ಚಿಕ್ಕಮಗಳೂರು

ಹಾನಿ ಪ್ರದೇಶಗಳಿಗೆ ಅಧಿಕಾರಿಗಳ ಭೇಟಿ

Published On :

ಕೊಪ್ಪ: ಭಾರಿ ಮಳೆಯಿಂದ ಮಲೆನಾಡು ಭಾಗದಲ್ಲಿ ಅಡಕೆ ತೋಟಗಳಿಗೆ ಕೊಳೆ ರೋಗ ತಗುಲಿದ ಪರಿಣಾಮ ಅಪಾರ ಪ್ರಮಾಣದ ಹಾನಿ ಸಂಬವಿಸಿದ ಹಿನ್ನೆಲೆಯಲ್ಲಿ ರಾಜ್ಯ ತೋಟಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ಪರಮಶಿವಯ್ಯ ತಾಲೂಕಿನ ಹಾನಿಗೊಳಾಗದ ತೋಟಗಳಿಗೆ ಭೇಟಿ ನೀಡಿದ ಬಳಿಕ ರಾಜ್ಯ ಸರ್ಕಾರಕ್ಕೆ ಹಾನಿಯ ಬಗ್ಗೆ ನೈಜ ವರದಿ ಸಲ್ಲಿಸುವುದಾಗಿ ರೈತರಿಗೆ ಭರವಸೆ ನೀಡಿದರು.
ಈ ಭಾಗದ ಅಡಕೆ ತೋಟಗಳು ನಾಶವಾಗುವ ಪರಿಸ್ಥಿತಿ ಎದುರಾಗಿರುವುದರಿಂದ ಮುಂದಿನ ದಿನಗಳಲ್ಲಿ ಊರಿಗೆ ಊರೇ ಗೂಳೆ ಹೋಗ ಬೇಕಾಗುತ್ತದೆ. ಪ್ರತಿ ಎಕರೆಗೆ ಕನಿಷ್ಠ ರು. 2 ಲಕ್ಷ ಪರಿಹಾರ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ನೀಡಬೇಕು ಎಂದು ರಾಜ್ಯ ತೋಟಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ಪರಮಶಿವಯ್ಯರವರಿಗೆ ಮನವಿಯನ್ನು ರೈತರು ಸಲ್ಲಿಸಿದರು.
ಇದಕ್ಕೆ ಪ್ರತಿಕ್ರಿಸಿದ ಜಂಟಿ ನಿರ್ದೇಶಕರು, ತಾನು ಈ ಭಾಗದಲ್ಲಿ ಕಳೆದ ಎರಡು ದಿನಗಳಿಂದ ಪ್ರವಾಸ ಮಾಡಿದ್ದು ಇಲ್ಲಿನ ಪರಿಸ್ಥಿತಿ ಅರ್ಥವಾಗಿದೆ. ಈ ಬಗ್ಗೆ ವರದಿಯನ್ನು ಸರ್ಕಾರಕ್ಕೆ ತಲುಪಿಸುವುದಾಗಿ ಭರವಸೆ ನೀಡಿದರು. ತಾಲೂಕು ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕಿ ರೇಖಾ, ರೈತಸಂಘದ ಮುಖಂಡರು, ರೈತರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.