'ಪಶ್ಚಿಮ ಘಟ್ಟ ರಕ್ಷಣೆ ಪ್ರಸ್ತಾಪ ಬಿಜೆಪಿಯದ್ದೇ'
ನರಸಿಂಹರಾಜಪುರ: ಪಶ್ಚಿಮ ಘಟ್ಟವನ್ನು ಸಂರಕ್ಷಿಸಲು ಈ ಹಿಂದೆ ಕೇಂದ್ರದಲ್ಲಿದ್ದ ಅಟಲ್ ಬಿಹಾರಿ ವಾಜಪೇಯಿ ಸರ್ಕಾರವೇ ಮೊದಲು ಪ್ರಸ್ತಾಪ ಮಾಡಿತ್ತು ಎಂದು ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷ ಬಿ.ಎಲ್. ವಿಜಯಕುಮಾರ್ ಬಿಜೆಪಿಗೆ ತಿರುಗೇಟು ನೀಡಿದ್ದಾರೆ.
ಅವರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ನಂತರ ತಾಲೂಕಿಗೆ ಆಗಮಿಸಿ, ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಕಾಂಗ್ರೆಸ್ ಮೇಲೆ ಗೂಬೆ: ಈಗ ಕೇಂದ್ರ ಸರ್ಕಾರ ಪಶ್ಚಿಮ ಘಟ್ಟಕ್ಕೆ ಸಂಬಂಧಿಸಿದಂತೆ ಡಾ. ಕಸ್ತೂರಿ ರಂಗನ್ ವರದಿ ಜಾರಿಗೆ ತರಲು ಉದ್ದೇಶಿಸಿದ ಹಿನ್ನೆಲೆಯಲ್ಲಿ ಜಿಲ್ಲೆಯ ಬಿಜೆಪಿ ಶಾಸಕರು ಮಾಡುತ್ತಿರುವ ಟೀಕೆಯನ್ನು ಪ್ರಸ್ತಾಪಿಸಿ, ಬಿಜೆಪಿ ಶಾಸಕರು ಈ ವಿಷಯ ಇಟ್ಟುಕೊಂಡು ಕಾಂಗ್ರೆಸ್ ಮೇಲೆ ಗೂಬೆ ಕೂರಿಸುತ್ತಿದ್ದಾರೆ. ಆದರೆ, ಕಾಂಗ್ರೆಸ್ಗಿಂತ ಮುಂಚೆಯೇ ಕೇಂದ್ರದಲ್ಲಿ ಅಧಿಕಾರಲ್ಲಿದ್ದ ಬಿಜೆಪಿ ಸರ್ಕಾರ ಪಶ್ಚಿಮ ಘಟ್ಟವನ್ನು ಉಳಿಸುವ ಪ್ರಸ್ತಾಪ ಮಾಡಿತ್ತು ಎಂದು ಹೇಳಿದರು.
ಪ್ರಸ್ತುತ ಕಸ್ತೂರಿ ರಂಗನ್ ವರದಿ ಪ್ರಕಾರ 60 ಸಾವಿರ ಚದರ ಕಿ.ಮೀ. ವ್ಯಾಪ್ತಿಯ ಪ್ರದೇಶವನ್ನು ಮಾತ್ರ ಪಶ್ಚಿಮ ಘಟ್ಟದ ಸೂಕ್ಷ್ಮ ಪ್ರದೇಶ ಎಂದು ಘೋಷಿಸಿ ಸಂರಕ್ಷಿಸಲಾಗುತ್ತದೆ. ಇದರಿಂದ ಜನಜೀವನದ ಮೇಲೆ ಯಾವುದೇ ದುಷ್ಪರಿಣಾಮ ಬೀರುವುದಿಲ್ಲ. ಪರಿಸರವೂ ಉಳಿಯಬೇಕು. ಸ್ಥಳೀಯ ರೈತರಿಗೂ ತೊಂದರೆ ಯಾಗಬಾರದು ಎಂಬುದೇ ಕಾಂಗ್ರೆಸ್ ನಿಲುವಾಗಿದೆ ಎಂದವರು ತಿಳಿಸಿದರು.
ಬಿಜೆಪಿ ಪಕ್ಷದ ಶಾಸಕರು ತಮ್ಮ ಮೇಲೆ ಇರುವ ಭ್ರಷ್ಟಾಚಾರ, ಸ್ವಜನ ಪಕ್ಷಪಾತ ಮೊದಲಾದ ಆರೋಪಗಳಿಂದ ತಪ್ಪಿಸಿಕೊಳ್ಳಲು ಬೇರೆ ವಿಷಯ ಪ್ರಸ್ತಾಪ ಮಾಡುತ್ತ ಜನರ ದಿಕ್ಕನ್ನು ತಪ್ಪಿಸುತ್ತಿದ್ದಾರೆ ಎಂದು ಅವರು ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ. ಅಂಶುಮಂತ್, ಜಿಪಂ ಮಾಜಿ ಅಧ್ಯಕ್ಷ ಟಿ.ಡಿ.ರಾಜೇಗೌಡ, ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗದ ಸಮಿತಿ ಅಧ್ಯಕ್ಷ ನಾಗರಾಜ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟೇಶ ನಾಯ್ಡು, ಜಿಲ್ಲಾ ಸಿ.ಡಿ.ಎ.ಮಾಜಿ ಅಧ್ಯಕ್ಷ ಅತೀಕ್ ಕೈಸರ್, ಜಿಲ್ಲಾ ಯುವ ಕಾಂಗ್ರೆಸ್ ಮುಖಂಡ ಬಿ.ಎಲ್. ಸಂದೀಪ್, ಕಾಂಗ್ರೆಸ್ ಮುಖಂಡರಾದ ಕೆ.ಎಂ. ಗಂಗಾಧರ್, ಆರ್. ಸದಾಶಿವ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

