯಾರ್ಥಿಗಳು ಧನಾತ್ಮಕವಾಗಿ ಚಿಂತಿಸುವುದನ್ನು ಅಭ್ಯಾಸ ಮಾಡಿಕೊಳ್ಳಬೇಕು ಎಂದು ಸ.ಪ್ರ.ದ. ಕಾಲೇಜು ಪ್ರಾಂಶುಪಾಲ ಪ್ರೊ. ಕೆ. ಪೂರ್ಣೇಶ್ ತಿಳಿಸಿದರು.
ಅವರು ಮಂಗಳವಾರ ಸ.ಪ್ರ.ದ. ಕಾಲೇಜಿನಲ್ಲಿ ನಡೆದ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಏನೇ ಸಮಸ್ಯೆ ಬಂದರೂ ವಿದ್ಯಾರ್ಥಿಗಳು ದೈರ್ಯದಿಂದ ಎದುರಿಸಬೇಕು. ಸಮಸ್ಯೆ ಬಂದಾಗ ಅಂಜದೆ ದೃಢ ನಿರ್ಧಾರದಿಂದ ಎದುರಿಸಲು ಕಲಿಯಬೇಕು ಎಂದು ಸಲಹೆ ನೀಡಿದರು.
ಕಾಲೇಜಿನ ಕನ್ನಡ ಉಪನ್ಯಾಸಕ ಅಣ್ಣಪ್ಪ ಮಳೀಮಠ್ ಮಾತನಾಡಿ, ಕಲಿಕೆಯು ವಿದ್ಯಾರ್ಥಿಗಳನ್ನು ಮಾತ್ರ ಬೆಳೆಸುವುದಿಲ್ಲ. ಜೊತೆಗೆ ದೇಶವನ್ನೂ ಬೆಳೆಸುತ್ತದೆ. ವಿದ್ಯಾರ್ಥಿಗಳು ಪರಸ್ಪರ ಬಾಂಧವ್ಯ ವೃದ್ಧಿಸಿಕೊಂಡಂತೆ ಸಮಾಜದಲ್ಲಿ ಉತ್ತಮವಾಗಿ ಬದುಕುವುದು ಸಾಧ್ಯ ಎಂದರು.
ಕಡಾ.ಕೆ. ಉಮೇಶ್, ಗ್ರಂಥಪಾಲಕ ವಿಶ್ವನಾಥ, ಜಿನೀತ, ಸಜ್ಜನ್ ಉಪಸ್ಥಿತರಿದ್ದರು. ಅಂತಿಮ ವರ್ಷದ ವಿದ್ಯಾರ್ಥಿಗಳು ತಮ್ಮ ಅನಿಸಿಕೆ ವ್ಯಕ್ತಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

