ಸೈನಿಕರ ಹತ್ಯೆ; ಎಬಿವಿಪಿ ಪ್ರತಿಭಟನೆ
ಚಿಕ್ಕಮಗಳೂರು: ಪಾಕಿಸ್ತಾನ್- ಭಾರತದ ಗಡಿಯಲ್ಲಿ ಪಾಕಿಸ್ತಾನ್ ಭಯೋತ್ಪಾದಕರು ಭಾರತ ದೇಶದ ಐದು ಮಂದಿ ಸೈನಿಕರನ್ನು ಹತ್ಯೆಗೈದಿರುವುದನ್ನು ಖಂಡಿಸಿ ಎಬಿವಿಪಿ ಕಾರ್ಯಕರ್ತರು ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ಇಲ್ಲಿನ ಆಜಾದ್ ಪಾರ್ಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಪಾಕಿಸ್ಥಾನ್ ವಿರುದ್ಧ ಘೋಷಣೆ ಹಾಕಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಎಪಿವಿಪಿ ಮುಖಂಡರು, ಪಾಕಿಸ್ತಾನ್ ಮತ್ತು ಭಾರತ ದೇಶಗಳ ನಡುವೆ ಕದನ ವಿರಾಮ ಇದ್ದರೂ ಗಡಿಯಲ್ಲಿ ನಮ್ಮ ದೇಶದ ಯೋಧರನ್ನು ನೆರೆಯ ಪಾಕಿಸ್ತಾನದ ಭಯೋತ್ಪಾದಕರು ಹತ್ಯೆ ಮಾಡಿರುವುದು ಖಂಡನೀಯ. ಈ ಹಿಂದೆ ಇದೇ ರೀತಿ ಗಡಿಯಲ್ಲಿ ಭಾರತೀಯ ಸೈನಿಕನೋರ್ವನ ಶಿರಚೇದ ಮಾಡಿರುವುದನ್ನು ಅಂದು ಪಾಕಿಸ್ತಾನ್ ಸಮರ್ಥಿಸಿಕೊಂಡಿತ್ತು. ಇದೀಗ ಇಂತಹದ್ದೆ ಘಟನೆ ಮರುಕಳುಹಿಸಿದೆ.
ನಮ್ಮ ದೇಶದ ಪ್ರಧಾನಮಂತ್ರಿ ಹಾಗೂ ರಕ್ಷಣಾ ಸಚಿವರು ಪಾಕಿಸ್ತಾನದ ವಿರುದ್ಧ ಕ್ರಮ ಕೈಗೊಳ್ಳಲು ಮೃಧು ಧೋರಣೆ ಅನುಸರಿಸುತ್ತಿದ್ದಾರೆ. ಅಲ್ಲದೆ ಶತ್ರು ರಾಷ್ಟ್ರದೊಂದಿಗೆ ಶಾಂತಿ ಮಾತುಕತೆಗೆ ಮುಂದಾಗಿರುವುದು ಖಂಡನೀಯ ಎಂದರು.
ಸ್ವಾತಂತ್ರ್ಯ ದಿನಾಚರಣೆಯ ಪೂರ್ವದಲ್ಲಿ ಇಂತಹ ಘಟನೆ ನಡೆದಿರುವುದು ನಮ್ಮ ಸೈನಿಕರ ಆತ್ಮವಿಶ್ವಾಸ ಕುಂದಿಸುವಂತೆ ಮಾಡಿದೆ. ಇಂತಹ ಕೃತ್ಯಗಳಿಂದ ಸೈನಿಕರು ಆತ್ಮವಿಶ್ವಾಸವನ್ನು ಕಳೆದುಕೊಳ್ಳಬಾರದು ಎಂದು ಹೇಳಿದರು.
ಪ್ರತಿಭಟನೆಯಲ್ಲಿ ಎಬಿವಿಪಿ ಮುಖಂಡರಾದ ದರ್ಶನ್ ಹಿರೇಮಠ್, ದಯಾನಂದ್ ತಿರುಗುಣ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

