ಸಾಯಿ ಏಂಜಲ್ಸ್ ಶಾಲೆಗೆ ಪ್ರಥಮ ಸ್ಥಾನ
ಚಿಕ್ಕಮಗಳೂರು: ಇಲ್ಲಿನ ಹಿರೇಮಗಳೂರಿನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಯುವ ಅಭಿವೃದ್ಧಿ ಸಂಘ, ಶ್ರೀದೇವಿ ಯುವಕ ಸಂಘ, ಜಯ ಕರ್ನಾಟಕ ಸಂಘ, ನೆಹರು ಯುವ ಕೇಂದ್ರ, ಲಯನ್ಸ್ ಮತ್ತು ಲಯನೆಸ್ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ಇತ್ತೀಚೆಗೆ ಆಯೋಜಿಸಿದ್ದ ನಗರ ಮಟ್ಟದ ಪ್ರೌಢ ಶಾಲಾ ವಿದ್ಯಾರ್ಥಿಗಳ ಸಾಮೂಹಿಕ ನೃತ್ಯ ಸ್ಪರ್ಧೆಯಲ್ಲಿ ಸಾಯಿ ಏಂಜಲ್ಸ್ ಶಾಲಾ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನದೊಂದಿಗೆ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ರೇಖಾ ಹುಲಿಯಪ್ಪಗೌಡ ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡಿದರು. ನಗರಸಭೆ ಸದಸ್ಯ ಹಿರೇಮಗಳೂರು ಪುಟ್ಟಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಕನ್ನಡ ಭಾಷೆ, ನೆಲ ಜಲ, ಸಾಹಿತ್ಯ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿ ರಾಜೇಗೌಡ ಉಪನ್ಯಾಸ ನೀಡಿದರು. ಜಯ ಕರ್ನಾಟಕ ಸಂಘ ಅಧ್ಯಕ್ಷ ಕೆ.ಆರ್. ಅನಿಲ್‌ಕುಮಾರ್, ಲಯನ್ಸ್ ಅಧ್ಯಕ್ಷೆ ನೇತ್ರಾ ವೆಂಕಟೇಶ್, ಲಯನೆಸ್ ಅಧ್ಯಕ್ಷೆ ಚಂದ್ರಾವತಿ ಶಂಕರ್, ಕಾರ್ಯದರ್ಶಿ ದ್ರಾಕ್ಷಾಯಿಣಿ ಶ್ರೀನಿವಾಸ್, ಖಜಾಂಚಿ ಸತ್ಯವತಿ ರಂಗಸ್ವಾಮಿ, ಶ್ರೀದೇವಿ ಯುವಕ ಸಂಘ ಅಧ್ಯಕ್ಷ ಮೋಹನ್ ಕುಮಾರ್, ನೆಹರು ಯುವ ಕೇಂದ್ರದ ಮಂಜುನಾಥರಾವ್, ನಿವೃತ್ತ ನೌಕರರ ಸಂಘ ಜಿಲ್ಲಾ ಅಧ್ಯಕ್ಷ ಗಂಗಾಧರ್, ಅಂಬೇಡ್ಕರ್ ಯುವಜನ ಅಭಿವೃದ್ಧಿ ಸಂಘ ಅಧ್ಯಕ್ಷ ಗಂಗಾಧರ್, ಕಾರ್ಯದರ್ಶಿ ಪುಷ್ಪರಾಜ್, ಮುಖಂಡ ಸುರೇಶ್ ಹಾಜರಿದ್ದರು.
--
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

