ಚಿಕ್ಕಮಗಳೂರು

ಅತಿವೃಷ್ಟಿ ಪ್ರದೇಶಕ್ಕೆ ಪರಿಹಾರ ನೀಡಿ: ಶಾಸಕ ಜೀವರಾಜ್ ಒತ್ತಾಯ

Published On :

ಕೊಪ್ಪ: ಶೃಂಗೇರಿ ಕ್ಷೇತ್ರ  ಸೇರಿದಂತೆ ರಾಜ್ಯದ ವಿವಿಧ ಭಾಗಳಲ್ಲಿ ಅತಿವೃಷ್ಟಿ ಸಂಭವಿಸಿದ ಪ್ರದೇಶಗಳಿಗೆ ರಾಜ್ಯ ಸರ್ಕಾರದಿಂದ ಪರಿಹಾರ ನೀಡದಿರುವುದು ವಿಷಾದನೀಯ ಎಂದು ಶಾಸಕ ಡಿ.ಎನ್. ಜೀವರಾಜ್ ಹೇಳಿದರು.
 ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅತಿವೃಷ್ಟಿಯಿಂದ ಶೃಂಗೇರಿ ಕ್ಷೇತ್ರದ 3 ತಾಲೂಕುಗಳ ಬಹುತೇಕ ರಸ್ತೆ ಭೂಕುಸಿತದಿಂದ ಹಾಳಗಿ ಜನ ಜೀವನ ಅಸ್ತವ್ಯಸ್ತವಾಗಿದೆ. ಅದ್ದರಿಂದ ರಸ್ತೆ ದುರಸ್ತಿಗೆ ತಕ್ಷಣದಲ್ಲಿ ಹಣ ಮಜೂರು ಮಾಡಬೇಕು ಎಂದು ಒತ್ತಾಯಿಸಿದರು.
 ಸಂಸದರು ಅತಿವೃಷ್ಟಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ, ರಾಜ್ಯ ಸರ್ಕಾರದಿಂದ ರೈತರಿಗೆ ಪರಿಹಾರ ಕೊಡಿಸುವುದಾಗಿ ಸುಳ್ಳು ಭರವಸೆ ನೀಡುತ್ತಾ ರೈತರಿಗೆ ಮಂಕುಬೂದಿ ಎರಚುತ್ತಿದ್ದಾರೆ ಎಂದು ದೂರಿದರು.
ವರ್ಗವಣೆ ದಂಧೆ: ಅಧಿಕಾರಿಗಳನ್ನು ವರ್ಗಾವಣೆ ಮಾಡಿಸಿಕೊಡುವ ದಂಧೆಯಲ್ಲಿ  ಕಾಂಗ್ರೆಸ್ ಮುಖಂಡರು ನಿರತರಾಗಿರುವುದರಿಂದ ಅಧಿಕಾರಿಗಳು ವರ್ಗಾವಣೆಗಾಗಿ ಅವರ ಬೆನ್ನಹಿಂದೆ ಬಿದ್ದಿದ್ದಾರೆ. ಆದ್ದರಿಂದ ಜನರ ಹಿತಕಾಯಬೇಕಾದ ಅಧಿಕಾರಿಗಳು ತಮ್ಮ ಹಿತಕಾಯ್ದುಕೊಳ್ಳುವಲ್ಲಿ ನಿರತರಾಗಿದ್ದಾರೆ ಎಂದು ಆರೋಪಿಸಿದರು.
 ಪರಿಹಾರಕ್ಕೆ ಮನವಿ
ಕೊಪ್ಪ: ಕೊಳೆರೋಗದಿಂದ ಸಂತ್ರಸ್ತ ಅಡಕೆ ಬೆಳೆಗಾರರಿಗೆ ಎಕರೆವಾರು ಪರಿಹಾರ ನೀಡಬೇಕೆಂದು ಒತ್ತಾಯಿಸಿ ತಾಲೂಕು ಬಿಜೆಪಿಯಿಂದ ತಹಸೀಲ್ದಾರ್ ಶ್ರೀಧರ್ ಮೂರ್ತಿ ಪಂಡಿತ್‌ಗೆ ಮನವಿ ಸಲ್ಲಿಸಿದರು.
 ಕಳೆದ 5 ದಶಕಗಳಿಂದ ಅಡಕೆ ತೋಟಗಳಿಗೆ ಹಳದಿ ಎಲೆ ರೋಗ ತಗುಲಿ ಇಳುವರಿಯಲ್ಲಿ ಗಣನೀಯ ಪ್ರಮಾಣದ ಇಳಿಕೆಯಾಗಿ ರೈತರ ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಅವರು ಮನೆಯಲ್ಲಿ ಹೇಳಿದ್ದಾರೆ. ಜಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎಸ್.ಎನ್. ರಾಮಸ್ವಾಮಿ, ತಾಲೂಕು ಅಧ್ಯಕ್ಷ ಬಿ.ಎನ್. ಭಾಸ್ಕರ್ ರಾವ್, ಜಿಪಂ ಸದಸ್ಯ ಕುಕ್ಕಡಿಗೆ ರವೀಂದ್ರ, ಸುಜೇತಾ ನರೇಂದ್ರ, ತಾಪಂ ಅಧ್ಯಕ್ಷೆ ಪದ್ಮಾವತಿ ರಮೇಶ್, ಪೂರ್ಣಚಂದ್ರ, ಬೆಳಗೋಳ ರಮೇಶ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.