ಆಶ್ರಯ ಮನೆ ಅನುದಾನ 1.20 ಲಕ್ಷಕ್ಕೆ ಏರಿಕೆ
ಕ.ಪ್ರ.ವಾರ್ತೆ ನರಸಿಂಹರಾಜಪುರ ಆ.3
ಹಿಂದೆ ಆಶ್ರಯ ಮನೆಗಳಿಗೆ 60 ಸಾವಿರ ರುಪಾಯಿ ನೀಡಲಾಗುತ್ತಿತ್ತು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 1.20 ಲಕ್ಷ ರುಪಾಯಿಗೆ ಏರಿಸಲಾಗಿದೆ ಎಂದು ರಾಜ್ಯ ಮೀನುಗಾರಿಕೆ ಸಚಿವ ಅಭಯ ಚಂದ್ರ ಜೈನ್‌ತಿಳಿಸಿದರು.
ಶನಿವಾರ ಪಟ್ಟಣದ ಅಂಬೇಡ್ಕರ್ ನಗರದಲ್ಲಿ ಗೋಡೆ ಕುಸಿತದಿಂದ ಮೃತಪಟ್ಟ ಪಾಪಯ್ಯ ಅವರ ಕುಟಂಬಕ್ಕೆ ಸಾಂತ್ವಾನ ಹೇಳಿ, ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಸರ್ಕಾರ ತಕ್ಷಣ ಪ್ರಕೃತಿ ವಿಕೋಪ ಪರಿಹಾರ ನಿಧಿಯಿಂದ 1.50 ಲಕ್ಷ ರುಪಾಯಿ ಪರಿಹಾರ ನೀಡಲಾಗಿದೆ. ಅಂಬೇಡ್ಕರ್ ನಗರದಲ್ಲಿ 80 ಕ್ಕೂ ಹೆಚ್ಚು ಮನೆಗಳಿಗೆ ಹಕ್ಕು ಪತ್ರ ಇಲ್ಲ ಎಂದು ತಿಳಿದು ಬಂದಿದೆ.
ಆಶ್ರಯ ಯೋಜನೆಯಡಿ ಮನೆಗಳನ್ನು ಪುನರ್ ನಿರ್ಮಾಣ ಮಾಡಲಾಗುವುದು ಎಂದು ಭರವಸೆ ನೀಡಿದರು. ಸರ್ಕಾರಿ ಜಮೀನಿನಲ್ಲಿ ಮನೆ ಕಟ್ಟಿಕೊಂಡವರಿಗೆ ಆ ಜಾಗವನ್ನು ಮಂಜೂರು ಮಾಡಲು ಸರ್ಕಾರ ನಿರ್ಧರಿಸಿದೆ. ಸರ್ಕಾರದ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲಪಿಸಬೇಕಾದ ಜವಬ್ದಾರಿಯನ್ನು ಗ್ರಾಪಂಗಳು ನೋಡಿಕೊಳ್ಳಬೇಕಾಗಿದೆ. ಈ ಬಗ್ಗೆ ಗ್ರಾಪಂ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದರು.
ಸರ್ಕಾರ 1 ರುಪಾಯಿಗೆ ಅಕ್ಕಿ ಕೊಡುವ ಯೋಜನೆ, ಬಡವರಿಗೆ ಮನೆ ನೀಡುವ ಯೋಜನೆ ಪಕ್ಷದ ಪ್ರಣಾಳಿಕೆಯಲ್ಲೇ ಘೋಷಣೆ ಮಾಡಲಾಗಿತ್ತು. ಇದನ್ನು ಸರ್ಕಾರ ಆಧ್ಯತೆ ಮೇಲೆ ಅನುಷ್ಠಾನಕ್ಕೆ ತರುತ್ತಿದೆ. ಸರ್ಕಾರಿ ಪದವಿಪೂರ್ವ ಕಾಲೇಜಿನ ಕೆಲವು ಕೊಠಡಿಗಳು ಮಳೆಗಾಲದಲ್ಲಿ ಸೋರುತ್ತಿದೆ ಎಂಬ ಪ್ರಶ್ನೆಗೆ, ರಾಜ್ಯ ಶಿಕ್ಷಣ ಸಚಿವರು ಶಾಲಾ ಕಟ್ಟಡಗಳಿಗೆ ಹಣ ಬಿಡುಗಡೆ ಮಾಡಲಿದ್ದಾರೆ. ಸರ್ವ ಶಿಕ್ಷಣ ಅಭಿಯಾನ ಯೋಜನೆಯಡಿ ಶಾಲಾ ಕಟ್ಟಡಗಳಿಗೆ ಕಾಯಕಲ್ಪ ಮಾಡಲಾಗುತ್ತದೆ ಎಂದು ತಿಳಿಸಿದರು.
ಅರಣ್ಯ ಒತ್ತುವರಿ ಸಮಸ್ಯೆ ಬಗ್ಗೆ ವಿಧಾನ ಸಭೆಯಲ್ಲಿ ಚರ್ಚೆ ನಡೆದಿದೆ. ಅರಣ್ಯ ಸಚಿವರು ಬಗರ್ ಹುಕಂ ಸಮಸ್ಯೆ ಬಗ್ಗೆ ಗಂಬೀರ ಚಿಂತನೆ ನಡೆಸಿದ್ದಾರೆ. ಮುಂದಿನ ದಿನಗಳಲ್ಲಿ ಸರ್ಕಾರ ಸಮಸ್ಯೆ ಬಗೆ ಹರಿಸಲಿದೆ ಎಂದರು.
ಈ ಸಂದರ್ಭದಲ್ಲಿ ಶಾಸಕ ಡಿ.ಎನ್. ಜೀವರಾಜ್, ಜಿಪಂ ಮಾಜಿ ಅಧ್ಯಕ್ಷ ಟಿ.ಡಿ. ರಾಜೇಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ಕೆ.ಪಿ. ಅಂಶುಮಂತ್ ಇದ್ದರು.
ಇದಕ್ಕೂ ಮೊದಲು ಸಚಿವರು ಸಿಂಹನಗದ್ದೆ ಬಸ್ತಿಮಠಕ್ಕೆ ಬೇಟಿ ನೀಡಿ ದೇವಿಯ ದರ್ಶನ ಪಡೆದರು.ನಂತರ ಬಸ್ತಿಮಠ ಲಕ್ಷ್ಮೀಸೇನ ಭಟ್ಟಾರಕ ಸ್ವಾಮೀಜಿಗಳನ್ನು ಭೇಟಿ ಮಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

