ಪರಿಸರ ವಿಷಯದ ಬಗ್ಗೆ ಚಿತ್ರಕಲೆ ಸ್ಪರ್ಧೆ
ನರಸಿಂಹರಾಜಪುರ: ಇನ್ನರ್ ವೀಲ್ ಕ್ಲಬ್ ಆಶ್ರಯದಲ್ಲಿ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಪಟ್ಟಣದ ವಿವಿಧ ಪ್ರೌಢ ಶಾಲೆ ವಿದ್ಯಾರ್ಥಿಗಳಿಗಾಗಿ ಪರಿಸರ ವಿಷಯದ ಬಗ್ಗೆ ಚಿತ್ರಕಲೆ ಸ್ಪರ್ಧೆ ದೀಪ್ತಿ ಪ್ರೌಢ ಶಾಲಾ ಆವರಣದಲ್ಲಿ ನಡೆಯಿತು.
12 ವಿದ್ಯಾರ್ಥಿಗಳು ಚಿತ್ರ ಕಲೆ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಜೀವನಜ್ಯೋತಿ ಪ್ರೌಢ ಶಾಲೆಯ ನಾಗಾರ್ಜುನ ಪ್ರಥಮ, ದೀಪ್ತಿ ಪ್ರೌಢ ಶಾಲೆಯ ಸೋಮಶೇಖರ್ ದ್ವಿತೀಯ ಹಾಗೂ ದೀಪ್ತಿ ಪ್ರೌಢ ಶಾಲೆಯ ಪ್ರತೀಕ್, ಶಾರದಾ ವಿದ್ಯಾ ಮಂದಿರದ ಸುನಿಲ್ತೃತೀಯ ಸ್ಥಾನ ಪಡೆದರು. ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆ ಶೀಲ ಸುಂದರೇಶ್ ಈ ಸಂದರ್ಭದಲ್ಲಿ ಮಾತನಾಡಿ, ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆ ಹೊರ ತೆಗೆಯಲು ಚಿತ್ರಕಲೆ ಸ್ಪರ್ಧೆ ಏರ್ಪಡಿಸಲಾಗಿದೆ. ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಗುವುದು ಎಂದರು. ಕಾರ್ಯದರ್ಶಿ ಉಮಾ ಸತ್ಯನಾರಾಯಣಸ್ವಾಮಿ, ಸದಸ್ಯೆ ನಳಿನಿ ಸುರೇಶ್, ದೀಪ್ತಿ ಪ್ರೌಢ ಶಾಲೆಯ ಶಿಕ್ಷಕಿ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

