ಚಿಕ್ಕಮಗಳೂರು

12ರಂದು ಗ್ರಾಮ ಸಹಾಯಕರ ಬೃಹತ್ ರ್ಯಾಲಿ

Published On :

ಕ.ಪ್ರ.ವಾರ್ತೆ  ಚಿಕ್ಕಮಗಳೂರು  ಆ.8
 ಕಂದಾಯ ಇಲಾಖೆ ಗ್ರಾಮ ಸಹಾಯಕರ ಬೃಹತ್ ರ್ಯಾಲಿ ಆ.12 ರಂದು ತುಮಕೂರಿನಲ್ಲಿ ನಡೆಯಲಿದ್ದು ಜಿಲ್ಲೆಯ ಎಲ್ಲ ಗ್ರಾಮ ಸಹಾಯಕರು ಭಾಗವಹಿಸುವಂತೆ ಸಂಘದ ಜಿಲ್ಲಾಧ್ಯಕ್ಷ ಜಗದೀಶ್ ತಿಳಿಸಿದ್ದಾರೆ.
ರಾಜ್ಯ ಕಂದಾಯ ಇಲಾಖೆ ಗ್ರಾಮ ಸಹಾಯಕರ ಸಂಘ ಹಮ್ಮಿಕೊಂಡಿರುವ ರ್ಯಾಲಿಯಲ್ಲಿ ಕಂದಾಯ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಗ್ರಾಮ ಸಹಾಯಕ ಹುದ್ದೆಯನ್ನು ಡಿ ದರ್ಜೆಗೆ ಸೇರಿಸಿ ಸೇವಾ ಭದ್ರತೆ ಒದಗಿಸುವಂತೆ ಸರ್ಕಾರವನ್ನು ಒತ್ತಾಯಿಸುವುದು ಸೇರಿದಂತೆ 13 ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟು ಪ್ರತಿಭಟಿಸಲಾಗುತ್ತಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ರಾಜ್ಯದ ವಿವಿಧ ಭಾಗಗಳಿಂದ ಸಹಸ್ರಾರು ಮಂದಿ ಈ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಳಲಿದ್ದು ಅಂದು ಬೆಳಿಗ್ಗೆ 10.30 ಕ್ಕೆ ಸಿದ್ದಗಂಗಾ ಮಠದಿಂದ ರ್ಯಾಲಿ ಆರಂಭವಾಗಲಿದೆ. ಸಂಘದ ರಾಜ್ಯಾಧ್ಯಕ್ಷ ಮುದ್ದುಕೃಷ್ಣ , ವಾಲ್ಮೀಕಿ ಸಂಘದ ರಾಜ್ಯಾಧ್ಯಕ್ಷ ವಿ. ಪ್ರತಾಪ ಮದಕರಿ, ಮಾದಿಗ ದಂಡೋರದ ರಾಜ್ಯಾಧ್ಯಕ್ಷ ಪಾವಗಡ ಶ್ರೀರಾಮ್ ನೇತೃತ್ವದಲ್ಲಿ ನಡೆಯುವ ಈ ರ್ಯಾಲಿಯಲ್ಲಿ   ಜಿಲ್ಲೆಯ ಎಲ್ಲಾ ಸದಸ್ಯರು ಪಾಲ್ಗೊಂಡು ಯಶಸ್ಸಿಗೆ ಸಹಕರಿಸುವಂತೆ ಜಗದೀಶ್ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.