20 ರಂದು ದೇವರಾಜ್ ಅರಸ್ ಜನ್ಮದಿನಾಚರಣೆ
ಚಿಕ್ಕಮಗಳೂರು: ನಗರದ ವೈಶ್ಯ ಹಾಸ್ಟೆಲ್ನಲ್ಲಿ ಆ.20 ರಂದು ಮಾಜಿ ಪ್ರಧಾನಿ ದಿ. ರಾಜೀವ್ಗಾಂಧಿಯವರ 69ನೇ ಹಾಗೂ ಮಾಜಿ ಮುಖ್ಯಮಂತ್ರಿ ಪರಿವರ್ತನೆಯ ಹರಿಕಾರ ದಿ. ದೇವರಾಜ್ ಅರಸ್ರವರ 98ನೇ ಜನ್ಮ ದಿನಾಚರಣೆ ನಡೆಯಲಿದೆ.
ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗ ಹಾಗೂ ಜಿಲ್ಲಾ ಕಾಂಗ್ರೆಸ್ ಸೇವಾದಳ ಆಶ್ರಯದಲ್ಲಿ ಅಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಎಲ್. ಮೂರ್ತಿ ಉದ್ಘಾಟಿಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಕೆ.ಎಂ. ನಾಗರಾಜ್ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಅಭಯಚಂದ್ರ ಜೈನ್, ಸಂಸದ ಕೆ. ಜಯಪ್ರಕಾಶ್ ಹೆಗ್ಡೆ , ವಿಧಾನಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ, ತರೀಕೆರೆ ಕ್ಷೇತ್ರದ ಶಾಸಕ ಜಿ.ಹೆಚ್. ಶ್ರೀನಿವಾಸ್, ಮಾಜಿ ಶಾಸಕರಾದ ಕೆ.ಬಿ. ಮಲ್ಲಿಕಾರ್ಜುನ, ಪಕ್ಷದ ಮುಖಂಡರುಗಳಾದ ಕೆ.ಎಸ್. ಶಾಂತೇಗೌಡ, ಟಿ.ಡಿ. ರಾಜೇಗೌಡ, ಬಿ.ಎನ್. ಚಂದ್ರಪ್ಪ, ಎಸ್.ಎಂ. ನಾಗರಾಜ್, ಡಾ. ಕುಮಾರಸ್ವಾಮಿ, ಸೇವಾದಳದ ಮೈಸೂರು ವಿಭಾಗದ ಮುಖ್ಯಸ್ಥರಾದ ಹೆಚ್.ಎಂ. ರುದ್ರಪ್ಪ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಇದೇ ಸಂದರ್ಭದಲ್ಲಿ ಪಕ್ಷಕ್ಕೆ ಸೇವೆ ಸಲ್ಲಿಸಿದ ಹಿರಿಯ ಮುಖಂಡರುಗಳಾದ ಡಿ.ಕೆ. ತಾರಾದೇವಿ ಸಿದ್ದಾರ್ಥ, ಡಿ.ಎಂ. ಪುಟ್ಟೇಗೌಡ, ಡಿ.ಎಂ. ಮಲ್ಲಿಕಾರ್ಜುನಯ್ಯ, ಮೋಟಮ್ಮ, ಸಿ.ಆರ್. ಸಗೀರ್ ಅಹಮದ್ ಅವರನ್ನು ಸನ್ಮಾನಿಸಲಾಗುವುದು.
ಈ ಕಾರ್ಯಕ್ರಮದ ಅಂಗವಾಗಿ ಮಾಜಿ ಪ್ರಧಾನಿ ದಿ. ರಾಜೀವ್ಗಾಂಧಿ ಭಾರತ ದೇಶದ ಅಭಿವೃದ್ಧಿಗೆ ಸಲ್ಲಿಸಿರುವ ಕೊಡುಗೆ ಕುರಿತಾದ ವಿವಿಧ ಶಾಲಾ ಕಾಲೇಜುಗಳಲ್ಲಿ ನಡೆಯುವ ಭಾಷಣ ಸ್ಪರ್ಧೆಯಲ್ಲಿ ಸುಮಾರು 10 ಸಾವಿರ ವಿಧ್ಯಾರ್ಥಿಗಳು ಭಾಗವಹಿಸಲಿದ್ದಾರೆ. ವಿಜೇತ 80 ವಿಧ್ಯಾರ್ಥಿಗಳಿಗೆ ಈ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಅಭಯಚಂದ್ರ ಜೈನ್ ಬಹುಮಾನ ವಿತರಿಸಿ ಗೌರವಿಸಲಿದ್ದಾರೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

