ಚಿಕ್ಕಮಗಳೂರು

ಪ್ರತಿಭಟನೆ ಹಾಸ್ಯಾಸ್ಪದ; ಕಾಂಗ್ರೆಸ್

Published On :

ಶಿರಾಳಕೊಪ್ಪ: ಬಿಜೆಪಿ, ಜೆಡಿಎಸ್ ಹಾಗೂ ಇತರ ರಾಜಕೀಯ ಪಕ್ಷಗಳು ಒಟ್ಟಾಗಿ ನೆರೆಹಾವಳಿ ಮತ್ತು ಅಡಕೆ ರೋಗಕ್ಕೆ ಪರಿಹಾರ ಕೊಡಬೇಕು ಎಂದು ಪ್ರತಿಭಟನೆ ಹಮ್ಮಿಕೊಂಡಿರುವದು ಹಾಸ್ಯಾಸ್ಪದ ಎಂದು ಜಿಲ್ಲಾ ಕಿಸಾನ್ ಸೆಲ್ ಅಧ್ಯಕ್ಷ ನಗರದ ಮಹದೇವಪ್ಪ ತಿಳಿಸಿದ್ದಾರೆ.
 ಹೇಳಿಕೆ ನೀಡಿ, ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವ ಕಿಮ್ಮನೆ ರತ್ನಾಕರ್ ಅವರು ಅಧಿಕಾರಿಗಳ ಸಭೆ ಕರೆದು ಜಿಲ್ಲೆಯಲ್ಲಿ ನೆರೆ ಹಾವಳಿಯಿಂದ ಆಗಿರುವ ನಷ್ಟದ ಬಗ್ಗೆ ಮಾಹಿತಿ ಪಡೆದು 5.42ಕೋಟಿ ನಷ್ಟ ಸಂಭವಿಸಿದೆ ಎಂದು ಅಂದಾಜು ಮಾಡಲಾಗಿದೆ. ಆದರೆ ಇದನ್ನು ಸಹಿಸಲಾರದೇ ಪ್ರತಿಭಟನೆ ಹಮ್ಮಿಕೊಳ್ಳುತ್ತಿದ್ದಾರೆ. ಜಿಲ್ಲಾಡಳಿತದ ಬಳಿ 5 ಕೋಟಿಗೂ ಹೆಚ್ಚು ಹಣ ಇದೆ. ಜಿಲ್ಲಾ ಉಸ್ತವಾರಿ ಸಚಿವರು ಈ  ಬಗ್ಗೆ ಕ್ರಮಕೈಗೊಳ್ಳಲಿದ್ದಾರೆ ಎಂದರು.
ಶಾಸಕರು ವರದಿಯನ್ನೇ ಕಳುಹಿಸಿಲ್ಲ: ಜಿಲ್ಲೆಯ ಹಲವಾರು ಭಾಗದಲ್ಲಿ ಸಾಕಷ್ಟು ಹಾನಿ ಸಂಭವಿಸಿದರೂ ಆಯಾ ಭಾಗದ ಹಲವಾರು ಶಾಸಕರು ಹಾನಿ ಬಗ್ಗೆ ಇನ್ನೂ ಜಿಲ್ಲಾಡಳಿತಕ್ಕೆ ವರದಿಯನ್ನೇ ಕಳುಹಿಸಿಲ್ಲ. ಪ್ರತಿಜಿಲ್ಲೆಯಲ್ಲಿ ಕೈಗೊಳ್ಳುವ ಅತಿವೃಷ್ಟಿ ಕಾಮಗಾರಿಗಳು ಆಯಾ ತಾಲೂಕಿನ ಶಾಸಕರಿಂದಲೇ ನಡೆಯುತ್ತದೆ ಎಂದು ಹೇಳಿದ್ದಾರೆ.
ಅಡಕೆ ಕೊಳೆರೋಗಕ್ಕೆ ಪರಿಹಾರ: ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವರು ಕೊಳೆರೋಗದ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದ್ದಾರೆ. ರೈತರಿಗೆ ಹೆಕ್ಟೇರ್‌ಗೆ 12 ಸಾವಿರ ರು. ಪರಿಹಾರವನ್ನು ತೋಟಗಾರಿಕಾ ಇಲಾಖೆಯಿಂದ ಕೊಡಿಸಲು ಪ್ರಯತ್ನಿಸುತ್ತಿದ್ದಾರೆ ಎಂದರು.
ಅಧಿಕಾರಿಗಳು ಸ್ಪಂಧಿಸುತ್ತಿಲ್ಲ: ಜಿಲ್ಲೆಯಲ್ಲಿರುವಂತಹ ಹಲವಾರು ಅಧಿಕಾರಿಗಳು ಬಿಜೆಪಿ ಅಧಿಕಾರದಲ್ಲಿದ್ದಾಗ ಬಂದಂತಹವರು. ಅವರು ಜಿಲ್ಲೆಯಲ್ಲಿ ರೈತರಿಗೆ ನೆರವಾಗಲು ಸರಿಯಾಗಿ ಸ್ಪಂದಿಸುತ್ತಿಲ್ಲ. ಇದು ಸರಿಯಾದ ಕ್ರಮವಲ್ಲ, ತಕ್ಷಣ ಅಧಿಕಾರಿಗಳು ತಮ್ಮ ಕಾರ್ಯವೈಖರಿಯನ್ನು ಬದಲಿಸಿಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಮಹದೇವಪ್ಪ, ಸಯ್ಯದ್‌ಹಬೀಬುಲ್ಲಾ, ಜಬ್ಬಾರ್ ಸಾಬ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.