ಚಿಕ್ಕಮಗಳೂರು

ಅತ್ಯಾಚಾರ: ಆರೋಪಿಗೆ ಜೀವಾವಧಿ

Published On :

ಚಿಕ್ಕಮಗಳೂರು: ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ ಆರೋಪಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ 25 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.
ಮೂಡಿಗೆರೆ ತಾಲೂಕಿನ ಹಸ್ಗಲ್ ರಸ್ತೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಿಂಭಾಗದ ವಾಟರ್ ಟ್ಯಾಂಕ್ ಹತ್ತಿರ ತಮ್ಮ ಪೋಷಕರೊಂದಿಗೆ ಮಲಗಿದ್ದ ಸಂದರ್ಭದಲ್ಲಿ 5 ವರ್ಷದ ಬಾಲಕಿಯ ಮೇಲೆ ಆರೋಪಿ ಮುನ್ನಾ ಅತ್ಯಾಚಾರ ಎಸಗಿದ ಹಿನ್ನೆಲೆಯಲ್ಲಿ ಮೂಡಿಗೆರೆ ಠಾಣಾ ಪೊಲೀಸರು ಆರೋಪಿಯ ವಿರುದ್ಧ ಮೊಕದ್ದಮೆ ದಾಖಲಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಎ. ಪಾಟೀಲ್ ಅವರು ಪ್ರಕರಣ ಸಾಭೀತಾದ ಹಿನ್ನೆಲೆಯಲ್ಲಿ ಆರೋಪಿ ಮುನ್ನಾನಿಗೆ ಜೀವಾವಧಿ ಶಿಕ್ಷೆ ಹಾಗೂ 25 ಸಾವಿರ ದಂಡ ವಿಧಿಸಿದ್ದಾರೆ. ದಂಡದ ಮೊತ್ತದಲ್ಲಿ ಬಾಲಕಿಗೆ 20 ಸಾವಿರ ಪರಿಹಾರವಾಗಿ ಹಾಗೂ ಉಳಿದ 5 ಸಾವಿರವನ್ನು ಸರ್ಕಾರಕ್ಕೆ ಜಮಾ ಮಾಡುವಂತೆ ಬುಧವಾರ ತೀರ್ಪು ನೀಡಿದ್ದಾರೆ.
ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ವಿ.ಆರ್. ಉಪಾಧ್ಯೆ ಮೊಕದ್ದಮೆ ನಡೆಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.