ಚಿಕ್ಕಮಗಳೂರು

ಸುದ್ದಿ ಸಂಕ್ಷೇಪ

Published On :

8 ರಂದು ಕ್ಯಾನ್ಸರ್ ತಪಾಸಣಾ ಶಿಬಿರ
ಚಿಕ್ಕಮಗಳೂರು: ಮಧುಮೇಹ, ಕ್ಯಾನ್ಸರ್, ಹೃದಯ ಸಂಬಂಧಿತ (ಚಿವಿಡಿ) ಹಾಗೂ ಪಾರ್ಶ್ವವಾಯು ರೋಗಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕಾರ್ಯಕ್ರಮ ಹಾಗೂ ಮಲ್ನಾಡ್ ಕ್ಯಾನ್ಸರ್ ಆಸ್ಪತ್ರೆಯ ಸಂಯುಕ್ತಾಶ್ರಯದಲ್ಲಿ ತಜ್ಞ ವೈದ್ಯರಿಂದ ಉಚಿತ ಕ್ಯಾನ್ಸರ್ ರೋಗ ಪತ್ತೆ ಹಚ್ಚುವ ಹಾಗೂ ಸಲಹಾ ಶಿಬಿರವನ್ನು ಆ. 8ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆವರೆಗೆ ತರೀಕೆರೆ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾಗಿದೆ.
ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಹೆಚ್ಚಿನ  ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಲ್ಯಾಣಾಧಿಕಾರಿಗಳು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ, ಚಿಕ್ಕಮಗಳೂರು ಇವರನ್ನು ಸಂಪರ್ಕಿಸಿ.
ನಾಳೆ ತರೀಕೆರೆ ತಾಪಂ ಕೆಡಿಪಿ ಸಭೆ
ತರೀಕೆರೆ ತಾಲೂಕು ಪಂಚಾಯಿತಿ ಕೆಡಿಪಿ ಸಭೆಯು ಆ.5ರಂದು ಮಧ್ಯಾಹ್ನ 2.30ಕ್ಕೆ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಅಧ್ಯಕ್ಷೆ ಶಾಂತ ಗುರುಮೂರ್ತಿ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಸನ್ಮಾನ ಕಡಿಮೆ ಮಾಡಿ: ಕಾಗೋಡು
ಶಿವಮೊಗ್ಗ: ಶಾಸಕರಿಗೆ ಅದಷ್ಟು ಸನ್ಮಾನ ಮಾಡುವುದನ್ನು ಸಂಘ, ಸಂಸ್ಥೆಗಳು ಕಡಿಮೆ ಮಾಡಬೇಕು. ಸನ್ಮಾನ ಮಾಡುವುದರಿಂದ ಶಾಸಕ ಸೋಮಾರಿ ಆಗುತ್ತಾನೆ. ವಿಧಾನಸಭೆಗೆ ಬಂದರೆ ಕುಳಿತು ನಿದ್ದೆ ಮಾಡುತ್ತಾನೆ. ಅಲ್ಲದೇ ನಾನು ಸಭಾಧ್ಯಕ್ಷ ಆದ ನಂತರ ಸಭೆಯಲ್ಲಿ ಇದುವರೆಗೂ ರಾಜ್ಯದ 224 ವಿಧಾನಸಭಾ ಸದಸ್ಯರನ್ನು ನೋಡೇ ಇಲ್ಲ ಎಂದು ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಅಸಮಾಧಾನ ವ್ಯಕ್ತಪಡಿಸಿದರು. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘದ ಸಮುದಾಯ ಭವನದಲ್ಲಿ ಶನಿವಾರ ಆಯೋಜಿಸಿದ್ದ ಸಂಘಟನಾ ಸಭೆ ಮತ್ತು ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.