ಚಿಕ್ಕಮಗಳೂರು

ನಾಗಭೂಷಣ್ ಆಯ್ಕೆ

Published On :

ಚಿಕ್ಕಮಗಳೂರು: ಅರವಿಂದ್ ಕ್ರೇಜಿವಾಲ್ ನೇತೃತ್ವದ ಅಮ್ ಅದ್ಮಿ ಸಂಘಟನೆಯ ಜಿಲ್ಲಾ ಸಂಯೋಜಕರಾಗಿ ಡಾ. ಕೆ. ಸುಂದರೇಗೌಡ, ಕಡೂರು ತಾಲೂಕು ಸಂಯೋಜಕರಾಗಿ ನಾಗಭೂಷಣ್ ಮತ್ತು ಮೂಡಿಗೆರೆ ತಾಲೂಕು ಸಂಯೋಜಕರಾಗಿ ಪೃಥ್ವಿರಾಜ್ ಆಯ್ಕೆಯಾಗಿದ್ದಾರೆ. ಆ.18 ರಂದು ರಾಜ್ಯ ಸಂಚಾಲಕ ಸಂತೋಷ್ ಅವರು ಸಂಘಟನೆ ಮತ್ತು ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ನಗರದಲ್ಲಿ ಚಾಲನೆ ನೀಡಲಿದ್ದಾರೆ ಎಂದು ಜಿಲ್ಲಾ ಸಂಯೋಜಕ ಡಾ. ಕೆ. ಸುಂದರೇಗೌಡ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ವಿಚಾರ ಸಂಕಿರಣ
ಜನಜಾಗೃತಿ ಸಮಾಜ ಸೇವಾ ಸಂಸ್ಥೆ ವತಿಯಿಂದ ನಗರದ ಎಸ್.ಟಿ.ಜೆ. ಮಹಿಳಾ ಕಾಲೇಜಿನಲ್ಲಿ ಸೋಮವಾರ ಮಧ್ಯಾಹ್ನ 2.30ಕ್ಕೆ ಡಾ. ನೆಲ್ಸನ್ ಮಂಡೇಲಾ ಮತ್ತು ಶಿಕ್ಷಣ ಹೋರಾಟಗಾರ್ತಿ ಮಲಾಲ ಯೂಸೂಫಾಜಿಯಾ ಅವರ ಜನ್ಮದಿನಾಚರಣೆ ಕಾರ್ಯಕ್ರಮ ನಡೆಯಲಿದೆ. ಇದೇ ವೇಳೆ ಆಯೋಜಿಸಲಾಗಿರುವ ಜನಜಾಗೃತಿ ಕಾರ್ಯಕ್ರಮ ಮತ್ತು ವಿಚಾರ ಸಂಕಿರಣ ಶಾಸಕ ಸಿ.ಟಿ. ರವಿ ಉದ್ಘಾಟಿಸಲಿದ್ದು, ವಿಧಾನ ಪರಿಷತ್ ಸದಸ್ಯೆ ಗಾಯಿತ್ರಿ ಶಾಂತೇಗೌಡ, ಮಾಜಿ ಶಾಸಕ ಎಸ್.ಎಲ್. ಧರ್ಮೇಗೌಡ, ರಾಷ್ಟ್ರೀಯ ವಕೀಲ ಪರಿಷತ್ ಸದಸ್ಯ ಎಸ್.ಎಲ್. ಬೋಜೇಗೌಡ, ಅಪರ ಜಿಲ್ಲಾಧಿಕಾರಿ ಎಸ್.ಎನ್. ಬಾಲಚಂದ್ರ, ಆಶಾಕಿರಣ ಅಂಧಮಕ್ಕಳ ಶಾಲೆಯ ಅಧ್ಯಕ್ಷ ಡಾ. ಜೆ.ಪಿ. ಕೃಷ್ಣೇಗೌಡ, ಪತ್ರಕರ್ತ ಬಿ. ತಿಪ್ಪೇರುದ್ರಪ್ಪ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಜನಜಾಗೃತಿ ಸಮಾಜ ಸೇವಾ ಸಂಸ್ಥೆಯ ಗೌರವಾಧ್ಯಕ್ಷ ಕೆ.ಎಂ. ಇಕ್ಬಾಲ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

14ಕ್ಕೆ ಬೃಹತ್ ಕೆನರಾ ಅದಾಲತ್
ಕಡೂರು: 14ರಂದು ಕಡೂರು ಕೆನರಾ ಬ್ಯಾಂಕ್ ಶಾಖೆಯಲ್ಲಿ ಸುಸ್ತಿ ಸಾಲಗಳ ಏಕಗಂಟಿನ ತೀರುವಳಿಯ ಬೃಹತ್ ಕೆನರಾ ಅದಾಲತ್ ನಡೆಯಲಿದೆ ಎಂದು ಬ್ಯಾಂಕಿನ ಹಿರಿಯ ವ್ಯವಸ್ಥಾಪಕ ಟಿ.ಎಸ್. ದೇವರಾಜ್ ಹೇಳಿದ್ದಾರೆ. ಬೆ.10 ಗಂಟೆಗೆ ಬ್ಯಾಂಕಿನ ಶಾಖೆಯಲ್ಲಿ ಸ.5 ಗಂಟೆಯವರೆಗೆ ಕಾರ್ಯಕ್ರಮ ನಡೆಯಲಿದೆ. ಗ್ರಾಹಕರು, ರೈತ ಭಾಂಧವರು ಭಾಗವಹಿಸಿ ಅವಕಾಶವನ್ನು ಬಳಸಿಕೊಂಡು ಸಾಲದಿಂದ ಮುಕ್ತರಾಗಬೇಕು ಎಂದು ಕೋರಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.