ಶಿಕ್ಷಣಕ್ಕೆ ಒತ್ತು ನೀಡುವುದು ಅಗತ್ಯ
ಚಿಕ್ಕಮಗಳೂರು: ಆಧುನಿಕ ಯುಗದಲ್ಲಿ ಶಿಕ್ಷಣಕ್ಕೆ ವಿದ್ಯಾರ್ಥಿಗಳು ಹೆಚ್ಚಿನ ಮಹತ್ವ ನೀಡಬೇಕು. ಜೀವನದಲ್ಲಿ ಮಹತ್ವದ ಪಾತ್ರ ವಹಿಸುವ ವಿದ್ಯಾಭ್ಯಾಸವನ್ನು ಕಡೆಗಣಿಸಿದಲ್ಲಿ ಮುಂದೆ ಪಶ್ಚಾತ್ತಾಪ ಪಡಬೇಕಾಗುತ್ತದೆ ಎಂದು ತಾಲೂಕು ಪಂಚಾಯಿತಿ ಅಧ್ಯಕ್ಷ ಬಸವರಾಜ್ ಹೇಳಿದ್ದಾರೆ.
ನಗರದ ಬಾರ್ಲೈನ್ ರಸ್ತೆಯ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿ ತಾಲೂಕು ಪಂಚಾಯಿತಿ ಮತ್ತು ಸಮಾಜ ಕಲ್ಯಾಣ ಇಲಾಖೆಯಿಂದ ಮಂಗಳವಾರ ನಡೆದ ಪೋಷಕರ ಸಭೆಯನ್ನು ಉದ್ಘಾಟಿಸಿ ಮಾತನಾಡಿ, ಸರ್ಕಾರ ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಶಾಲೆಗಳನ್ನು ತೆರೆಯುವುದರ ಜೊತೆಗೆ ವಿದ್ಯಾರ್ಥಿನಿಲಯಗಳ ಸೌಲಭ್ಯವನ್ನು ಒದಗಿಸಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡು ತಮ್ಮ ಜೀವನ ರೂಪಿಸಿಕೊಳ್ಳಬೇಕು ಎಂದರು.
3 ತಿಂಗಳಿಗೊಮ್ಮೆ ಪೋಷಕರ ಸಭೆ: ಜಿಲ್ಲಾ ಪಂಚಾಯಿತಿ ಸದಸ್ಯ ಜೆ.ಡಿ. ಲೋಕೇಶ್ ಮಾತನಾಡಿ, ಹಾಸ್ಟೆಲ್ ವಿದ್ಯಾರ್ಥಿಗಳು ಕಡ್ಡಾಯವಾಗಿ ಮೊಬೈಲ್ ಮತ್ತು ಟಿ.ವಿ.ಗಳಿಂದ ದೂರ ಇರುವಂತೆ ಮೇಲ್ವಿಚಾರಕರು ಹೆಚ್ಚಿನ ಗಮನ ವಹಿಸಬೇಕು. ಸರ್ಕಾರದ ಸುತ್ತೋಲೆಯ ಪ್ರಕಾರ 3 ತಿಂಗಳಿಗೊಮ್ಮೆ ಕಡ್ಡಾಯವಾಗಿ ಪೋಷಕರ ಸಭೆ ನಡೆಸಬೇಕು. ಪೋಷಕರು ಸಹ ಮಕ್ಕಳ ವಿದ್ಯಾಭ್ಯಾಸದ ಕಡೆ ಹೆಚ್ಚಿನ ಗಮನ ನೀಡಲು ಹಾಗೂ ಮಕ್ಕಳ ಸಮಸ್ಯೆಗಳ ಬಗ್ಗೆ ಚರ್ಚಿಸಲು ಸಭೆಯಲ್ಲಿ ಪಾಲ್ಗೊಳ್ಳಬೇಕು ಎಂದು ಹೇಳಿದರು.
ತಾಲೂಕು ಸಮಾಜ ಕಲ್ಯಾಣಾಧಿಕಾರಿ ಧನಂಜಯ್ ಮಾತನಾಡಿ, ವಿದ್ಯಾರ್ಥಿಗಳು ಅತ್ಯಂತ ಶಿಸ್ತು ಮತ್ತು ಜವಾಬ್ಧಾರಿಯಿಂದ ವಿದ್ಯಾಭ್ಯಾಸ ಮಾಡಬೇಕು. ಸರ್ಕಾರದ ಸೌಲಭ್ಯಗಳನ್ನು ಬಳಸಿಕೊಂಡು ಮಾದರಿಯಾಗುವಂತೆ ಯಶಸ್ಸು ಗಳಿಸಬೇಕು. ವಿದ್ಯಾರ್ಥಿನಿಲಯದಲ್ಲಿ ಒಬ್ಬರು ಮೊಬೈಲ್ ಬಳಸುವುದರಿಂದ ಇತರರಿಗೂ ತೊಂದರೆಯಾಗುತ್ತದೆ ಎಂಬುದನ್ನು ಗಮನದಲ್ಲಿಟ್ಟುಕೊಂಡು ವಿದ್ಯಾರ್ಥಿಗಳು ಮೊಬೈಲ್ ತ್ಯಜಿಸಬೇಕು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

