ಚಿಕ್ಕಮಗಳೂರು

ದೇವಾಂಗ ಸಮಾಜ ಅಭಿವೃದ್ಧಿಗೆ ಅನುದಾನ

Published On :

ಚಿಕ್ಕಮಗಳೂರು: ಮನುಷ್ಯರು ದೇವಾಲಯಗಳನ್ನು ನಿರ್ಮಿಸಿ ದೇವರನ್ನು ಪೂಜಿಸಿದರಷ್ಟೇ ಸಾಲದು, ಅದರ ಜತೆಗೆ  ಧರ್ಮಾಚರಣೆಯನ್ನೂ ಮಾಡಬೇಕು ಎಂದು ಮೂಡಿಗೆರೆ ಶಾಸಕ ಬಿ.ಬಿ. ನಿಂಗಯ್ಯ ಹೇಳಿದರು.
ತಾಲೂಕಿನ ಅಂಬಳೆಯಲ್ಲಿ ನಿರ್ಮಿಸಲಾದ ಸುಗ್ಗಿಕಲ್ಲು ಆಂಜನೇಯಸ್ವಾಮಿ ದೇವಾಲಯ ಉದ್ಘಾಟನೆ ಅಂಗವಾಗಿ ಸೋಮವಾರ ನಡೆದ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಧರ್ಮಮಾರ್ಗ: ನಮ್ಮ ಹಿರಿಯರು ಹಿಂದೆ ಧರ್ಮ ಮಾರ್ಗದಲ್ಲಿ ಸಾಗುತ್ತಿದ್ದರು. ಅದರಿಂದಾಗಿ ಅಂದು ಸಮಾಜದಲ್ಲಿ ಪ್ರೀತಿ, ವಿಶ್ವಾಸ, ಒಗ್ಗಟ್ಟಿತ್ತು. ಎಲ್ಲರೂ ಶಾಂತಿ ಮತ್ತು ನೆಮ್ಮದಿಯಿಂದ ಬದುಕುತ್ತಿದ್ದರು. ಆದರೆ, ಇತ್ತೀಚೆಗೆ ನಮ್ಮ ಜನ ಧರ್ಮಾಚರಣೆಯಿಂದ ವಿಮುಖರಾದ ಕಾರಣ ಸಮಾಜದಲ್ಲಿಂದು ಸ್ವೇಚ್ಛಾಚಾರ, ಕ್ರೌರ್ಯ, ಹಿಂಸೆ ರಾರಾಜಿಸುತ್ತಿವೆ ಎಂದು ಎಂದು ವಿಷಾದಿಸಿದರು.
ಅಶಾಂತಿಯಿಂದ ಕೂಡಿರುವ ನಮ್ಮ ಸಮಾಜ ಮತ್ತೆ ಮೊದಲಿನಂತಾಗಬೇಕಾದರೆ ನಮ್ಮ ಜನರ ನಡವಳಿಕೆ ಮತ್ತು ಮನಃಸ್ಥಿತಿ ಬದಲಾಗಬೇಕು. ಎಲ್ಲರೂ ಧರ್ಮಮಾರ್ಗದಲ್ಲಿ ಸಾಗಬೇಕು ಎಂದರು. ಹಿಂದುಳಿದಿರುವ ದೇವಾಂಗ ಸಮಾಜದ ಅಭಿವೃದ್ಧಿಗೆ ಹೆಚ್ಚಿನ ಸಹಕಾರ ನೀಡುವುದರ ಜೊತೆಗೆ ಅನುದಾನವನ್ನೂ ಒದಗಿಸಿಕೊಡುವ ಭರವಸೆ ನೀಡಿದರು.
ಪ್ರಾಮಾಣಿಕತೆ ಅಗತ್ಯ: ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿ ಮಾತನಾಡಿ, ಉತ್ತಮ ನಡೆ-ನುಡಿ ಹೊಂದಿ ಪ್ರಾಮಾಣಿಕರಾಗಿದ್ದವರಿಗೆ ಮಾತ್ರ ಭಗವಂತ ಒಲಿಯುತ್ತಾನೆ ಎಂದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ತಾಲೂಕು ದೇವಾಂಗ ಸಂಘದ ಅಧ್ಯಕ್ಷ ಹೆಚ್.ಎಂ. ನಾರಾಯಣ್, ದೇವಾಲಯದ ನಿರ್ಮಾಣಕ್ಕೆ ಸಹಕರಿಸಿದವರಿಗೆ ಕೃತಜ್ಞತೆ ಸಲ್ಲಿಸಿದರು.
ಜಿಲ್ಲಾ ದೇವಾಂಗ ಸಂಘದ ಅಧ್ಯಕ್ಷ ಕೆ.ಎಸ್. ಕೃಷ್ಣಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ಗ್ರಾಮ ಸಂಘದ ಅಧ್ಯಕ್ಷ ಎ.ಎನ್. ಕೃಷ್ಣಮೂರ್ತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ದೇವಾಲಯ ನಿರ್ಮಿಸಲು ದೇಣಿಗೆ ನೀಡಿದವರನ್ನು ಸನ್ಮಾನಿಸಲಾಯಿತು.
ತಾಪಂ ಉಪಾಧ್ಯಕ್ಷ ಪುಟ್ಟೇಗೌಡ, ಸದಸ್ಯ ಕನಕರಾಜ್, ಗ್ರಾಪಂ ಅಧ್ಯಕ್ಷೆ ಚಂದ್ರಮ್ಮ, ಉಪಾಧ್ಯಕ್ಷ ಕೃಷ್ಣೇಗೌಡ, ಮಲೆನಾಡು ದೇವಾಂಗ ಸಂಘದ ಅಧ್ಯಕ್ಷ ಪಿ. ಗಿರಿಯಪ್ಪ ಉಪಸ್ಥಿತರಿದ್ದರು.
ಸಮಾರಂಭಕ್ಕೆ ಮುನ್ನ ನೂತನ ದೇವಾಲಯದ ಪ್ರವೇಶ ಮತ್ತು ಕಳಸ ಪ್ರತಿಷ್ಠಾಪನೆ ಹಾಗೂ ವಿವಿಧ ಹೋಮಗಳು ಜರುಗಿದವು. ರಾಮ-ಲಕ್ಷ್ಮಣ, ಸೀತೆ ಮತ್ತು ಹನುಮಂತನ ವೇಷಧಾರಿಗಳ ಮೆರವಣಿಗೆ ಗ್ರಾಮದಲ್ಲಿ ಮಾಡಲಾಯಿತು. ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.