ಚಿಕ್ಕಮಗಳೂರು

ಇಂದು ಕಾನೂನು ಸಾಕ್ಷರತಾ ಕಾರ್ಯಕ್ರಮ

Published On :

ಚಿಕ್ಕಮಗಳೂರು: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಲಯನ್ಸ್ ಮತ್ತು ಲಯನೆಸ್ ಸಂಸ್ಥೆ, ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ-ಎಸ್ಪಿಐಡಿ ಹಾಗೂ ಮೌಂಟೇನ್ವ್ಯೂ ವಿದ್ಯಾಸಂಸ್ಥೆ ಚಿಕ್ಕಮಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಸಾಕ್ಷರತಾ ಕಾರ್ಯಕ್ರಮವನ್ನು ಆ. 21 ರಂದು ಬೆಳಗ್ಗೆ 9.15ಕ್ಕೆ ನಗರದ ಮಧುವನ ಲೇಔಟ್ನ ಲಯನ್ಸ್ ಸೇವಾ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.  ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಸವರಾಜ್ ಎ. ಪಾಟೀಲ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಲಯನ್ಸ್ ಸಂಸ್ಥೆಯ ಅಧ್ಯಕ್ಷೆ ನೇತ್ರಾ ವೆಂಕಟೇಶ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಕೀಲ ಸಂಘದ ಅಧ್ಯಕ್ಷ ಅಫ್ತಾಬ್ ಅಹಮದ್ ಭಾಗವಹಿಸಲಿದ್ದಾರೆ. ವಕೀಲ ಡಿ.ಬಿ. ಸುಜೇಂದ್ರ ಅವರು ಬುದ್ಧಿಮಾಂಧ್ಯರ ಹಾಗೂ ವಿಕಲಚೇತನರ ಹಕ್ಕುಗಳ ಬಗ್ಗೆ ಹಾಗೂ ಡಿ.ಡಿ.ಆರ್.ಸಿ. ಸದಸ್ಯ ಕಾರ್ಯದರ್ಶಿ ಕೆ. ಪ್ರಕಾಶ್ ವಿಕಲಚೇತನರಿಗೆ ಸರ್ಕಾರದಿಂದ ದೊರಕುವ ಸೌಲಭ್ಯಗಳ ಬಗ್ಗೆ ಉಪನ್ಯಾಸ ನೀಡಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.