ಒನ್ ವೇ ಪಾಲನೆ ಆಗುತ್ತಿಲ್ಲ
ಚಿಕ್ಕಮಗಳೂರು ನಗರದ ಬಾರ್ ಲೈನ್ ರಸ್ತೆಯನ್ನು ಒನ್ ವೇ ಮಾಡಲಾಗಿದೆ. ಆದರೆ, ಇದು ಆರಂಭದಲ್ಲಿ ಪಾಲನೆಯಾಗುವಂತೆ ಟ್ರಾಫಿಕ್ ಪೊಲೀಸರು ನೋಡಿಕೊಳ್ಳುತ್ತಿದ್ದರು. ಆದರೆ, ಇತ್ತೀಚೆಗೆ ಈ ರಸ್ತೆಯತ್ತ ಟ್ರಾಫಿಕ್ ಪೊಲೀಸರು ಗಮನ ಹರಿಸುತ್ತಿಲ್ಲ. ಈ ರಸ್ತೆ ಒನ್ ವೇ ಆಗಿದ್ದರೂ ವಾಹನ ಚಾಲಕರು, ಅದರಲ್ಲೂ ದ್ವಿಚಕ್ರ ವಾಹನ ಚಾಲಕರು ಯಾವುದೇ ಅಡ್ಡಿ ಇಲ್ಲದೆ ಸರಾಗವಾಗಿ ವಾಹನ ಚಾಲನೆ ಮಾಡಿಕೊಂಡು ಹೋಗುತ್ತಿದ್ದಾರೆ. ನಗರದ ಮುಖ್ಯ ರಸ್ತೆಗಳಲ್ಲಿ ಟ್ರಾಫಿಕ್ ವ್ಯವಸ್ಥೆಯ ಮೇಲೆ ಗಮನ ಹರಿಸುತ್ತಿರುವ ಟ್ರಾಫಿಕ್ ಪೊಲೀಸರು ಬಾರ್ ಲೈನ್ ರಸ್ತೆಯ ಏಕ ಮುಖ ಸಂಚಾರದ ಬಗ್ಗೆ ಗಮನ ಹರಿಸಬೇಕು. ಇಲ್ಲವಾದರೆ, ಈ ರಸ್ತೆಯನ್ನು ದ್ವಿಮುಖ ಸಂಚಾರಕ್ಕೆ ಅನುವು ಮಾಡಿಕೊಡಬೇಕು.
-ರಾಕೇಶ್, ಚಿಕ್ಕಮಗಳೂರು
ಹಳೆ ಜೈಲು ಜಾಗ ಬಳಕೆಯಾಗಲಿ
ಚಿಕ್ಕಮಗಳೂರಿನ ಬಸ್ ನಿಲ್ದಾಣದ ಬಳಿ ಇದ್ದ ಉಪ ಕಾರಾಗೃಹವನ್ನು ರತ್ನಗಿರಿ ಬೋರೆ ಬಳಿ ಸ್ಥಳಾಂತರ ಮಾಡಲಾಗಿದೆ. ಆದರೆ, ಖಾಲಿ ಉಳಿದುಕೊಂಡಿರುವ ಜೈಲು ಜಾಗ ಬಳಕೆಯಾಗುತ್ತಿಲ್ಲ. ಇದು, ಕಸ ವಿಲೇವಾರಿಯ ಕೇಂದ್ರವಾಗಿ ಮಾರ್ಪಾಡಾಗಿದೆ. ಸತ್ತ ಪ್ರಾಣಿಗಳನ್ನು ಇಲ್ಲಿಗೆ ತಂದು ಹಾಕುತ್ತಿರುವುದರಿಂದ ಈ ರಸ್ತೆಯಲ್ಲಿ ಪಾದಚಾರಿಗಳು ಹಾಗೂ ವಾಹನ ಚಾಲಕರು ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣಗೊಂಡಿದೆ. ಈ ಜಾಗ ಬಳಕೆ ಮಾಡಿಕೊಳ್ಳಲು ತಾಂತ್ರಿಕ ಕಾರಣ ಅಡ್ಡಿಯಾಗಿದ್ದರೆ, ನಗರದ ಸ್ವಚ್ಛತೆ ದೃಷ್ಟಿಯಿಂದ ಶುಚಿಯನ್ನಾಗಿಸುವ ಕೆಲಸವನ್ನು ನಗರಸಭೆಯವರು ಮಾಡಬೇಕು. ಕನಿಷ್ಠ ಗಿಡಗಳನ್ನು ಹಾಕುವ ಕೆಲಸವನ್ನಾದರೂ ಮಾಡಲಿ.
-ವಿನೋದ್, ಉಂಡೇದಾಸರಹಳ್ಳಿ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

