ಚಿಕ್ಕಮಗಳೂರು

ಇಂದು ಸಚಿವ ಜೈನ್ ಪ್ರವಾಸ

Published On :

ಚಿಕ್ಕಮಗಳೂರು: ಯುವಜನ ಸೇವಾ ಮತ್ತು ಮೀನುಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ಅಭಯಚಂದ್ರ ಜೈನ್ ಅವರು ಆ. 14 ಮತ್ತು 15 ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಆ. 14 ರಂದು ರಾತ್ರಿ 9ಕ್ಕೆ ಪ್ರವಾಸಿ ಮಂದಿರದಲ್ಲಿ ವಾಸ್ತವ್ಯ ಹೂಡಲಿದ್ದು, 15 ರಂದು ಬೆಳಿಗ್ಗೆ 9ಕ್ಕೆ ಚಿಕ್ಕಮಗಳೂರು ಜಿಲ್ಲಾ ಆಟದ ಮೈದಾನದಲ್ಲಿ ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆಯ ರಾಷ್ಟ್ರ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.  ಮಧ್ಯಾಹ್ನ 12 ಗಂಟೆಗೆ ಸಾರ್ವಜನಿಕರ ಭೇಟಿ ಹಾಗೂ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 5 ಗಂಟೆಗೆ ಬೆಂಗಳೂರಿಗೆ ಹಿಂದಿರುಗಲಿದ್ದಾರೆ.
ಟೆಲಿಕಾಂ ಅದಾಲತ್
ಭಾರತ ಸಂಚಾರ ನಿಗಮ ನಿಯಮಿತ ವತಿಯಿಂದ ಆಗಸ್ಟ್ ಮಾಹೆಯ ಕೊನೆಯ ವಾರದಲ್ಲಿ ಟೆಲಿಕಾಂ ಅದಾಲತ್‌ನ್ನು ಆಯೋಜಿಸಲಾಗಿದೆ. ಗ್ರಾಹಕರು ತಮ್ಮ ದೂರುಗಳನ್ನು ಆ. 26 ರೊಳಗೆ ಟೆಲಿಕಾಂ ಅದಾಲತ್‌ಗೆ ಸಲ್ಲಿಸಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಸಾರ್ವಜನಿಕ ಸಂಪರ್ಕಾಧಿಕಾರಿ, ಜಿಲ್ಲಾ ಮಹಾ ಪ್ರಬಂಧಕರ ಕ:ಕೇರಿ, ಬಿ.ಎಸ್.ಎನ್.ಎಲ್. ಬೆಲ್ಟ್ ರಸ್ತೆ, ಚಿಕ್ಕಮಗಳೂರು ಇವರನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.
ಪದವಿ ಪ್ರವೇಶಾತಿ ಅವಧಿ ವಿಸ್ತರಣೆ
ಪ್ರಸಕ್ತ ಸಾಲಿಗೆ ವಿವಿಧ ಸ್ನಾತಕೋತರ ಪದವಿಗಳ ಪ್ರಥಮ, ತೃತೀಯ ಹಾಗೂ ಐದನೇ ಸೆಮಿಸ್ಟರ್‌ಗೆ ಪ್ರವೇಶ ಕೊನೆಯ ದಿನವನ್ನು ಆ. 17 ರವರೆಗೆ ವಿಸ್ತರಿಸಲಾಗಿದೆ ಎಂದು ಕುವೆಂಪು ವಿಶ್ವವಿದ್ಯಾನಿಲಯದ ಉಪ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.