ಚಿಕ್ಕಮಗಳೂರು

ಪರಿಸರ ಜಾಗೃತಿ ಮೂಡಿಸಲು ಸೈಕಲ್ ಜಾಥಾ

Published On :

ಕ.ಪ್ರ.ವಾರ್ತೆ  ಚಿಕ್ಕಮಗಳೂರು   ಆ.17
ಪರಿಸರ ಸಂರಕ್ಷಣೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಚಿಕ್ಕಮಗಳೂರು ಸೈಕ್ಲಿಂಗ್ ಕ್ಲಬ್ ಶನಿವಾರ ತಾಲೂಕಿನಲ್ಲಿ ಸೈಕಲ್ ಜಾಥಾ ನಡೆಸಿತು.
ನಗರದ ಎಐಟಿ ವೃತ್ತದಲ್ಲಿ ಜಿಪಂ ಮಾಜಿ ಅಧ್ಯಕ್ಷ ಟಿ.ಡಿ. ರಾಜೇಗೌಡ ಸ್ವತಃ ಸೈಕಲ್ ಸವಾರಿ ಮಾಡುವ ಮೂಲಕ ಜಾಥಾಕ್ಕೆ ಚಾಲನೆ ನೀಡಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮನುಷ್ಯನ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಹಾಗೂ ಸದೃಢ ಶರೀರಕ್ಕೆ ಸೈಕಲ್ ಸವಾರಿ ಉತ್ತಮ ಸಾಧನವಾಗಿದ್ದು ಅದನ್ನು ಬಳಸುವ ಮೂಲಕ ಯುವ ಜನತೆ ಪರಿಸರ ಸಂರಕ್ಷಣೆಗೆ ಮುಂದಾಗಬೇಕು ಎಂದರು.
ವಾಹನಗಳ ಮಿತಿ ಮೀರಿದ ಬಳಕೆ ಸೇರಿದಂತೆ ಮನುಷ್ಯನ ದುರಾಸೆಯಿಂದಾಗಿ ಇಂದು ಪರಿಸರ ನಾಶವಾಗುತ್ತಿದೆ. ಇದರಿಂದಾಗಿ ವಾತಾವರಣ ಮಲಿನವಾಗುತ್ತಿರುವ ಪರಿಣಾಮ ಕಂಡು ಕೇಳರಿಯದ ರೋಗಗಳಿಗೆ ಮನುಷ್ಯ ತುತ್ತಾಗುತ್ತಿದ್ದಾನೆ ಎಂದ ಅವರು, ಪರಿಸರವನ್ನು ಸಂರಕ್ಷಿಸಿ ಅದನ್ನು ಮುಂದಿನ ಪೀಳಿಗೆಗೆ ಉಳಿಸುವ ಮಹತ್ತರ ಹೊಣೆಗಾರಿಕೆ ಇಂದಿನ ಯುವಪೀಳಿಗೆಯ ಮೇಲಿದೆ ಎಂದು ತಿಳಿಸಿದರು. ಕ್ಲಬ್ ಅಧ್ಯಕ್ಷ ಎಂ.ಎ. ಸಂಜಿತ್ ಮಾತನಾಡಿ, ಮಲಿನವಾಗುತ್ತಿರುವ ಪರಿಸರವನ್ನು ಸಂರಕ್ಷಣೆ ಮಾಡುವ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಪ್ರತಿವರ್ಷ ಸಂಸ್ಥೆ ವತಿಯಿಂದ ಸೈಕಲ್ ಜಾಥಾ ನಡೆಸಲಾಗುವುದು ಎಂದು ಹೇಳಿದರು.
ಎಐಟಿ ವೃತ್ತದಿಂದ ಸೈಕಲ್‌ಗಳಲ್ಲಿ ಹೊರಟ ಕ್ಲಬ್‌ನ 55 ಸದಸ್ಯರು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಹಿರೇಮಗಳೂರು, ಕಳಸಾಪುರ, ಲಕ್ಯಾ, ಕಣಿವೆಹಳ್ಳಿ ಸೇರಿದಂತೆ ತಾಲೂಕಿನ ವಿವಿಧ ಗ್ರಾಮಗಳಿಗೆ ತೆರಳಿ ಪರಿಸರ ಸಂರಕ್ಷಣೆ ಕುರಿತು ಗ್ರಾಮಸ್ಥರಲ್ಲಿ ಅರಿವು ಮೂಡಿಸಿದರು.
ಡಿ.ಎಚ್. ನಟರಾಜ್, ಜಾವೀದ್, ಸದಸ್ಯ ಎಂ.ಜಿ. ಬಾಬುಶಂಕರ್ ಜಾಥಾದಲ್ಲಿ ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.