ಜನರಲ್ಲಿ ನೀರಿನ ಸದ್ಬಳಕೆ ಅರಿವು ಅಗತ್ಯ: ತಿಪ್ಪೇಶ್
ಬಾಳೆಹೊನ್ನೂರು: ಗ್ರಾಮೀಣ ಪ್ರದೇಶದ ಜನರಲ್ಲಿ ನೀರಿನ ಸದ್ಬಳಕೆ ಕುರಿತು ಅರಿವು ಅಗತ್ಯ ಎಂದು ಕೊಪ್ಪ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಟಿ.ಸಿ. ತಿಪ್ಪೇಶ್ ಹೇಳಿದ್ದಾರೆ.
ಇಲ್ಲಿಗೆ ಸಮೀಪದ ಹಿರೇಗದ್ದೆ ಗ್ರಾಪಂ ವ್ಯಾಪ್ತಿಯ ತುಪ್ಪೂರಿನಲ್ಲಿ ನಡೆದ ನೀರು ನೈರ್ಮಲ್ಯ ಸಮಿತಿ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಗ್ರಾಮಾಂತರ ಪ್ರದೇಶದ ಜನರಿಗೆ ನೀರಿನ ಕುರಿತು ಅರಿವು ಮೂಡಿಸುವ ಉದ್ದೇಶವೇ ಈ ಕಾರ್ಯಕ್ರಮವಾಗಿದೆ. ಸ್ಥಳೀಯ ಗ್ರಾಮಸ್ಥರೇ ಈ ಸಮಿತಿಯ ಪದಾಧಿಕಾರಿಗಳಾಗಿರುತ್ತಾರೆ. ನೀರು ನೈರ್ಮಲ್ಯ ಸಮಿತಿಯು ಯಶಸ್ವಿಯಾದ ಯೋಜನೆಗಳನ್ನು ನಡೆಸಲು ಗ್ರಾ.ಪಂ.ಗೆ ಗ್ರಾಮಸ್ಥರ ಸಹಕಾರ ಅತ್ಯಗತ್ಯವಾಗಿದೆ. ಬೇಸಿಗೆ ಕಾಲದಲ್ಲಿ ಕುಡಿಯುವ ನೀರಿಗೆ ಎಲ್ಲೆಡೆ ಹಾಹಾಕಾರ ಉಂಟಾಗುವ ಹಿನ್ನೆಲೆಯಲ್ಲಿ ಪ್ರಸ್ತುತ ದಿನಗಳಲ್ಲಿ ನೀರನ್ನು ಮಿತವಾಗಿ ಬಳಸಬೇಕು. ನೀರಿನ ಟ್ಯಾಂಕ್ಗಳನ್ನು ಸ್ವಚ್ಛತೆಯಿಂದ ಕಾಪಾಡಿಕೊಂಡಲ್ಲಿ ಉತ್ತಮ ಆರೋಗ್ಯ ಲಭ್ಯವಾಗಲಿದೆ ಎಂದು ಹೇಳಿದರು.
ಜಿಪಂ ಸದಸ್ಯ ಕೆ.ಎಸ್. ರವೀಂದ್ರ ಕುಕ್ಕುಡಿಗೆ ಮಾತನಾಡಿ, ತುಪ್ಪೂರು ಗ್ರಾಮಕ್ಕೆ 7 ಲಕ್ಷ ಅನುದಾನವನ್ನು ನೀರಿನ ಯೋಜನೆಗಾಗಿ ಬಿಡುಗಡೆ ಮಾಡಲಾಗಿದೆ. ತುಪ್ಪೂರಿನಿಂದ ಸಿಗಸೆ ಗ್ರಾಮದ ರಸ್ತೆಗೆ ಡಾಂಬರೀಕರಣಕ್ಕೆ 5 ಲಕ್ಷ, ಅಂಗನವಾಡಿ ಕಟ್ಟಡ ದುರಸ್ತಿಗೆ 50 ಸಾವಿರ ಅನುದಾನ ನೀಡಲಾಗಿದೆ ಎಂದ ಹೇಳಿದರು.
ತುಪ್ಪೂರಿನ ನೀರು ನೈರ್ಮಲ್ಯ ಸಮಿತಿ ಅಧ್ಯಕ್ಷ ಎ.ಸಿ. ಜಗದೀಶ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಹಿರೇಗದ್ದೆ ಗ್ರಾ.ಪಂ. ಅಧ್ಯಕ್ಷೆ ಶಿವಕುಮಾರಿ, ಕೊಪ್ಪ ತಾ.ಪಂ. ಸದಸ್ಯೆ ಸುಜಾತ, ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎನ್. ಪ್ರಕಾಶ್, ಗ್ರಾ.ಪಂ. ಸದಸ್ಯ ಬಿ.ಎಂ. ಸುದೇವ್, ಜಗದೀಶ್ ಅರಳಿಕೊಪ್ಪ, ಜೇಸಿಐ ಬಾಳೆಹೊನ್ನೂರು ಕ್ಲಾಸಿಕ್ ಅಧ್ಯಕ್ಷ ಮಂಜುನಾಥ್ ತುಪ್ಪೂರು, ದಿನೇಶ್, ಮಂಜಪ್ಪಗೌಡ, ಎಂಜಿನಿಯರ್ ಶರಣುಬಸಪ್ಪ, ಪಿಡಿಒ ಸುಬ್ರಹ್ಮಣ್ಯ, ನೀರು ನೈರ್ಮಲ್ಯ ಸಮಿತಿ ಕಾರ್ಯದರ್ಶಿ ರಾಘವೇಂದ್ರ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

