ಪಟ್ಟಣದಲ್ಲಿ ಸಡಗರದ ನಾಗರಪಂಚಮಿ
ಶೃಂಗೇರಿ: ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶದ ಎಲ್ಲೆಡೆ ಭಾನುವಾರ ನಾಗರಪಂಚಮಿಯನ್ನು ಸಡಗರದಿಂದ ಆಚರಿಸಲಾಯಿತು. ಧಾರಾಕಾರ ಮಳೆಯನ್ನು ಲೆಕ್ಕಿಸದೇ ಜನರು ಬೆಳಿಗ್ಗೆಯಿಂದಲೇ ದೇವಾಲಯಗಳಿಗೆ ತೆರಳಿ ನಾಗನಿಗೆ ಹಾಲೆರೆದು, ಹಣ್ಣುಕಾಯಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಕೆರೆ ಆಂಜನೇಯ ಬೀದಿಯಲ್ಲಿರುವ ಅಶ್ವತ್ಥಕಟ್ಟೆ, ಮಲಹಾನಿಕರೇಶ್ವರ ಬೆಟ್ಟ ಸೇರಿದಂತೆ ವಿವಿದೆಡೆಯಲ್ಲಿರುವ ನಾಗದೇವಾಲಯಗಳಲ್ಲಿ ವಿಶೇಷ ಪೂಜೆ ಜರುಗಿತು.
ರಾಜ್ಯಮಟ್ಟದ ಚೆಸ್ ಪಂದ್ಯಾವಳಿಗೆ ಆಯ್ಕೆ
ಪಟ್ಟಣದ ಹೈವೇ ಶಾಲೆಯ 6ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಬಿ.ಜಿ. ಶೀತಲ್ ದಾವಣಗೆರೆಯಲ್ಲಿ ನಡೆಯಲಿರುವ ರಾಜ್ಯಮಟ್ಟದ ಚೆಸ್ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ. ಆಗಸ್ಟ್ 3 ರಂದು ಚಿಕ್ಕಮಗಳೂರು ಜಿಲಾ ಕೇಂದ್ರದಲ್ಲಿ ನಡೆದ 14 ರ ವಯೋವುತಿಯ ಚೆಸ್ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಶೀತಲ್ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದು, ವಿದ್ಯಾರ್ಥಿನಿ ಕಡೂರಿನ ರತ್ನ ಗಿರೀಶ್ ಅವರ ಪುತ್ರಿಯಾಗಿದ್ದು ಇವರ ಸಾಧನೆಗೆ ಶಾಲಾ ಆಡಳಿತ ಮಂಡಳಿ ಮೆಚ್ಚುಗೆ ವ್ಯಕ್ತಪಡಿಸಿದೆ. ಚೆಸ್ ತರಬೇತುದಾರ ಎಂ.ಬಿ. ರಾಜಶೇಖರ್ ಅಭಿನಂದಿಸಿದ್ದಾರೆ.
ಕೌಶಲ್ಯ ತರಬೇತಿ
ಶಿವಮೊಗ್ಗ: ಕೌಶಲ್ಯ ತರಬೇತಿ ಕೇಂದ್ರ ಭಾರತ ಸರ್ಕಾರ, ರಾಜ್ಯ ಸರ್ಕಾರದ ಉದ್ಯೋಗ ಮತ್ತು ತರಬೇತಿ ಇಲಾಖೆಯ ಆಶ್ರಯದಲ್ಲಿ ನಗರದ ದೈವಜ್ಞ ವಿದ್ಯಾಸಂಸ್ಥೆಯಲ್ಲಿ ಆರ್ಥಿಕ, ಶೈಕ್ಷಣಿಕವಾಗಿ ಹಿಂದುಳಿದ ಅಭ್ಯರ್ಥಿಗಳಿಗೆ ಸ್ವಾವಲಂಭಿಯಾಗಿ ಕಾರ್ಯನಿರ್ವಹಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ಅಲ್ಫಾವಧಿಯ ಕೌಶಲ್ಯ ತರಬೇತಿ ಹಮ್ಮಿಕೊಂಡಿದೆ. ಆಸಕ್ತರು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಕೇಂದ್ರ ತಿಳಿಸಿದೆ. ತರಬೇತಿ ಪಡೆಯುವ ಅಭ್ಯರ್ಥಿಗಳು ಕಡ್ಡಾಯವಾಗಿ ಎಂಪ್ಲಾಯಬಲ್ ಸ್ಕಿಲ್ ಪರೀಕ್ಷೆ ಬರೆದು ಉತ್ತೀರ್ಣರಾದವರಿಗೆ ಭಾರತ ಸರ್ಕಾರದ ಕೌಶಲ್ಯ ತರಬೇತಿ ಅರ್ಹತೆಯ ಎಂಇಎಸ್ ಪ್ರಮಾಣ ಪತ್ರ ನೀಡಲಾಗುವುದು. ತರಬೇತಿ ಪಡೆದ ಅಭ್ಯರ್ಥಿಗಳಿಗೆ ಅನುಗುಣವಾಗಿ ಕೇಂದ್ರ ಸರ್ಕಾರದಿಂದ ತರಬೇತಿ ವೆಚ್ಚ ಮರುಪಾವತಿ ಸೌಕರ್ಯ ಹೊಂದಿರುತ್ತದೆ. 14 ವರ್ಷ ಮೇಲ್ಪಟ್ಟವರು ಅರ್ಜಿಗಳನ್ನು ತರಬೇತಿ ಕೇಂದ್ರದಲ್ಲಿ ಪಡೆದು ಸಲ್ಲಿಸಬಹುದು. ಟೈಲರ್ ಬೇಸಿಕ್ ಸೇವಿಂಗ್ ಆಪರೇಟರ್), ಕಂಪ್ಯೂಟರ್ ಫಂಡಮೆಂಟಲ್, ಬ್ಯುಟಿಷಿಯನ್ ಬೇಸಿಕ್ ಆಫ್ ಬ್ಯುಟಿ) ಕುರಿತು ತರಬೇತಿ ನೀಡಲಾಗುವುದು ಎಂದು ದೈವಜ್ಞ ವಿದ್ಯಾಸಂಸ್ಥೆಯ ಕಾರ್ಯದರ್ಶಿ ತಿಳಿಸಿದ್ದಾರೆ. ವಿವರಗಳಿಗಾಗಿ- 08182-264847.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

