ಅಭಿವೃದ್ಧಿಗೆ ಬಿಜೆಪಿ ಬೆಂಬಲಿಸಲು ಮನವಿ
ಶೃಂಗೇರಿ: ಕಳೆದ 5 ವರ್ಷದ ಆಳ್ವಿಕೆಯಲ್ಲಿ ಬಿಜೆಪಿ ಉತ್ತಮ, ಜನಪರ ಆಡಳಿತ ನೀಡಿದೆ. ಈ ಬಾರಿಯೂ ಜನರು ಅಭಿವೃದ್ಧಿಗಾಗಿ ಬಿಜೆಪಿಯನ್ನು ಬೆಂಬಲಿಸಬೇಕು ಎಂದು ಶೃಂಗೇರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ತಿಳಿಸಿದರು.
ಅವರು ತಾಲೂಕಿನ ನೆಮ್ಮಾರಿನಲ್ಲಿ ಚುನಾವಣಾ ಪ್ರಚಾರ ಭಾಷಣ ಮಾಡಿದರು. ವಿಪಕ್ಷಗಳು ಟೀಕೆ, ಆರೋಪಗಳಲ್ಲಿಯೇ ಕಾಲಹರಣ ಮಾಡಿದವು. ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಗಾಲು ಹಾಕಿತು. ಆದರೂ ಪಕ್ಷ ನಿರಂತರವಾಗಿ ಅಭಿವೃದ್ಧಿ ಕಾರ್ಯ ಮುಂದುವರೆಸಿತು ಎಂದರು.
ಜನ ಕಾಂಗ್ರೆಸ್, ಜೆಡಿಎಸ್ಗಳ ಆರೋಪ, ಅಪಪ್ರಚಾರಗಳಿಗೆ ಕಿವಿಗೊಡದೆ ಬಿಜೆಪಿಯನ್ನು ಬೆಂಬಲಿಸಬೇಕು. ಮುಂದಿನ 5 ವರ್ಷ ಆಡಳಿತ ನಡೆಸಲು ಅವಕಾಶ ಮಾಡಿಕೊಡಬೇಕು ಎಂದರು. ತಾಲೂಕು ಬಿಜೆಪಿ ಅಧ್ಯಕ್ಷ ಎ.ಎಸ್. ನಯನ, ರಂಗನಾಥ್, ನೀಲೇಶ್ ಮೊದಲಾದವರು ಇದ್ದರು.
ಇಂದು ನಗರಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ
ಚಿಕ್ಕಮಗಳೂರು: ಚುನಾವಣಾ ಪ್ರಚಾರಕ್ಕಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮೇ 1ರಂದು ಚಿಕ್ಕಮಗಳೂರು ನಗರಕ್ಕೆ ಆಗಮಿಸಲಿದ್ದಾರೆ.
ಇಲ್ಲಿನ ವಿಜಯಪುರ ಗಣಪತಿ ಪೆಂಡಾಲ್ ಆವರಣದಲ್ಲಿ ಮಧ್ಯಾಹ್ನ 2 ಗಂಟೆಗೆ ಜೆಡಿಎಸ್ ಅಭ್ಯರ್ಥಿ ಎಸ್.ಎಲ್. ಧರ್ಮೇಗೌಡರ ಪರ ಪ್ರಚಾರ ಭಾಷಣ ಮಾಡಲಿದ್ದಾರೆ ಎಂದು ಹೆಚ್.ಡಿ. ಕುಮಾರಸ್ವಾಮಿ ಅಭಿಮಾನಿಗಳ ಸಂಘದ ಜಿಲ್ಲಾಧ್ಯಕ್ಷ ಹೊಲದಗದ್ದೆ ಗಿರೀಶ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.ಬಹಿರಂಗ ಸಭೆಗೂ ಮುನ್ನ ನಗರದಲ್ಲಿ ಕುಮಾರಸ್ವಾಮಿ ಅವರು ಮತಯಾಚನೆ ಮಾಡಲಿದ್ದಾರೆ ಎಂದು ಹೇಳಿದ್ದಾರೆ.
ಜೆಡಿಎಸ್ ರೋಡ್ಶೋ
ತರೀಕೆರೆ: ಸಮೀಪದ ಲಕ್ಕವಳ್ಳಿಯಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿ ಟಿ.ಆರ್. ನಾಗರಾಜ್ ಅವರು ರೋಡ್ ಶೋ ಮೂಲಕ ಮತಯಾಚನೆ ಮಾಡಿದರು.
ರಾಜ್ಯ ಯುವ ಜನತಾ ದಳದ ಹಿರಿಯ ಉಪಾಧ್ಯಕ್ಷ ಲಕ್ಕವಳ್ಳಿ ಉಮಾಶಂಕರ್ ಮಾತನಾಡಿ, ಕುಮಾರಸ್ವಾಮಿ ಅವರ 20 ತಿಂಗಳ ಆಡಳಿತ, ಜನಪರ ಕಾರ್ಯಕ್ರಮಗಳು ಸಾಧನೆಯಾಗಿದೆ ಎಂದರು. ಪಕ್ಷದ ಅಭ್ಯರ್ಥಿ ಟಿ.ಆರ್. ನಾಗರಾಜ್ ಅವರಿಗೆ ಮತ ನೀಡಬೇಕೆಂದು ಮನವಿ ಮಾಡಿದರು. ಪಕ್ಷದ ಅಭ್ಯರ್ಥಿ ಟಿ.ಆರ್. ನಾಗರಾಜ್, ಮತ ನೀಡಿ ಬೆಂಬಲಿಸಬೇಕೆಂದು ಮನವಿ ಮಾಡಿದರು. ಲಕ್ಕವಳ್ಳಿ ಹೋಬಳಿ ಅಧ್ಯಕ್ಷ ಪಾಂಡುರಾವ್ ಜಾದವ್, ರಂಗೇನಹಳ್ಳಿ ಅಧ್ಯಕ್ಷ ದೇವೇಗೌಡರು, ಗಿರಿಜಮ್ಮ ನಾಗರಾಜ್, ಎಂ.ಜಿ. ಧರ್ಮೇಂದ್ರ, ಕೋಟೋಜಿರಾವ್ ಪರಮೇಶ್ವರ್ ಪಕ್ಷದ ಕಾರ್ಯಕರ್ತರು ರೋಡ್ ಶೋನಲ್ಲಿ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

