ಚಿಕ್ಕಮಗಳೂರು

ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ

Published On :

ಶೃಂಗೇರಿ: ತಾಲೂಕಿನ ಕೂತಗೋಡು ಪಂಚಾಯಿತಿ ಕುಂಚೇಬೈಲು ಬಳಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ.
 ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ ಹತ್ತನೆ ತರಗತಿ ವ್ಯಾಸಂಗ ಮಾಡುತ್ತಿದ್ದ ಪುನರ್ವಸು(16)ಸಾವಿಗೆ ಶರಣಾದ ದುರ್ದೈವಿ. ಬಳ್ಳಾರಿ ಮೂಲದ ಈಕೆ ಕುಂಚೇಬೈಲಿನ ತನ್ನ ಸಂಬಂಧಿಗಳ ಮನೆಯಲ್ಲಿ ಕಳೆದೆರೆಡು ವರ್ಷಗಳಿಂದ ಇದ್ದು ವ್ಯಾಸಾಂಗ ನಡೆಸುತ್ತಿದ್ದಳು. ಮಂಗಳವಾರ ಬೆಳಿಗ್ಗೆ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದು, ಸಾವಿಗೆ ಕಾರಣ ತಿಳಿದು ಬಂದಿಲ್ಲ.ಪೋಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಅಪಘಾತ; ವ್ಯಕ್ತಿ ಸಾವು
ಮೂಡಿಗೆರೆ: ತಿರುವೊಂದರಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಚಾಲಕ ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ತಾಲೂಕಿನ ಭೂತನಕಾಡಿನಿಂದ ವರದಿಯಾಗಿದೆ.
ಮಿಥುನ್(26) ಮೃತಪಟ್ಟ ದುರ್ದೈವಿಯಾಗಿದ್ದು, ಭೂತನಕಾಡಿನ ತಿರುವಿನಲ್ಲಿ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮಿಥುನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಅವರ ಜೊತೆಯಲ್ಲಿದ್ದ ಮುರುಗೇಶ್ ಎಂಬವರಿಗೆ ಗಾಯಗಳಾಗಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕಳುಹಿಸಲಾಗಿದೆ.
ಅಕ್ರಮ ಮರಳು ವಶ
ಮೂಡಿಗೆರೆ: ತಾಲೂಕಿನ ಕೋಳೂರು ಗ್ರಾಮದ ಮನೆಯೊಂದರ ಅಂಗಳದಲ್ಲಿ ಅಕ್ರಮವಾಗಿ ದಾಸ್ತನು ಮಾಡಿದ್ದ ಮರಳನ್ನು ಕಂದಾಯ ಇಲಾಖೆ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿರುವ ಪ್ರಕರಣ ವರದಿಯಾಗಿದೆ.
 ಕೋಳೂರು ಗ್ರಾಮದ ಗೋಪಾಲಗೌಡ ಎಂಬವರ ಮನೆಯ ಅಂಗಳದಲ್ಲಿ 15 ಲೋಡ್‌ಗೂ ಅಧಿಕ ಮರಳನ್ನು ಅಕ್ರಮವಾಗಿ ದಾಸ್ತಾನು ಮಾಡಿದ್ದಾರೆಂಬ ಖಚಿತ ವರ್ತಮಾನದ ಮೇರೆಗೆ. ತಹಸೀಲ್ದಾರ್ ಎ.ವಿ. ರುದ್ರಾಪ್ಪಾಜೀರಾವ್ ಮಾರ್ಗದರ್ಶನದಲ್ಲಿ ಬಣಕಲ್ ರಾಜಸ್ವ ನಿರೀಕ್ಷಕ ಎಂ. ಗಂಗಾಧರ್ ತಂಡ ಮರಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಬೈಕ್ ಕಳವು: ದಂಡ
ಚಿಕ್ಕಮಗಳೂರು: ಬೈಕ್ ಕಳ್ಳತನ ಮಾಡಿದ ಆರೋಪಿಗೆ ಹಿರಿಯ ಸಿವಿಲ್ ನ್ಯಾಯಾಲಯ ದಂಡ ವಿಧಿಸಿ ತೀರ್ಪು ನೀಡಿದೆ. ಆರೋಪಿ ಗಿರೀಶನು ನಗರದ ಕೆ.ಎಂ. ರಸ್ತೆಯ ಎ.ಬಿ.ಸಿ. ಕಾಫಿ ಕ್ಯೂರಿಂಗ್ ಮುಂಭಾಗದ ಗೇಟ್ ಪಕ್ಕದಲ್ಲಿ ನಿಲ್ಲಿಸಿದ್ದ ಹಿರೋಹೊಂಡಾ ಬೈಕ್‌ವನ್ನು ನಕಲಿ ಕೀ ಬಳಿಸಿ ಕಳ್ಳತನ ಮಾಡಿದ್ದ ಹಿನ್ನೆಲೆಯಲ್ಲಿ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದರು.  ಪ್ರಕರಣದ ವಿಚಾರಣೆ ನಡೆಸಿದ ಹಿರಿಯ ಸಿವಿಲ್  ನ್ಯಾಯಾಲಯದ ನ್ಯಾ.ಎಂ. ಮಹದೇವಯ್ಯ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿ ಗಿರೀಶನಿಗೆ 3 ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಸರ್ಕಾರದ ಪರ ಸರ್ಕಾರಿ ಅಭಿಯೋಜಕಿ ಸಾವಿತ್ರಿ ಪ್ರಕರಣ ನಡೆಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.