ಬಾಲ್ಯ ವಿವಾಹ ನಿರ್ಮೂಲನೆಗೆ ಶ್ರಮಿಸಿ
ಕ.ಪ್ರ. ವಾರ್ತೆ, ಚಿಕ್ಕಮಗಳೂರು, ಡಿ.2
ಬಡತನ, ಶಿಕ್ಷಣದ ಕೊರತೆಯೇ ಬಾಲ್ಯ ವಿವಾಹದಂತಹ ಅನಿಷ್ಟ ಪದ್ಧತಿ ಮುಂದುವರಿಯಲು ಸಾಧ್ಯವಾಗಿದೆ, ಇದರ ನಿರ್ಮೂಲನೆಗೆ ಸಾರ್ವಜನಿಕರು ಮುಂದಾಗಬೇಕು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ರೇಖಾ ಹುಲಿಯಪ್ಪಗೌಡ ಕರೆ ನೀಡಿದ್ದಾರೆ.
ನಗರದ ಟೌನ್ ಮಹಿಳಾ ಸಮಾಜದ ಆವರಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಸೋಮವಾರ ನಡೆದ ಭಾಷಣ ಸ್ಪರ್ಧೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಅನಿಷ್ಟ ಪದ್ಧತಿ: ಶಿಕ್ಷಣದ ಜ್ಞಾನ ಹಾಗೂ ಆರ್ಥಿಕತೆಯನ್ನು ಹೊಂದಿದಂತಹ ಸಂದರ್ಭದಲ್ಲಿ ಬಾಲ್ಯ ವಿವಾಹದಂತ ಅನಿಷ್ಟ ಪದ್ಧತಿ ತಡೆಯಲು ಸಾಧ್ಯ ಎಂದ ಅವರು, ಈ ಜಿಲ್ಲೆಯಲ್ಲಿ ಬಾಲ್ಯ ವಿವಾಹ ಪದ್ಧತಿಗಳು ಕಂಡು ಬರುತ್ತಿಲ್ಲ. ಆದರೆ, ಹೈದರಾಬಾದ್- ಕರ್ನಾಟಕ ಭಾಗದಲ್ಲಿ ಹೆಚ್ಚಿನ ಪ್ರಕರಣಗಳು ಕಂಡು ಬರುತ್ತಿವೆ ಎಂದರು.
ಈ ಅನಿಷ್ಟ ಪದ್ಧತಿಯ ತಡೆಗೆ ಮಾಧ್ಯಮಗಳು ಹೆಚ್ಚಿನ ಕೆಲಸ ಮಾಡುತ್ತಿವೆ. ಸಾರ್ವಜನಿಕರು ಬಾಲ್ಯ ವಿವಾಹದ ಬಗ್ಗೆ ತಿಳಿದು ಬಂದ ಸಂದರ್ಭದಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂದು ಹೇಳಿದರು.
ವಿದ್ಯಾರ್ಥಿಗಳು ಇಂತಹ ಜಾಗೃತಿ ಮೂಡಿಸುವ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳುವುದರ ಜೊತೆಗೆ ಬಾಲ್ಯ ವಿವಾಹ ಪದ್ಧತಿಯನ್ನು ತೊಲಗಿಸಬೇಕು ಎಂದು ಕರೆ ನೀಡಿದರು.
ಉಪ ವಿಭಾಗಾಧಿಕಾರಿ ಚನ್ನಬಸಪ್ಪ ಮಾತನಾಡಿ, ಸಾಮೂಹಿಕ ವಿವಾಹ ನಡೆಯುವ ಸಂದರ್ಭದಲ್ಲಿ ಬಾಲ್ಯ ವಿವಾಹದಂತಹ ಪ್ರಕರಣ ಹೆಚ್ಚು ಕಂಡು ಬರುತ್ತದೆ. ಈ ಬಗ್ಗೆ ಅಧಿಕಾರಿಗಳು ಹಾಗೂ ಸಂಘ ಸಂಸ್ಥೆಗಳು ಎಚ್ಚರ ವಹಿಸಬೇಕು ಎಂದರು.
ಬಾಲ್ಯ ವಿವಾಹ ವಿರೋಧಿಸಿ: ಬಾಲ್ಯ ವಿವಾಹದಿಂದ ಭವಿಷ್ಯದಲ್ಲಿ ಲಭ್ಯವಾಗುವಂತಹ ಅವಕಾಶಗಳು ವಂಚನೆಯಾಗುತ್ತದೆ ಆದ್ದರಿಂದ ಬಾಲ್ಯ ವಿವಾಹಗಳನ್ನು ವಿರೋಧಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ತಾ.ಪಂ. ಅಧ್ಯಕ್ಷೆ ಅಂಬಿಕಾ ಶಿವಕುಮಾರ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ರಾಜೇಗೌಡ, ಟಿಎಂಎಸ್ ಸಂಸ್ಥೆಯ ಕಾರ್ಯದರ್ಶಿ ಗೀತಾ ಎಂ.ಎಲ್. ಮೂರ್ತಿ, ಮುಖ್ಯ ಶಿಕ್ಷಕ ಮಹೇಶಪ್ಪ ಉಪಸ್ಥಿತರಿದ್ದರು.
--
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

