ಚಿಕ್ಕಮಗಳೂರು

24ರಿಂದ 3ತಿಂಗಳ ಡಿಟಿಪಿ ತರಬೇತಿ

Published On :

ಶಿವಮೊಗ್ಗ: ಕುಮಟಾದ ಸಿಂಡ್ ಗ್ರಾಮೀಣ ಸ್ವ- ಉದ್ಯೋಗ ತರಬೇತಿ ಸಂಸ್ಥೆ ಡಿಟಿಪಿ ಕ್ಷೇತ್ರದಲ್ಲಿರುವ ಅವಕಾಶಗಳನ್ನು ಗಮನಿಸಿ ಆ.24ರಿಂದ 45 ದಿನಗಳ ಕಾಲ ಕಂಪ್ಯೂಟರ್ ಡಿ.ಟಿ.ಪಿ ತರಬೇತಿ ಶಿಬಿರ ಹಮ್ಮಿಕೊಂಡಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ತರಬೇತಿ ಶಿಬಿರದಲ್ಲಿ ಊಟ ಮತ್ತು ವಸತಿ ಉಚಿತವಾಗಿರುತ್ತದೆ.
ಅಭ್ಯರ್ಥಿ ನಿರುದ್ಯೋಗಿಯಾಗಿದ್ದು, ಸ್ವ-ಉದ್ಯೋಗದಲ್ಲಿ ಆಸಕ್ತಿ ಹೊಂದಿರಬೇಕು. ವಯೋವುತಿ 18ರಿಂದ 45 ವರ್ಷಗಳಿರಬೇಕು. ಕನಿಷ್ಠ ವಿದ್ಯಾರ್ಹತೆ ಕನ್ನಡ ಓದಲು, ಬರೆಯಲು ಬರಬೇಕು. ಶಿಬಿರಾರ್ಥಿಗಳಿಗೆ ಸ್ವ್ಯಾಪಂಡ್ ಮತ್ತು ಪ್ರವಾಸ ಭತ್ಯೆ ಕೊಡಲಾಗುವುದಿಲ್ಲ.
ಉತ್ತರಕನ್ನಡ ಜಿಲ್ಲೆಯ ಜೊತೆಯಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರ, ಸೊರಬ ತಾಲೂಕುಗಳಿಗೆ ಮಾತ್ರ ಸಿಮೀತವಾಗಿದ್ದು, ಇಲ್ಲಿನ ಆಸಕ್ತ ಯುವಕ, ಯುವತಿಯರು ನಿರ್ದೇಶಕರು, ಸಿಂಡ್ ಗ್ರಾಮೀಣ ಸ್ವ- ಉದ್ಯೋಗ ತರಬೇತಿ ಸಂಸ್ಥೆ, ಕೈಗಾರಿಕಾ ವಸಾಹತು ಪ್ರದೇಶ, ಹೆಗಡೆ ರಸ್ತೆ, ಕುಮಟಾ- 581343, ಉತ್ತರಕನ್ನಡ ಜಿಲ್ಲೆ ಇವರಿಗೆ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿ ತಮ್ಮ ಹೆಸರು, ತಂದೆ ಅಥವಾ ರಕ್ಷಕರ ಹೆಸರು, ವಿಳಾಸ, ದೂರವಾಣಿ ಸಂಖ್ಯೆ, ವಯಸ್ಸು, ಹುಟ್ಟಿದ ದಿನಾಂಕ, ವಿದ್ಯಾರ್ಹತೆ, ಈಗ ಮಾಡುತ್ತಿರುವ ಉದ್ಯೋಗ, ಪಡೆಯಲ್ಲಿಚ್ಚಿಸಿರುವ ತರಬೇತಿ ಹೆಸರು, ಈ ತರಬೇತಿಯ ವಿಷಯದಲ್ಲಿ ಈಗಿರುವ ಅನುಭವ,
ನಿಮ್ಮ ಬ್ಯಾಂಕಿನ ಸಲಹೆಯಂತೆ ಅರ್ಜಿ ಸಲ್ಲಿಸಿದ್ದಲ್ಲಿ ಬ್ಯಾಂಕಿನ ಹೆಸರು ಮತ್ತು ವಿಳಾಸ ಕಡ್ಡಾಯವಾಗಿ ಬರೆದು ಅರ್ಜಿ ಸಲ್ಲಿಸಬೇಕು ಎಂದು ಸಿಂಡ್ ಬ್ಯಾಂಕ್ನ ನಿರ್ದೇಶಕರು ತಿಳಿಸಿದ್ದಾರೆ. ವಿವರಗಳಿಗಾಗಿ- 08386-220530.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.