ಚಿಕ್ಕಮಗಳೂರು

'ಮೊಬೈಲ್‌ನಿಂದ ಯುವಕರಲ್ಲಿ ಕ್ರೀಡಾಸಕ್ತಿ ಕುಂಠಿತ'

Published On :

ನರಸಿಂಹರಾಜಪುರ: ಟಿ.ವಿ, ಕಂಪ್ಯೂಟರ್, ಮೊಬೈಲ್ ಬಂದ ನಂತರ ಯುವ ಜನರಲ್ಲಿ ಕ್ರೀಡೆಗಳ ಬಗ್ಗೆ ಆಸಕ್ತಿ ಕಡಿಮೆಯಾಗುತ್ತಿದೆ ಎಂದು ರಾಜ್ಯ ಜೆಡಿಎಸ್ ಉಪಾಧ್ಯಕ್ಷ ಎಚ್.ಟಿ. ರಾಜೇಂದ್ರ ವಿಷಾದಿಸಿದರು.
ಮೆಣಸೂರು ಆದರ್ಶ ಯುವಕ ಸಂಘದ ಆಶ್ರಯದಲ್ಲಿ ಮೆಣಸೂರು ಆಟದ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಶನಿವಾರ ಸಂಜೆ ನಡೆದ ನಡೆದ ರಾಜ್ಯ ಮಟ್ಟದ ಹೊನಲು- ಬೆಳಕಿನ ವಾಲಿಬಾಲ್ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿ, ಕ್ರೀಡೆಗಳಿಂದ ಉತ್ತಮ ಆರೋಗ್ಯ, ಉತ್ತಮ ಚಿಂತನೆ ಹುಟ್ಟುತ್ತದೆ. ರಾಜ್ಯ ಮಟ್ಟದ ಕ್ರೀಡಾಕೂಟ ಏರ್ಪಡಿಸಿರುವುದರಿಂದ ಗ್ರಾಮೀಣ ಭಾಗದಲ್ಲಿ ಕ್ರೀಡೆಗಳು ಬೆಳೆಯುತ್ತದೆ ಎಂದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಆದರ್ಶ ಯುವಕ ಸಂಘದ ಅಧ್ಯಕ್ಷ ಅನಿಲ್ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಕ್ರೀಡಾಪಟುಗಳಿಗೆ ತರಬೇತಿಯ ಅವಶ್ಯಕತೆ ಇದೆ ಎಂದರು.
ಅತಿಥಿಗಳಾಗಿ ಮೆಣಸೂರು ಗ್ರಾಪಂ ಸದಸ್ಯ ರತ್ನಾಕರ್ ಆಚಾರ್, ಪಪಂ ಸದಸ್ಯ ಅಬ್ದುಲ್ ಸುಬಾನ್ ಉಪಸ್ಥಿತರಿದ್ದರು. ಪಿ.ಜೆ. ವಿಲ್ಸನ್ ಸ್ವಾಗತಿಸಿದರು. ವಿಜು ಕಾರ್ಯಕ್ರಮ ನಿರೂಪಿಸಿದರು. ಸಿ.ಜೆ. ವರ್ಗೀಸ್ ವಂದಿಸಿದರು.
ಇದೇ ಸಂದರ್ಭದಲ್ಲಿ ದಾನಿಗಳಾದ ವಯಲಿನ್ ತಂಗಚ್ಚನ್, ಕರಾಟೆ ಪಟು ಪ್ರದೀಪ್ ಅವರನ್ನು ಸನ್ಮಾನಿಸಲಾಯಿತು. ಒಟ್ಟು 14 ತಂಡಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದವು. ನ.ರಾ. ಪುರ ಸಹ್ಯಾದ್ರಿ ಫ್ರೆಂಡ್ಸ್ ಕ್ಲಬ್ ಪ್ರಥಮ ಬಹುಮಾನ ಪಡೆದು 15 ಸಾವಿರ ನಗದು ಹಾಗೂ ಟ್ರೋಫಿ ನೀಡಲಾಯಿತು. ನ.ರಾ. ಪುರ ಆದರ್ಶ ಯುವಕ ಸಂಘದ ತಂಡವು ದ್ವಿತೀಯ ಬಹುಮಾನ ಪಡೆದಿದ್ದು 10 ಸಾವಿರ ಹಾಗೂ ಟ್ರೋಫಿ ನೀಡಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.