ಚಿಕ್ಕಮಗಳೂರು

ಕ್ಷೀರಭಾಗ್ಯ ಉತ್ತಮ ಕಾರ್ಯಕ್ರಮ: ಸುಜಾತ

Published On :

ನರಸಿಂಹರಾಜಪುರ: ಬಿಸಿಯೂಟದ ಜೊತೆಗೆ ಹಾಲು ವಿತರಣೆ ಮಾಡುವ ಕಾರ್ಯಕ್ರಮವು ಉತ್ತಮ ಕಾರ್ಯಕ್ರಮವಾಗಿದೆ ಎಂದು ಜಿಪಂ ಉಪಾಧ್ಯಕ್ಷೆ ಸುಜಾತ ಮೆಚ್ಚುಗೆ ವ್ಯಕ್ತಪಡಿಸಿದರು.
ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢ ಶಾಲೆಯ ಆವರಣದಲ್ಲಿ ನಡೆದ ಕ್ಷೀರ ಭಾಗ್ಯ ಯೋಜನೆ,ಅಂಗವಿಕಲ ಮಕ್ಕಳ ಉಚಿತ ತಪಾಸಣಾ ಶಿಬಿರ, ಸುವರ್ಣ ಆರೋಗ್ಯ ಚೈತನ್ಯ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎನ್. ರಮೇಶ್ ಪ್ರಾಸ್ತಾವಿಕವಾಗಿ ಮಾತನಾಡಿ, ತಾಲೂಕಿನ 8634 ಮಕ್ಕಳಿಗೆ ವಾರದಲ್ಲಿ ಮೂರು ದಿನ ಪ್ರತಿ ವಿದ್ಯಾರ್ಥಿಗೆ 150 ಮಿ.ಲೀ ಹಾಲನ್ನು ನೀಡಲಾಗುತ್ತದೆ. 6 ತಿಂಗಳಿಂದ 6 ವರ್ಷದವರೆಗಿನ ಮಗುವಿಗೆ ಅಂಗನವಾಡಿ ಕೇಂದ್ರದಲ್ಲಿ ಹಾಗೂ 3 ವರ್ಷದ ಮಕ್ಕಳಿಗೆ ಮನೆಗೇ ಹಾಲು ವಿತರಿಸಲಾಗುತ್ತದೆ ಎಂದು ತಿಳಿಸಿದರು. ಅಧ್ಯಕ್ಷತೆಯನ್ನು ತಾಪಂ ಅಧ್ಯಕ್ಷ ಜೆ.ಜಿ. ನಾಗರಾಜ್ ವಹಿಸಿದ್ದರು. ಹುಬ್ಬಳ್ಳಿ ಮನೋವಿಕಾಸ್ ಸಂಸ್ಥೆಯ ಡಾ. ಹಿರೇಮಠ್, ಡಾ. ಶೀಮಾ, ಜ್ಯೋತಿ ಲಕ್ಷ್ಮಿ, ಗೌಸ್ ಮೊಹಿದ್ದೀನ್, ಡಿ. ರಾಜಪ್ಪ, ಮಾಳಮ್ಮನವರ್, ಕೃಷ್ಣ, ಕೆ. ಮೌನೇಶ್ವರಾಚಾರ್, ಎಚ್. ಕೃಷ್ಣಮೂರ್ತಿ, ಪುಟ್ಟಯ್ಯ, ಎಂ. ಪ್ರಕಾಶ್ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.