ಕಡೂರಿನಲ್ಲಿ ಸ್ವಾತಂತ್ರ್ಯ ದಿನಾಚರಣೆ
ಕಡೂರು: ಬ್ರಿಟೀಷರಿಗೆ ಹೋಲಿಸಿದರೆ ದೇಶದ ಸಂಕಷ್ಟ ಅರಿಯದ ರಕ್ಕಸರಿಗೆ ದೇಶವನ್ನು ನೀಡಲಾಗಿದೆಯೇ ಎಂಬ ಅನುಮಾನ ಮೂಡುತ್ತಿರುವುದು ವಿಷಾದನೀಯ ಎಂದು ಶಾಸಕ ವೈ.ಎಸ್.ವಿ. ದತ್ತ ಹೇಳಿದರು.
ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ನಡೆದ 67 ನೇ ಸ್ವಾತಂತ್ರ್ಯ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಹಾತ್ಮ ಗಾಂಧೀಜಿ, ಸುಭಾಷ್ ಚಂದ್ರಭೋಸ್ ಮತ್ತಿತರ ನಾಯಕರ ತ್ಯಾಗ ಬಲಿದಾನದಿಂದ ಭಾರತಕ್ಕೆ ಸ್ವಾತಂತ್ರ್ಯತಂದು ಕೊಟ್ಟರು. ಆದರೆ ಅವರು ತಂದುಕೊಟ್ಟ ಸ್ವಾತಂತ್ರ್ಯದ ನಿರೀಕ್ಷೆ ಸುಳ್ಳಾಗಿ ಜನರು ಸಂಕಷ್ಟದ ಸ್ಥಿತಿಯಲ್ಲಿಯೇ ಬದುಕುತ್ತಿದ್ದಾರೆ ಎಂದರು.
ಗ್ರಾಮಾಂತರ ಪ್ರದೇಶಗಳ ಜನರು ಅಜ್ಞಾನ, ಅನಕ್ಷರತೆ ತೊಡೆದು ಹಾಕಿ ಸ್ವಾವಲಂಬಿಗಳಾಗಿ ಬದುಕಲು ಕಲಿಯಬೇಕು. ದೇಶದ ಪ್ರತಿಯೊಬ್ಬ ಯುವಕರು ದೇಶದ ಸತ್ಪ್ರಜೆಗಳಾಗಿ ದೇಶವನ್ನು ಪ್ರಗತಿಯತ್ತ ಕೊಂಡೊಯ್ಯಲು ಪ್ರತಿಜ್ಞೆ ಮಾಡಬೇಕು ಎಂದು ಹೇಳಿದರು.
ಧ್ವಜಾರೋಹಣ ನೆರವೇರಿಸಿ ಧ್ವಜ ವಂದನೆ ಸ್ಕೀಕರಿಸಿದ ತಾಲೂಕು ದಂಡಾಧಿಕಾರಿ ಎನ್.ಎಸ್. ಶಾರದಾಂಬ ಮಾತನಾಡಿ, ದೇಶದ ಆಧಾರ ಸ್ತಂಭಗಳು ಯುವ ಸಮೂಹವಾಗಿದ್ದು, ಅಪಾರ ಬೆಲೆ ತೆತ್ತು ಸ್ವಾತಂತ್ರ್ಯವನ್ನು ಉಳಿಸಿಕೊಳ್ಳುವ ಸಂಕಲ್ಪವನ್ನು ನಾವೆಲ್ಲರೂ ಮಾಡಬೇಕು ಎಂದರು.
ಇದೇ ಸಂದರ್ಭದಲ್ಲಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ದೇವೋಜಿರಾವ್, ಗಂಗೋಜಿರಾವ್, ಕಾಂತರಾಜಶೆಟ್ಟಿ, ಚಂದ್ರಶೇಖರ್ರವರನ್ನು ಮತ್ತು ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಮಹನೀಯರನ್ನು ನಾಡ ಹಬ್ಬಗಳ ಆಚರಣಾ ಸಮಿತಿಯಿಂದ ಗೌರವಿಸಲಾಯಿತು.
ತಾಪ ಅಧ್ಯಕ್ಷ ಓಂಕಾರಪ್ಪ, ಪುರಸಭಾ ಮುಖ್ಯಾಧಿಕಾರಿ ಕುಮಾರನಾಯ್ಕ, ವಿವಿಧ ಇಲಾಖೆ ಅಧಿಕಾರಿಗಳಾದ ರಂಗನಾಥ್, ಸಂಜಯ್, ಶಿವಣ್ಣ, ಓಂಕಾರಪ್ಪ, ಡಾ.ಎಸ್.ಕೆ. ಪ್ರಭು,ಪ್ರಕಾಶಮೂರ್ತಿ, ಮಹೇಶ್ವರಪ್ಪ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

