ಚಿಕ್ಕಮಗಳೂರು

ಕನ್ನಡ ಕಟ್ಟುವಲ್ಲಿ ಯುವಕರ ಪಾತ್ರ ಹಿರಿದು: ಸುಬ್ರಹ್ಮಣ್ಯ

Published On :

ತರೀಕೆರೆ: ಕನ್ನಡ ಭಾಷೆ ಕಟ್ಟುವಲ್ಲಿ ಯುವ ಪೀಳಿಗೆ ಪಾತ್ರ ಹಿರಿದಾಗಿದೆ ಎಂದು ತಾಲೂಕು ಕಸಾಪ ಅಧ್ಯಕ್ಷ ಜಿ. ಸುಬ್ರಹ್ಮಣ್ಯ ತಿಳಿಸಿದ್ದಾರೆ. ಸಮೀಪದ ಶಿವನಿ ಗ್ರಾಮದಲ್ಲಿ ಮಾರುತಿ ಆಟೋ ಚಾಲಕರ ಮತ್ತು ಮಾಲೀಕರ ಸಂಘ, ತಾಲೂಕು ಕಸಾಪ ವತಿಯಿಂದ ಏರ್ಪಡಿಸಿದ್ದ ರಾಜ್ಯೋತ್ಸವ-ನಿತ್ಯೋತ್ಸವ ಕಾರ್ಯಕ್ರಮದಲ್ಲಿ ಕನ್ನಡ ಭಾಷೆ ಬೆಳೆಯುವಲ್ಲಿ ಯುವಕರ ಪಾತ್ರ ಕುರಿತು ಉಪನ್ಯಾಸ ನೀಡಿ ಮಾತನಾಡಿದರು. ಕಾರ್ಯಕ್ರಮವನ್ನು ಗ್ರಾ.ಪಂ. ಅಧ್ಯಕ್ಷೆ ಪ್ರತಿಭಾ ರವಿ ಉದ್ಘಾಟಿಸಿದರು. ಹೋಬಳಿ ಕಸಾಪ ಅಧ್ಯಕ್ಷ ಎನ್. ರವಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕನ್ನಡಶ್ರೀ ಬಿ.ಎಸ್. ಭಗವಾನ್, ಜಿ.ಪಂ. ಸದಸ್ಯ ಎಸ್.ಬಿ. ಆನಂದಪ್ಪ ಮಾತನಾಡಿದರು.
ಹೋಬಳಿ ಕಸಾಪ ಕಾರ್ಯದರ್ಶಿ ಚಂದ್ರಪ್ರಕಾಶ್ ಕರ್ನಾಟಕ ಏಕೀಕರಣ ಕುರಿತಂತೆ ಉಪನ್ಯಾಸ ನೀಡಿದರು.
ಭುವನೇಶ್ವರಿ ಭಾವಚಿತ್ರದೊಂದಿಗೆ, ಊರಿನ ಪ್ರಮುಖ ಬೀದಿಗಳಲ್ಲಿ ವೀರಗಾಸೆ, ಮತ್ತಿತರರ ಕಲಾ ತಂಡಗಳ ಜೊತೆಯಲ್ಲಿ ಆಟೋ ಮತ್ತು ಬೈಕ್ ಮೂಲಕ ಮೆರವಣಿಗೆ ನಡೆಸಲಾಯಿತು. ಮಕ್ಕಳ ವಿವಿಧ ವೇಷಭೂಷಣಗಳು ನಾಗರಿಕರನ್ನು ಆಕರ್ಷಿಸಿತು. ಕಲಾವಿದರಿಂದ ಕನ್ನಡ ಗೀತ ಗಾಯನ, ಸಂಗೊಳ್ಳಿ ರಾಯಣ್ಣ ಹಾಗೂ ಇನ್ನಿತರ ನಾಟಕಗಳನ್ನು ಪ್ರದರ್ಶಿಸಲಾಯಿತು. ತಾ.ಪಂ. ಸದಸ್ಯೆ ದೀಪಾ ಉಮೇಶ್, ಗ್ರಾ.ಪಂ. ಉಪಾಧ್ಯಕ್ಷೆ ಶಕುಂತಲಾ, ಆಟೋ ಸಂಘದ ಭೈರಪ್ಪ, ರೇವಣಸಿದ್ದಪ್ಪ, ಮಹೇಂದ್ರಸ್ವಾಮಿ, ರುದ್ರಪ್ಪ, ಪ್ರಾಚಾರ್ಯ ಜಯ್ಯಪ್ಪ, ಸೋಮಶೇಖರ್, ಎಸ್‌ಡಿಎಂಸಿ ಅಧ್ಯಕ್ಷ ಮೋಹನ್‌ರಾಜ್ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.