ಚಿಕ್ಕಮಗಳೂರು

ಸಂಗೊಳ್ಳಿ ರಾಯಣ್ಣ ವೇದಿಕೆ ಉದ್ಘಾಟನೆ

Published On :

ತರೀಕೆರೆ:  ತಾಲೂಕಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸರ್ಕಾರಿ ನೌಕರರು ಇದ್ದರೂ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಬೆರಳೆಣಿಕ ನೌಕರರು ಭಾಗವಹಿಸಿರುವುದು ನಾಚಿಕೆಗೇಡಿನ ಸಂಗತಿ ಎಂದು ಮಾಜಿ ಶಾಸಕ ಟಿ.ಎಚ್. ಶಿವಶಂಕರಪ್ಪ ಆರೋಪಿಸಿದ್ದಾರೆ.
ಅವರು, ಕರ್ನಾಟಕ ರಕ್ಷಣಾ ಕನ್ನಡ ಸೇನೆಯಿಂದ ಪಟ್ಟಣದ ಮಹಾತ್ಮಾಗಾಂಧಿ ವೃತ್ತದ ಬಳಿ ಏರ್ಪಡಿಸಲಾಗಿದ್ದ ಸಂಗೊಳ್ಳಿ ರಾಯಣ್ಣ ವೇದಿಕೆ ಉದ್ಘಾಟಿಸಿ ಮಾತನಾಡಿದರು.  ಪ್ರಥಮ ದರ್ಜೆ ಕಾಲೇಜು ಸ್ಥಳಾಂತರದ ಬಗ್ಗೆ ಪ್ರಸ್ತಾಪಿಸಿದ ಅವರು ಕಾಲೇಜು ಕಟ್ಟಡಕ್ಕೆ ಈಗಾಗಲೇ ಸ್ಥಳ ನೀಡಿದ್ದರೂ, ಕಾಮಗಾರಿ ಪ್ರಾರಂಭವಾಗಿಲ್ಲ. ಕಾಲೇಜು ಸ್ಥಳಾಂತರಿಸಿರುವುದರಿಂದ ವಿದ್ಯಾರ್ಥಿಗಳು ಸುಮಾರು 2  ಕಿಮೀ ನಡೆಯಬೇಕಾಗುತ್ತದೆ. ನೂತನ ಕಟ್ಟಡ ನಿರ್ಮಾಣವಾಗುವರೆಗೂ ಇರುವ ಕಟ್ಟಡವನ್ನೇ ದುರಸ್ತಿಗೊಳಿಸುವುದು ಒಳ್ಳೆಯದು ಎಂದು ಅವರು ತಿಳಿಸಿದರು. ಕೆಪಿಸಿಸಿ ಸದಸ್ಯ ಟಿ.ವಿ. ಶಿವಶಂಕರಪ್ಪ ಮಾತನಾಡಿ, ಯುವಕರು ಮುಂದಾಳತ್ವ ವಹಿಸಿದರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ತಿಳಿಸಿದರು. ಕರವೇ ಅಧ್ಯಕ್ಷ ಕಿರಣ್‌ಗೌಡ, ಪುರಸಭಾ ಸದಸ್ಯ ಆನಂದ್, ಧನುಷ್, ಮೂರ್ತಿ, ಯಶವಂತ್ ಇತರರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.