ಚಿಕ್ಕಮಗಳೂರು

ತೋಟಗಾರಿಕಾ ರೈತ ಪ್ರಶಸ್ತಿಗೆ ಅರ್ಜಿ ಆಹ್ವಾನ

Published On :

ಮೂಡಿಗೆರೆ: ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದಲ್ಲಿ ನಡೆಯಲಿರುವ ಪ್ರಸ್ತುತ ಸಾಲಿನ ಕೃಷಿಮೇಳದ ಅಂಗವಾಗಿ ಡಾ.ಎಂ.ಎಚ್. ಮರಿಗೌಡ ರಾಜ್ಯಮಟ್ಟದ ಅತ್ಯುತ್ತಮ ತೋಟಗಾರಿಕಾ ರೈತ ಪ್ರಶಸ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.  
ವೈಜ್ಞಾನಿಕವಾಗಿ, ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ತೋಟಗಾರಿಕಾ ಕೃಷಿ ಮಾಡುತ್ತಿರುವ ಆಸಕ್ತ ರೈತ ಮತ್ತು ರೈತ ಮಹಿಳೆಯರು ಅರ್ಜಿಯನ್ನು ಕಾರ್ಯಕ್ರಮ ಸಂಯೋಜಕರು, ಕೃಷಿ ವಿಜ್ಞಾನ ಕೇಂದ್ರ, ಹ್ಯಾಂಡ್ ಪೋಸ್ಟ್, ಮೂಡಿಗೆರೆಯಲ್ಲಿ ಪಡೆಯಬಹುದಾಗಿದೆ.  ಅರ್ಜಿ ಸಲ್ಲಿಸಲು ಸೆ.25 ಕೊನೆಯ ದಿನ. ಹೆಚ್ಚಿನ ವಿವರಗಳಿಗೆ ಮೂಡಿಗೆರೆ ಕೃಷಿ ವಿಜ್ಞಾನ ಕೇಂದ್ರದಿಂದ ಪಡೆಯಬಹುದಾಗಿದೆ. ದೂರವಾಣಿ ಸಂಖ್ಯೆ 08263-228198 ಗೆ ಸಂಪರ್ಕಿಸಲು ಸಂಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿದ್ಯುತ್ ತಗುಲಿ ವಿದ್ಯಾರ್ಥಿ ಸಾವು
ಸೊರಬ: ವಿದ್ಯುತ್ ತಂತಿ ತಗುಲಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಅನವಟ್ಟಿಯಲ್ಲಿ ಭಾನುವಾರ ನಡೆದಿದೆ. ಹರೀಶ್(21) ಮೃತಪಟ್ಟ ವಿದ್ಯಾರ್ಥಿ. ಅನವಟ್ಟಿಯ ದುರ್ಗಾಂಬ ದೇವಾಲಯದ ಬಳಿ ಇರುವ ಹೊಲಕ್ಕೆ ತೆರಳುತ್ತಿದ್ದಾಗ ವಿದ್ಯುತ್ ತಂತಿ ತಗುಲಿ ವಿದ್ಯಾರ್ಥಿ ಸಾವನಪ್ಪಿದ್ದಾನೆ. ಮಳೆ ಗಾಳಿಗೆ ವಿದ್ಯುತ್ ತಂತಿ ಹರಿದು ಬಿದ್ದಿದ್ದು, ಇದನ್ನು ಗಮನಿಸದ ವಿದ್ಯಾರ್ಥಿ ಆಕಸ್ಮಿಕವಾಗಿ ತಂತಿ ಮುಟ್ಟಿದ್ದರಿಂದ ಘಟನೆ ನಡೆದಿದೆ. ಈ ವೇಳೆ ಹರೀಶ್‌ನ ಸಹೋದರಿನಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅನವಟ್ಟಿ ಠಾಣೆಯಲ್ಲಿ ದಾಖಲಾಗಿದೆ.
ಕಾರಿಗೆ ಕಲ್ಲು
ಶಿವಮೊಗ್ಗ: ಗಾಂಧಿಬಜಾರ್‌ನ ಸಿದ್ದಯ್ಯ ರಸ್ತೆಯಲ್ಲಿನ ಮನೆ ಮುಂದೆ ನಿಲ್ಲಿಸಿದ್ದ ಕಾರುಗಳಿಗೆ ಕಿಡಿಗೇಡಿಗಳು ಶನಿವಾರ ರಾತ್ರಿ ಕಲ್ಲು ಹೊಡೆದಿದ್ದು, ಪರಿಣಾಮ ಭಾನುವಾರ ಈ ರಸ್ತೆಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು.
ಕಳೆದ ಒಂದು ತಿಂಗಳ ಹಿಂದೆ ಇದೇ ರಸ್ತೆಯಲ್ಲಿ ದುಷ್ಕರ್ಮಿಗಳು ಬೈಕ್‌ವೊಂದಕ್ಕೆ ಬೆಂಕಿ ಹಚ್ಚಿದ್ದರು. ಇದೀಗ ಮತ್ತೆ ಅದೇ ರೀತಿಯ ಘಟನೆ ನಡೆದಿರುವುದು ಸ್ಥಳೀಯರನ್ನು ಆತಂಕಕ್ಕಿಡು ಮಾಡಿದ್ದು, ಕಿಡಿಗೇಡಿಗಳನ್ನು ಬಂಧಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ದೊಡ್ಡಪೇಟೆ ಠಾಣೆ ಪೊಲೀಸರು ಈ ಪ್ರದೇಶದಲ್ಲಿ ಪೊಲೀಸ್ ಬಂದೋಬಸ್ತ್ ನಿಯೋಜಿಸಿದ್ದಾರೆ.
ಸೆಲೂನ್‌ಗೆ ಹಾನಿ
ಹೊಸನಗರ: ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಗೆ ತಾಲೂಕಿನ ಗರ್ತಿಕೆರೆಯಲ್ಲಿ ಸೆಲೂನ್‌ವೊಂದರ ಗೋಡೆ ಕುಸಿದ ವರದಿಯಾಗಿದೆ. ಧನಂಜಯ್ ಭಂಡಾರಿಗೆ ಸೇರಿದ ಸೆಲೂನ್ ಆಗಿದ್ದು, ಗೋಡೆ ಸಂಪೂರ್ಣವಾಗಿ ಕುಸಿದ ಪರಿಣಾಮ ಕೆಲಸ ಮಾಡಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.