ಚಿಕ್ಕಮಗಳೂರು

ಬಿಸಿಯೂಟ ಕೊಠಡಿಗೆ ಶಂಕುಸ್ಥಾಪನೆ

Published On :

ಕ.ಪ್ರ.ವಾರ್ತೆ, ಬೀರೂರು,  ಆ.6
ಮಕ್ಕಳ ಶೈಕ್ಷಣಿಕ ಪ್ರಗತಿ ಜೊತೆಗೆ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಸರ್ಕಾರ ಅಕ್ಷರ ದಾಸೋಹ ಕಾರ್ಯಕ್ರಮ ರೂಪಿಸಿದೆ ಎಂದು ಶಾಸಕ ವೈ.ಎಸ್.ವಿ. ದತ್ತ ತಿಳಿಸಿದರು.
ಪಟ್ಟಣದ ಕ್ರಮುಖ ಶಾಲೆಯಲ್ಲಿ 4.21 ಲಕ್ಷ ವೆಚ್ಚದ ಅಕ್ಷರದಾಸೋಹ ಕೊಠಡಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ, ಕ್ಷೇತ್ರದ ಅಭಿವೃದ್ಧಿಗೆ ಅದ್ಯತೆ ನೀಡಿ ಮತದಾರರಿಗೆ ದ್ರೋಹವಾಗದ ರೀತಿಯಲ್ಲಿ ಕಾರ್ಯ ನಿರ್ವಹಿಸುವ ಭರವಸೆ ವ್ಯಕ್ತಪಡಿಸಿದರು.
ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಜಿ. ರಾಜಪ್ಪ ಮಾತನಾಡಿ, ಸರ್ಕಾರ ಎಲ್ಲ ಸರ್ಕಾರಿ ಶಾಲೆಗಳಿಗೆ ಅಕ್ಷರ ದಾಸೋಹದ ಕೊಠಡಿಗಳನ್ನು ನೀಡಿದೆ. ಎರಡನೇ ಹಂತದಲ್ಲಿ ರಾಜ್ಯದ ಎಲ್ಲ ಅನುದಾನಿತ ಶಾಲೆಗಳಿಗೆ ದಾಸೋಹ ಕೊಠಡಿ ನೀಡುತ್ತಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕನ್ನಡ ಸಂಘದ ಅಧ್ಯಕ್ಷ ಬಿ.ಎನ್. ನಾಗರಾಜ್ ಮಾತಾನಾಡಿ, ಮಕ್ಕಳಿಗೆ ಪೌಷ್ಟಿಕ ಆಹಾರ ನೀಡುವಲ್ಲಿ ಸರ್ಕಾರದ ಯೋಜನೆ ಸಾರ್ಥಕಗೊಳ್ಳುತ್ತಿದೆ ಎಂದರು. ಜಿಪ ಸದಸ್ಯ ಬಿ.ಪಿ. ನಾಗರಾಜ್ ಮಾತನಾಡಿದರು. ಇದೇ ಸಂದರ್ಭದಲ್ಲಿ ಕನ್ನಡ ಸಂಘದದಿಂದ ಶಾಸಕ ವೈ.ಎಸ್.ವಿ. ದತ್ತ ಪುರಸಭಾ ಸದಸ್ಯ ಎಸ್. ದೇವರಾಜ್ ಮತ್ತು ಶರತ್‌ರನ್ನು ಸನ್ಮಾನಿಸಲಾಯಿತು. ಮಾಜಿ ಶಾಸಕ ಕೆ.ಬಿ. ಮಲ್ಲಿಕಾರ್ಜುನ್, ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ್ ಕುಮಾರ್, ಎನ್.ಬಿ. ರಾಮು, ನಾರಾಯಣ್, ನಾಗಭೂಷಣ್, ಕುಮಾರಸ್ವಾಮಿ, ವಿ.ಜಿ. ವಡೆಯರ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.