24 ರ ಶೃಂಗೇರಿ ಬಂದ್ಗೆ ಬೆಂಬಲಿಸಲು ಮನವಿ
ಶೃಂಗೇರಿ: ಅಡಕೆ ಬೆಳೆಗಾರರ ಸಮಸ್ಯೆ, ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಆಗಸ್ಟ್ 24 ರಂದು ಶೃಂಗೇರಿ, ಕೊಪ್ಪ, ಎನ್.ಆರ್. ಪುರ, ಖಾಂಡ್ಯಹೋಬಳಿ, ಕಳಸ ವ್ಯಾಪ್ತಿಯನ್ನೊಳಗೊಂಡ ನಡೆಯಲಿರುವ ಪಕ್ಷಾತೀತ ಶೃಂಗೇರಿ ಬಂದ್ಗೆ ಬೆಂಬಲಿಸುವಂತೆ ಮನವಿ ಮಾಡಿಕೊಳ್ಳಲಾಗಿದೆ.
ಈ ಕುರಿತು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸಭೆ ಆಯೋಜಿಸಲಾಗಿತ್ತು. ಸಂಕಷ್ಟದಲ್ಲಿರುವ ಅಡಕೆ ಬೆಳೆಗಾರರ ಸಮಸ್ಯೆಗೆ ಸರ್ಕಾರ ಸ್ಪಂದಿಸಬೇಕು. ಶೇ 90 ರಷ್ಟು ಅಡಕೆ ಬೆಳೆ ಕೊಳೆರೋಗಕ್ಕೆ ತುತ್ತಾಗಿರುವುದರಿಂದ ಕೂಡಲೇ ರೈತರಿಗೆ ಪರಿಹಾರ ಪ್ಯಾಕೇಜ್ ನೀಡಬೇಕು. ಗೋರಖ್ ಸಿಂಗ್ ವರದಿಯಂತೆ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು ಇತ್ಯಾದಿ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಲಾಗುವುದು. ಬೆಳಿಗ್ಗೆ ಪಟ್ಟಣದ ಪುರದ್ವಾರದಿಂದ ಪ್ರತಿಭಟನಾ ಮೆರವಣಿಗೆ ಹೊರಟು ನಂತರ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು. ಬಂದ್ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ನಡೆಯಲಿದೆ. ವಾಹನ ಮಾಲೀಕರು, ವರ್ತಕರು, ಸೇರಿದಂತೆ ಸಾರ್ವಜನಿಕರು ಬಂದ್ಗೆ ಸಹಕರಿಸುವಂತೆ ಮನವಿ ಮಾಡಿಕೊಳ್ಳಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

