'ವಿದ್ಯಾರ್ಥಿಗಳಿಗೆ ಪರಂಪರೆ ಅರಿವು ಅಗತ್ಯ'
ಬಾಳೆಹೊನ್ನೂರು: ವಿದ್ಯಾರ್ಥಿಗಳು ಜೀವನದಲ್ಲಿ ಸಂಸ್ಕೃತಿ, ಪರಂಪರೆಯನ್ನು ಅಳವಡಿಸಿಕೊಳ್ಳಬೇಕು ಎಂದು ಜಿ.ಪಂ. ಸದಸ್ಯ ಮಹಮ್ಮದ್ ಇಫ್ತೆಖಾರ್ ಆದಿಲ್ ಹೇಳಿದ್ದಾರೆ.
ಇಲ್ಲಿನ ವಿದ್ಯಾಗಣಪತಿ ಸಮುದಾಯ ಭವನದಲ್ಲಿ ಸ್ವಾತಂತ್ರ್ಯೋತ್ಸವದ ಅಂಗವಾಗಿ ಸಾಂಸ್ಕೃತಿಕ ಸಂಘ ಆಯೋಜಿಸಿದ್ದ ವಿವಿಧ ಸ್ಪರ್ಧಾ ಕಾರ್ಯಕ್ರಮಗಳ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳ ವ್ಯಕ್ತಿತ್ವವನ್ನು ರೂಪಿಸುತ್ತದೆ. ವಿದ್ಯಾರ್ಥಿಗಳು ನಿರಂತರ ಪರಿಶ್ರಮದಿಂದ ಸಾಧನೆ ಮಾಡಿ ಶಿಕ್ಷಣದ ಜೊತೆಗೆ ಪ್ರತಿಭೆ ಪೋಷಿಸಬೇಕು ಎಂದು ತಿಳಿಸಿದರು.
ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಯಜ್ಞ ಪುರುಷ ಭಟ್ ಮಾತನಾಡಿ, ಸಾಹಿತ್ಯ, ಕಲೆ ಹಾಗೂ ಬರವಣಿಗೆಯಿಂದ ಆರ್ಥಿಕ ಸಬಲೀಕರಣ ಸಾಧಿಸಬಹುದು ಎಂದರು.
ಮಲಾಲ ಮಾದರಿ: ತಾಲಿಬಾನ್ ವಿರೋಧದ ನಡುವೆಯೂ ಮಹಿಳೆಯ ಶಿಕ್ಷಣ ಹಾಗೂ ಹಕ್ಕಿನ ಬಗ್ಗೆ ಪತ್ರಿಕೆಯಲ್ಲಿ ವರದಿ ಮಾಡಿ ಗುಂಡೇಟಿನಿಂದ ದಾಳಿಗೊಳಗಾದರೂ ಎದೆಗುಂದದೆ ಬರವಣಿಗೆ ನೈಪುಣ್ಯತೆಗೆ ವಿಶ್ವದ ಗಮನ ಸೆಳೆದಳು.
ಪಾಕಿಸ್ತಾನದ 16 ವರ್ಷದ ಮಲಾಲ ಯೂಸಫ್ ಝೂಯೀರವರ ಸಾಧನೆಯನ್ನು ಉಲ್ಲೇಖಿಸಿ ಮಾತನಾಡಿದ ಅವರು, ವಿಶ್ವಸಂಸ್ಥೆಯಲ್ಲಿ ವಿದ್ಯಾರ್ಥಿಯ ಭಾಷಣ ಗಮನ ಸೆಳೆದು 16 ಕೋಟಿಗೂ ಹೆಚ್ಚು ಹಣ ಸಂಪಾದನೆ ಮಾಡಿದ್ದು, ಅವರ ಬರವಣಿಗೆ ಪ್ರತಿಭೆ ಧೈರ್ಯ ಹಾಗೂ ಎದೆಗಾರಿಕೆ ವಿಶ್ವಕ್ಕೆ ಮಾದರಿಯಾಗಿತ್ತು ಎಂದರು.
ಸಂಘದ ಅಧ್ಯಕ್ಷ ಬಿ.ಕೆ. ಮಹಮ್ಮದ್ ಆಲಿ ಅಧ್ಯಕ್ಷತೆ ವಹಿಸಿದ್ದರು. ಸ್ಥಳೀಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕೆ.ಕೆ. ಸುಧಾಕರ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕ ವಿಜಯಕುಮಾರ್, ಆರೋಗ್ಯ ಇಲಾಖೆಯ ಅಧಿಕಾರಿ ಭಗವಾನ್, ಬಿ. ಕಣಬೂರು ಗ್ರಾ.ಪಂ. ಉಪಾಧ್ಯಕ್ಷೆ ಎನ್.ಎ. ಹೂವಮ್ಮ ಮಾತನಾಡಿದರು.
ಸಂಘದ ಪದಾಧಿಕಾರಿಗಳಾದ ಜಂಶೀದ್ ಅಹ್ಮದ್, ಕೃಷ್ಣಭಟ್, ರಾ. ವೆಂಕಟೇಶ್, ಜ್ಯೋತಿ, ಮಂಜು, ಜಗದೀಶ್, ಚೈತನ್ಯ ವೆಂಕಿ, ಸಿ.ಎಸ್. ರಮೇಶ್, ಸುಧಾಕರ್ ಸೇರಿದಂತೆ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

