ಸ್ಪಂಧಿಸುವ ಗುಣವುಳ್ಳವರು ನಾಯಕರಾಗಲು ಸಾಧ್ಯ
ಚಿಕ್ಕಮಗಳೂರು: ಶಿಕ್ಷಕರ ಸಮಸ್ಯೆಗಳನ್ನು ಆಲಿಸಿ ಅವುಗಳಿಗೆ ಸ್ಪಂಧಿಸುವ ಗುಣವುಳ್ಳವರು ಸಂಘ ಸಂಸ್ಥೆಗಳ ಉತ್ತಮ ನಾಯಕರಾಗಲು ಸಾಧ್ಯ ಎಂದು ಪದೋನ್ನತ ಪೌಢಶಾಲಾ ಸಹ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಕುಂದೂರು ಅಶೋಕ್ ಹೇಳಿದ್ದಾರೆ.
ಇಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಚಿಕ್ಕಮಗಳೂರಿನ ಕೆ.ಎನ್. ಮಂಜುನಾಥ್ ಮತ್ತು ತರೀಕೆರೆಯ ಈಶ್ವರ ಅವರನ್ನು ಅಭಿನಂದಿಸಿ ಮಾತನಾಡಿದ ಅವರು, ಬಡ್ತಿ ಶಿಕ್ಷಕರು ಮತ್ತು ನೌಕರರ ಸಮಸೈಗೆ ಸ್ಪಂದಿಸಲು ಸದಾ ಸಿದ್ಧವಾಗಿರಬೇಕು, ಅಲ್ಲದೇ ಇದೇ ಸಂದರ್ಭದಲ್ಲಿ ಹೆಚ್ಚುವರಿ ಹುದ್ದೆ ಸ್ಥಳಾಂತರ ಪ್ರಕ್ರಿಯೆಯನ್ನು ಶೈಶಕ್ಷಣಿಕ ವರ್ಷದ ಮಧ್ಯಾವಧಿಯಲ್ಲಿ ಮಾಡಿದರೆ ನೂರಾರು ಶಿಕ್ಷಕರಿಗೆ ಅನಾನುಕೂಲವಾಗುತ್ತದೆ ಎಂಬುದನ್ನು ಸರ್ಕಾರ ಹಾಗೂ ಇಲಾಖೆಯ ಗಮನಕ್ಕೆ ತರುವುದಾಗಿ ತಿಳಿಸಿದರು.
ಜಿಲ್ಲಾ ಸಂಘದ ಸಿ.ಪಿ. ಕೃಷ್ಣೇಗೌಡ ಅಧ್ಯಕ್ಷತೆ ವಹಿಸಿ ಮಾತನಾಡಿ, ನಮ್ಮ ಸಮಸ್ಯೆಗಳು ಬೇಡಿಕೆಗಳು ಸಾಕಷ್ಟಿವೆ. ಅವುಗಳನ್ನು ಬಗೆಹರಿಸಲು ಹೋರಾಟ ನಡೆಸಬೇಕಾಗಿದೆ ಎಂದರು. ಕಾರ್ಯಕ್ರಮದಲ್ಲಿ ಚಿಕ್ಕಮಗಳೂರು ತಾಲ್ಲೂಕು ಅಧ್ಯಕ್ಷ ಸಿ.ಎಸ್. ಸುರೇಶ್, ಮೂಡಿಗೆರೆ ತಾಲೂಕು ಅಧ್ಯಕ್ಷ ಶಾಂತಕುಮಾರ್, ಜಿಲ್ಲಾ ಖಚಾಂಚಿ ಕಾಂತರಾಜ್ ಹಾಗೂ ಜಿಲ್ಲಾ ಕಾರ್ಯದರ್ಶಿ ಸಿದ್ಧಮೂರ್ತಿ ಉಪಸ್ಥಿತರಿದ್ದರು. ಶಿಕ್ಷಕ ಸೋಮಶೇಖರ್ ಸ್ವಾಗತಿಸಿದರು, ಪ್ರಸನ್ನಕುಮಾರ್ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

