ಉಚಿತ ಆರೋಗ್ಯ ತಪಾಸಣಾ ಶಿಬಿರ
ಶೃಂಗೇರಿ: ಪಟ್ಟಣದ ಜೆಸಿಬಿಎಂ ಕಾಲೇಜಿನಲ್ಲಿ ತಾಲೂಕು ಸಾರ್ವಜನಿಕ ಆಸ್ಪತ್ರೆ, ಜಿಲ್ಲಾ ಕುಟುಂಬ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯ ಅಧಿಕಾರಿ ಡಾ. ವೆಂಕಟೇಶ್ ಮಾತನಾಡಿ, ಒತ್ತಡ ರಹಿತ ಜೀವನದಿಂದ ಆರೋಗ್ಯ ಉತ್ತಮ ಪಡಿಸಿಕೊಳ್ಳಬಹುದು. ಬದಲಾದ ಜೀವನ ಶೈಲಿಯಿಂದ ಸಕ್ಕರೆ ಖಾಯಿಲೆ, ರಕ್ತದೊತ್ತಡದಂತಹ ಖಾಯಿಲೆಗಳು ಅತಿ ಚಿಕ್ಕವಯಸ್ಸಿನಿಂದಲೇ ಬರುತ್ತದೆ. ಒತ್ತಡ ಕಡಿಮೆ ಮಾಡಿಕೊಳ್ಳುವುದು, ದೇಹದ ತೂಕದಲ್ಲಿ ನಿಯಂತ್ರಣ, ಪ್ರತಿದಿನ ದೈಹಿಕ ವ್ಯಾಯಾಮಗಳಿಂದ ಈ ರೋಗಗಳಿಂದ ಮುಕ್ತಿ ಸಾಧಿಸಬಹುದಾಗಿದೆ ಎಂದರು. ಶಿಬಿರದಲ್ಲಿ ಸಕ್ಕರೆ ಖಾಯಿಲೆ, ರಕ್ತದ ಗುಂಪು ಪತ್ತೆಹಚ್ಚುವಿಕೆ, ರಕ್ತದೊತ್ತಡ ತಪಾಸಣೆ ನಡೆಯಿತು. ಸುಮಾರು 300 ವಿದ್ಯಾರ್ಥಿಗಳಿಗೆ ತಪಾಸಣೆ ನಡೆಸಲಾಯಿತು. ಡಾ. ಮಹಂತೇಶ್, ಡಾ. ಪ್ರಭು ಇದ್ದರು. ವೀರಪ್ಪಗೌಡ ಅಧ್ಯಕ್ಷತೆ ವಹಿಸಿದ್ದರು.
ಪೋಷಕರ ಸಭೆ
ತರೀಕೆರೆ: ಪಟ್ಟಣದ ಎಂಆರ್ಎಸ್ ಯಶೋದಮ್ಮ ನಾಗತಿ ಪ್ರೌಢಶಾಲೆಯಿಂದ ಶಾಲೆಯಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಪೋಷಕರ ಸಭೆಯನ್ನು ಏರ್ಪಡಿಸಲಾಗಿತ್ತು.
ವಿಷಯವಾರು ಶಿಕ್ಷಕರು ಮಾತನಾಡಿ, ಗೈರುಹಾಜರಿಯನ್ನು ತಡೆಗಟ್ಟಬೇಕು, ಮಕ್ಕಳನ್ನು ಗಮನಿಸಿ ಅವರ ಪರೀಕ್ಷಾ ಭಯ ಹೋಗಲಾಡಿಸಬೇಕು. ಮನೆಯಲ್ಲಿ ವೇಳಾಪಟ್ಟಿ ತಯಾರಿಸಿ ಅನುಸರಿಸಬೇಕು, ಮಕ್ಕಳನ್ನು ಆತ್ಮೀಯತೆಯಿಂದ ಮಾತನಾಡಿಸಬೇಕು ಎಂದು ತಿಳಿಸಿದರು. ಮುಖ್ಯೋಪಾಧ್ಯಾಯ ಎನ್.ಎಂ.ಪಂಚಾಕ್ಷರಯ್ಯ ವಿದ್ಯೆಯ ಮಹತ್ವದ ಬಗ್ಗೆ ಮಾತನಾಡಿದರು. ಸಿ.ಆರ್. ನಾಗರಾಜ್, ಎಚ್.ಸಿ. ಶಿವಕುಮಾರ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

