ಇಂದು ವಿದ್ಯುತ್ ವ್ಯತ್ಯಯ
ಚಿಕ್ಕಮಗಳೂರು: ಚಿಕ್ಕಮಗಳೂರು ವಿ.ವಿ. ಕೇಂದ್ರದ ಮಾರ್ಗದಲ್ಲಿ 2ನೇ ತ್ರೈಮಾಸಿಕ ನಿರ್ವಹಣೆ ಕಾರ್ಯ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಗುರುವಾರ ಬೆಳಗ್ಗೆ 10 ರಿಂದ ಮಧ್ಯಾಹ್ನ 3 ರವರೆಗೆ ಚಿಕ್ಕಮಗಳೂರು ವಿ.ವಿ. ಕೇಂದ್ರದಿಂದ ಹೊರಹೊಮ್ಮುವ ಎಲ್ಲಾ ನಗರ ಹಾಗೂ ಗ್ರಾಮೀಣ ಫೀಡರ್ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ.
ಆಲ್ದೂರು- ಬಾಳೆಹೊನ್ನೂರು ಮಾರ್ಗದಲ್ಲಿ ನಿರ್ವಹಣೆ ಕಾರ್ಯ ಹಮ್ಮಿಕೊಂಡಿರುವುರಿಂದ ಆಲ್ದೂರು, ಬಾಳೆಹೊನ್ನೂರು, ಕೊಪ್ಪ, ಕೊರ್ಡಿಹಿತ್ಲು, ಜಯಪುರ, ಕಳಸ, ಶೃಂಗೇರಿ ಹಾಗೂ ಎನ್.ಆರ್.ಪುರ ವಿ.ವಿ. ಕೇಂದ್ರಗಳಿಂದ ಹೊರಹೊಮ್ಮುವ ಎಲ್ಲಾ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಕೆಫೆ ಮೊವೆಲ್ಗೆ ಚಾಲನೆ
ಭಾರತ ಸರ್ಕಾರದ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಕಾರ್ಯದರ್ಶಿ ಎಸ್.ಆರ್. ರಾವ್ ರವರು ಚಿಕ್ಕಮಗಳೂರಿನ ಕಾಫಿ ಬೆಳೆಯುವ ಪ್ರದೇಶಗಳಿಗೆ ಆ. 22 ಹಾಗೂ 23 ರಂದು ಭೇಟಿ ನೀಡಲಿದ್ದಾರೆ. ಇದೇ ಸಂದರ್ಭದಲ್ಲಿ ವಿವಿಧ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಸಂವಾದ ಕಾರ್ಯಕ್ರಮ ನಗರದ ತಾಜ್ ಗೇಟ್ವೇ ಹೋಟೆಲ್ನಲ್ಲಿ ಗುರುವಾರ ಸಂಜೆ 7 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಸೌತ್ ಏಷ್ಯಾದ ಸಿ.ಎ.ಬಿ.ಐ. ಸಹಯೋಗದಲ್ಲಿ ಕಾಫಿ ಮಂಡಳಿಯ ಸಂಚಾರಿ ಆಧಾರಿತ ವಿಸ್ತರಣ ಸೇವೆ ಕೆಫೆ ಮೊವೆಲ್ಗೆ ಚಾಲನೆ ನೀಡಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

