ಪ್ಲಾಸ್ಟಿಕ್ ನಿರ್ಮೂಲನೆ ಅರಿವು ಕಾರ್ಯಕ್ರಮ
ನರಸಿಂಹರಾಜಪುರ: ಪ್ಲಾಸ್ಟಿಕ್ನಿಂದ ಆಗುವ ಅನಾಹುತಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವುದು ಅವಶ್ಯಕವಾಗಿದೆ ಎಂದು ಹೊನ್ನೇಕೊಡಿಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಎಂ.ಎಂ. ವೀಣಾ ಕುಮಾರಿ ತಿಳಿಸಿದರು.
ಹೊನ್ನೇಕೊಡಿಗೆ ಗ್ರಾಮದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜ ಕಾರ್ಯ ವಿಭಾಗದ ಪ್ರತಿ ಧ್ವನಿ ಸಂಸ್ಥೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ಲಾಸ್ಟಿಕ್ ನಿರ್ಮೂಲನಾ ಅರಿವು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.ಕಾಲೇಜಿನ ವಿಜ್ಞಾನ ಶಿಕ್ಷಕ ಸದಾನಂದ ಮಾತನಾಡಿ, ಕಾಲೇಜು ವಿದ್ಯಾರ್ಥಿಗಳು ಪ್ರತಿಧ್ವನಿ ಎಂಬ ಸಂಸ್ಥೆ ಹುಟ್ಟು ಹಾಕಿ ಗ್ರಾಮೀಣ ಪ್ರದೇಶದಲ್ಲಿ ಪ್ಲಾಸ್ಟಿಕ್ ನಿರ್ಮೂಲನೆ ಬಗ್ಗೆ ಅರಿವು ಮೂಡಿಸುತ್ತಿರುವುದು ಶ್ಲಾಘನೀಯ ಎಂದರು.
ಪ್ರತಿಧ್ವನಿ ಸಂಸ್ಥೆಯ ಸಹ ಕಾರ್ಯದರ್ಶಿ ಎಂವಿ. ಗೀತಾ ಪ್ಲಾಸ್ಟಿಕ್ ಬಳಕೆಯಿಂದ ಪರಿಸರದ ಮೇಲೆ ಆಗುವ ಹಾನಿ ಹಾಗೂ ಅದರ ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಪ್ರತಿಧ್ವನಿ ಸಂಸ್ಥೆಯ ಅಧ್ಯಕ್ಷ ಎಂ.ಪಿ. ಪ್ರದೀಪ್ ಮಾತನಾಡಿದರು.
ಸಭೆಯಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಜೆ.ಟಿ. ಸಂಪತ್, ಶಿಕ್ಷಕರಾದ ಎಚ್. ರಾಜಪ್ಪ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

