ಚಿಕ್ಕಮಗಳೂರು

ಅಂಗವಿಕಲರಿಗೆ ಸ್ಫೂರ್ತಿ ಅಗತ್ಯ

Published On :

ಚಿಕ್ಕಮಗಳೂರು: ಆರೋಗ್ಯವಂತ ಮಕ್ಕಳ ಸಂರಕ್ಷಣೆಯೇ ಕಷ್ಟಕರವಾಗಿರುವ ಈ ಸಮಾಜದಲ್ಲಿ ವಿಕಲಚೇತನರ ಆರೈಕೆ ಮತ್ತು ಸಂರಕ್ಷಣೆಯಲ್ಲಿ ತೊಡಗಿರುವ ಪೋಷಕರ ಹಾಗೂ ಸಂಘಸಂಸ್ಥೆಗಳ ಕಾರ್ಯ ಶ್ಲಾಘನೀಯವಾದದ್ದು, ಅದರಲ್ಲಿಯೂ ವಿಶೇಷವಾಗಿ ಪೋಷಕರ ಪಾತ್ರವೇ ಮಹತ್ವದ್ದಾಗಿದೆ ಎಂದು ನ್ಯಾ. ಬಸವರಾಜ್ ಎ. ಪಾಟೀಲ್ ಹೇಳಿದರು.
ನಗರದ ಲಯನ್ಸ್ ಸೇವಾಭವನದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ, ಲಯನ್ಸ್ ಮತ್ತು ಲಯನೆಸ್ ಸಂಸ್ಥೆ, ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ- ಸಿಎಫ್‌ಐಡಿ ಹಾಗೂ ಮೌಂಟೇನ್ ವ್ಯೂ ವಿದ್ಯಾ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ವಿಕಲಚೇತನರಿಗಾಗಿ ಬುಧವಾರ ಆಯೋಜಿಸಿದ್ದ ಕಾನೂನು ಸಾಕ್ಷರತಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸ್ಫೂರ್ತಿ ತುಂಬಬೇಕು: ವಿಕಲಚೇತನರೂ ಸಹ ಮಾನವರೇ ಎಂಬುದನ್ನು ಪ್ರತಿಯೊಬ್ಬರೂ ಅರಿತು ಅಂತಹವರಿಗೆ ಸ್ಫೂರ್ತಿ ತುಂಬುವ ಮೂಲಕ ಸಮಾಜದ ಮುಖ್ಯವಾಹಿನಿಗೆ ತರುವ ದಿಸೆಯಲ್ಲಿ ಶ್ರಮಿಸಬೇಕು ಎಂದರು.
ವಿಕಲಚೇತನರಿಗಾಗಿಯೇ ಸರ್ಕಾರ ಹಲವು ಸೌಲಭ್ಯ ಒದಗಿಸಿದ್ದು, ಈ ನಿಟ್ಟಿನಲ್ಲಿ ಅಂತಹವರನ್ನು ಪೋಷಿಸುತ್ತಿರುವ ಸಂಸ್ಥೆಗಳು ಅವರವರ ಆಸಕ್ತಿ- ಕೌಶಲ್ಯ ಗುರುತಿಸುವ ಮೂಲಕ ಸರ್ಕಾರದ ಸೌಲಭ್ಯ
ಸದುಪಯೋಗವಾಗುವಲ್ಲಿ ಸಹಕಾರಿಯಾಗಬೇಕು ಎಂದು ಅವರು ತಿಳಿಸಿದರು.
ವಕೀಲ ಡಿ.ಬಿ. ಸುಜೇಂದ್ರ ಮಾತನಾಡಿ, ಬುದ್ಧಿಮಾಂದ್ಯ ಮತ್ತು ವಿಕಲಚೇತನರ ಹಕ್ಕುಗಳ ಬಗ್ಗೆ ಹಾಗೂ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ- ಸಿಎಫ್‌ಐಡಿಯ ಸದಸ್ಯ ಕಾರ್ಯದರ್ಶಿ ಕೆ. ಪ್ರಕಾಶ್ ವಿಕಲಚೇತನರಿಗೆ ಸರ್ಕಾರದಿಂದ ದೊರಕುವ ಸೌಲಭ್ಯ ಎಂಬ ವಿಷಯ ಕುರಿತು ಉಪನ್ಯಾಸ ನೀಡಿದರು.
ಲಯನ್ಸ್ ಅಧ್ಯಕ್ಷೆ ಕೆ. ನೇತ್ರಾ ವೆಂಕಟೇಶ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹಿರಿಯ ಸಿವಿಲ್ ನ್ಯಾಯಾಧೀಶ ಎಂ. ಮಹದೇವಯ್ಯ, ವಕೀಲರ ಸಂಘದ ಅಧ್ಯಕ್ಷ ಅಫ್ತಾಬ್ ಅಹಮದ್, ಕಾರ್ಯದರ್ಸಿ ಐ.ಎಸ್. ತೇಜಸ್ವಿ ಉಪಸ್ಥಿತರಿದ್ದರು.
ಲಯನೆಸ್ ಅಧ್ಯಕ್ಷೆ ಚಂದ್ರಾವತಿ ಶಂಕರ್ ಪ್ರಾರ್ಥಿಸಿದರು. ನಳಿನಿ ಡಿಸಾ ಸ್ವಾಗತಿಸಿದರು. ಸುರೇಶ್ ಕಾರ್ಯಕ್ರಮ ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.