ಚಿಕ್ಕಮಗಳೂರು

ಶ್ರೀನಿವಾಸ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

Published On :

ಚಿಕ್ಕಮಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಮ್ಯಾ ಅವರ ವೈಯಕ್ತಿಕ ಬದುಕಿನ ಬಗ್ಗೆ ಆರೋಪ ಮಾಡಿರುವ ಜೆಡಿಎಸ್ ಮುಖಂಡ, ಮಾಜಿ ಶಾಸಕ ಎಂ. ಶ್ರೀನಿವಾಸ್ ವಿರುದ್ಧ ಯುವ ಕಾಂಗ್ರೆಸ್ ಕಾರ್ಯಕರ್ತರು ಶನಿವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಯುವ ಘಟಕದ ಕಾಂಗ್ರೆಸ್ ಅಧ್ಯಕ್ಷ ಸಿ.ಎಸ್. ಸಂದೀಪ್ ಅವರ ನೇತೃತ್ವದಲ್ಲಿ ಪಕ್ಷದ ಕಾರ್ಯಕರ್ತರು ಇಲ್ಲಿನ ಹಳೇ ತಾಲೂಕು ಕಚೇರಿಯಿಂದ ಮೆರವಣಿಗೆಯಲ್ಲಿ ಹೊರಟು ಹನುಮಂತಪ್ಪ ವೃತ್ತದಲ್ಲಿ ಎಂ. ಶ್ರೀನಿವಾಸ್ ವಿರುದ್ಧ ಘೋಷಣೆ ಹಾಕಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಸಂದೀಪ್, ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ರಮ್ಯರವರು ಚಿತ್ರರಂಗದಲ್ಲಿ ಹೆಗ್ಗಳಿಕೆ ಸಾಧಿಸಿ ರಾಜ್ಯದ ಕೀರ್ತಿಯನ್ನು ಎತ್ತಿ ಹಿಡಿದ ಓರ್ವ ಪ್ರತಿಭಾವಂತ ಕಲಾವಿದೆ. ಮಂಡ್ಯ ಕ್ಷೇತ್ರದ ಮತದಾರರು ರಮ್ಯಾ ಅವರನ್ನು ಗೆಲ್ಲಿಸುವುದು ಖಚಿತ ಎಂದರು.
ವೈಯಕ್ತಿಕ ಟೀಕೆ ಸರಿಯಲ್ಲ: ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೆಲ್ಲುವಂತಹ ವಾತಾವರಣ ಸೃಷ್ಟಿಯಾಗಿದೆ. ಇದನ್ನು ಕಂಡು ಸಹಿಸಲಾಗದೆ ಅವರು ಹತಾಶರಾಗಿ ಹೇಳಿಕೆ ನೀಡುತ್ತಿದ್ದಾರೆ. ಓರ್ವ ಹೆಣ್ಣಿನ ಬಗ್ಗೆ ವೈಯಕ್ತಿಕ ಟೀಕೆಯನ್ನು ಮಾಡುವ ಮೂಲಕ ಜೆಡಿಎಸ್ ಕೀಳುಮಟ್ಟದ ರಾಜಕೀಯವನ್ನು ಪ್ರದರ್ಶಿಸಿರುವುದು ಖಂಡನೀಯ ಎಂದು ಅವರು ಹೇಳಿದರು.
ಬಿ.ಎಂ. ಸಂದೇಶ್ ಮತನಾಡಿ, ವೈಯಕ್ತಿಕ ಬದುಕಿನ ಬಗ್ಗೆ ಜೀವನದಲ್ಲಿ ಅರ್ಥೈಸಿಕೊಳ್ಳದ ಮಾಜಿ ಶಾಸಕ ಶ್ರೀನಿವಾಸ್ ರವರು ಈ ಹಿಂದೆ ಯಾವ ಆಧಾರದಲ್ಲಿ ಜನ ನಾಯಕರಾಗಿದ್ದಾರೆ ಎಂದು ಗುಮಾನಿ ಬರುತ್ತಿದೆ. ನಾಲಿಗೆ ಇದೆ ಎಂದು ಮನ ಬಂದಂತೆ ಹೆಣ್ಣಿನ ಬಗ್ಗೆ ಮಾತನಾಡುವುದು ರಾಜಕೀಯಕ್ಕೆ ಸಮಂಜಸವಲ್ಲ ಎಂದರು.
ಪ್ರತಿಭಟನೆಯಲ್ಲಿ ಮುಖಂಡರಾದ ಶಿವಕುಮಾರ್, ಕೌಶಿಕ್, ಮುರಳಿ, ಮಣಿ, ಮಕ್ಕುದ್ದಿ, ತೇಜ್‌ಕುಮಾರ್, ಮಧು ಹಾಗೂ ಯುವ ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.