ಚಿಕ್ಕಮಗಳೂರು

ಸೈನಿಕರ ಹತ್ಯೆ: ಪಾಕ್ ಧ್ವಜಕ್ಕೆ ಬೆಂಕಿ

Published On :

ಚಿಕ್ಕಮಗಳೂರು: ದೇಶದ ಗಡಿ ಭಾಗದಲ್ಲಿ ಭಾರತೀಯ ಐವರು ಸೈನಿಕರನ್ನು ಹತ್ಯೆ ಮಾಡಿರುವ ಪಾಕಿಸ್ತಾನದ ದುಷ್ಕೃತ್ಯವನ್ನು ಖಂಡಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ಜಿಲ್ಲಾ ಬಿಜೆಪಿ ಕಾರ್ಯಲಯದಿಂದ ಮೆರವಣಿಗೆಯಲ್ಲಿ ಆಜಾದ್ ಪಾರ್ಕ್ ವೃತ್ತಕ್ಕೆ ಆಗಮಿಸಿದ ಕಾರ್ಯಕರ್ತರು ಪಾಕ್ ರಾಷ್ಟ್ರಧ್ವಜವನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.
ತಿಂಗಳ ಹಿಂದೆ ಮುನ್ನೂರಕ್ಕೂ ಹೆಚ್ಚು ಚೀನಿ ಸೈನಿಕರು ಬೌದ್ಧ ಬಿಕ್ಷುಗಳ ವೇಷದಲ್ಲಿ ಭಾರತದ ಗಡಿಯೊಳಗೆ ನುಸುಳಿದ್ದರೂ ಅವರ ವಿರುದ್ಧ ಯಾವುದೇ ಕ್ರಮ ಜರುಗಿಸದೆ ಇರುವ ಕಂದ್ರ ಸರ್ಕಾರ ಕ್ರಮ ಖಂಡನೀಯ. ಇದರ ಪರಿಣಾಮವೇ ಪಾಕಿಸ್ತಾನದ ಈ ಕೃತ್ಯಕ್ಕೆ ಪ್ರೇರಣೆ. ಪಾಕ್ ಸೈನಿಕರೇ ಭಾರತೀಯ ಸೈನಿಕರನ್ನು ಹತ್ಯೆ ಮಾಡಿದ್ದರೂ, ಸೈನಿಕರ ವೇಷದಲ್ಲಿ ಬಂದ ಉಗ್ರರು ಈ ಕೃತ್ಯವನ್ನು ಎಸಗಿದ್ದಾರೆ ಎಂದು ಕೇಂದ್ರ ರಕ್ಷಣಾ ಸಚಿವ ಎ.ಕೆ. ಆಂಟೋನಿ ಅವರ ಹೇಳಿಕೆ ಖಂಡನೀಯ ಎಂದು ಪ್ರತಿಭಟನಾಕಾರರು ಹೇಳಿದರು.
ಸಮಾಜದ ದಿಕ್ಕು ತಪ್ಪಿಸುವ ಇಂತಹ ಹೇಳಿಕೆಗಳ ಬದಲು ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ ಪ್ರತಿಭಟನಾಕಾರರು, ರಾಷ್ಟ್ರೀಯ ಸುರಕ್ಷ ವಿಚಾರದಲ್ಲಿ ರಾಜಕೀಯ ಮಾಡುವ ಬದಲು ರಾಷ್ಟ್ರದ ಹಿತಾಸಕ್ತಿಗೆ ಪೂರಕವಾಗಿ ಕೇಂದ್ರ ಸರ್ಕಾರ ತೆಗೆದುಕೊಳ್ಳುವ ಕಠಿಣ ನಿರ್ಧಾರಗಳಿಗೆ ಬಿಜೆಪಿ ಬೆಂಬಲಿಸುತ್ತದೆ ಎಂದರು.
ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ವಿಜಯಕುಮಾರ್, ನಗರ ಯುವ ಮೋರ್ಚಾ ಅಧ್ಯಕ್ಷ ಸಮೃದ್ ಪೈ, ಪ್ರಧಾನ ಕಾರ್ಯದರ್ಶಿ ಮನು ಚಕ್ರವರ್ತಿ, ಮುಖಂಡರಾದ ವರಸಿದ್ದಿ ವೇಣುಗೋಪಾಲ್, ಎಚ್.ಡಿ. ತಮ್ಮಯ್ಯ, ಕನಕರಾಜ್ ಅರಸ್, ಪುಷ್ಪರಾಜ್, ದೇವರಾಜ್ ಶೆಟ್ಟಿ, ರವೀಂದ್ರನಾಥ ಪ್ರಭು, ಬಿಳೆಕಲ್ಲಳ್ಳಿ ಪುಟ್ಟೇಗೌಡ ಹಾಗೂ ಪಕ್ಷದ ಕಾರ್ಯಕರ್ತರು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.