ಅಂಗವಿಕಲರನ್ನು ಮುಖ್ಯವಾಹಿನಿಗೆ ತನ್ನಿ
ನರಸಿಂಹರಾಜಪುರ: ಅಂಗವಿಕಲತೆ ಶಾಪವಲ್ಲ ಎಂಬುದನ್ನು ಅಂಗವಿಕಲರನ್ನು ಸಮಾಜದ ಮುಖ್ಯ ವಾಹಿನಿಗೆ ತರುವುದರ ಮೂಲಕ ಅವರಿಗೆ ಮನದಟ್ಟು ಮಾಡಬೇಕು ಎಂದು ಜಿ.ಪಂ. ಉಪಾಧ್ಯಕ್ಷೆ ಸುಜಾತಾ ತಿಳಿಸಿದರು.
ಅವರು ಮಂಗಳವಾರ ಅಂಬೇಡ್ಕರ್ ಭವನದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಹಿರಿಯ ನಾಗರಿಕ ಸಬಲೀಕರಣ ಇಲಾಖೆ, ರೋಟರಿ ಕ್ಲಬ್, ಲಯನ್ಸ್, ಇನ್ನರ್ ವೀಲ್ ಕ್ಲಬ್ ಆಶ್ರಯದಲ್ಲಿ ನಡೆದ
ವಿಶ್ವ ಅಂಗವಿಕಲರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಮಹೇಶ್ ಮಾತನಾಡಿ, ತಾಪಂನಿಂದ ಅಂಗವಿಕಲರಿಗೆ ಸೌಲಭ್ಯ ನೀಡುವ ಬಗ್ಗೆ ಚರ್ಚೆ ನಡೆಸಲಾಗುವುದು ಎಂದರು.
ವಿವಿಧ ಸ್ಪರ್ಧೆ: ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎನ್. ರಮೇಶ್ ಪ್ರಾಸ್ತಾವಿಕವಾಗಿ ಮಾತನಾಡಿ, ಅಂಗವಿಕಲ ಮಕ್ಕಳಿಗೆ ಪ್ರತಿಭಾ ಕಾರಂಜಿಯಲ್ಲಿ ಸ್ಪರ್ಧೆಯಲ್ಲಿ ಭಾಗವಹಿ ಬೇರೆ ಮ್ಕಕಳ ಜೊತೆ ಸ್ಪರ್ಧೆ ನಡೆಸುವುದು ಸಾಧ್ಯವಾಗುವುದಿಲ್ಲ ಎಂದು ಸರ್ಕಾರ ಅಂಗವಿಕಲರ ದಿನಾಚರಣೆ ಏರ್ಪಡಿಸಿ ವಿವಿಧ ಸ್ಪರ್ಧೆ ನಡೆಸುತ್ತಿದೆ ಎಂದರು.
ತಾಲೂಕಿನಲ್ಲಿ 268 ಅಂಗವಿಕಲ ಮಕ್ಕಳನ್ನು ಗುರುತಿಸಿದ್ದೇವೆ. 14 ಮಕ್ಕಳಿಗೆ ಹೆಚ್ಚು ಅಂಗವಿಕಲತೆ ಕಾಣಿಸಿದ್ದರಿಂದ ಅವರಿಗೆ ಮನೆಯಲ್ಲೇ ಶಿಕ್ಷಣ ನೀಡುವ ವ್ಯವಸ್ಥೆ ಮಾಡಲಾಗಿದೆ ಎಂದವರು ತಿಳಿಸಿದರು.
ಸಿ.ಡಿ.ಪಿ.ಒ ಜ್ಯೋತಿಲಕ್ಷ್ಮಿ ಮಾತನಾಡಿ, ಗ್ರಾಪಂಗಳು ತಮ್ಮ ಗ್ರಾಮದಲ್ಲಿರುವ ಅಂಗವಿಕಲರನ್ನು ಗುರುತಿಸಿ ಅವರಿಗೆ ಗುರುತಿನ ಪತ್ರ ನೀಡಬೇಕು. ಶೇ. 75 ಅಂಗವಿಕಲತೆ ಇದ್ದರೆ ಕಂದಾಯ ಇಲಾಖೆಯಿಂದ ರು. 400 ಮಾಸಾಶನ, ಶೇ 75 ಕ್ಕಿಂತ ಜಾಸ್ತಿ ಅಂಗವಿಕಲತೆ ಇದ್ದರೆ ರು. 1000 ಮಾಸಾಶನ ನೀಡಲಾಗುತ್ತದೆ. ಜಿಲ್ಲಾ ಕೇಂದ್ರದಲ್ಲಿ ಅಂಧತ್ವ ಶಾಲೆ ನಡೆಸಲಾಗುತ್ತಿದ್ದು, ಅಲ್ಲಿ ಅಂಗವಿಕಲರಿಗೆ ಶಿಕ್ಷಣ ನೀಡುವ ವ್ಯವಸ್ಥೆ ಇದೆ ಎಂದರು.
ಲಯನ್ಸ್ ಕ್ಲಬ್ ಅಧ್ಯಕ್ಷ ಸನ್ನಿ, ರೋಟರಿ ಕ್ಲಬ್ ಅಧ್ಯಕ್ಷ ಸುಂದರೇಶ್, ಇನ್ನರ್ ವೀಲ್ಕ್ಲಬ್ ಅಧ್ಯಕ್ಷೆ ಶೀಲಾ ಸುಂದರೇಶ್, ಲಯನ್ಸ್ ಕ್ಲಬ್ ಖಜಾಂಚಿ ಡಿ. ರಮೇಶ್, ತಹಸೀಲ್ದಾರ್ ಕೃಷ್ಣಮೂರ್ತಿ, ತಾಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಗದೀಶ್, ಕೃಷಿ ಸಹಾಯಕ ನಿರ್ದೇಶಕಿ ಸೀಮಾ ಇದ್ದರು.
ಇದೇ ಸಂದರ್ಭದಲ್ಲಿ ಅಂಗವಿಕಲತೆ ಹೊಂದಿದ್ದರೂ, ಕ್ರೀಡೆಯಲ್ಲಿ ಸಾಧನೆ ಮಾಡಿದ 5 ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಉದ್ಘಾಟನೆ ಕಾರ್ಯಕ್ರಮದ ನಂತರ ಅಂಗವಿಕಲತೆ ಹೊಂದಿದ ಹಿರಿಯರಿಗೆ ಮತ್ತು ಕಿರಿಯರಿಗೆ ಪ್ರತ್ಯೇಕವಾಗಿ ವಿವಿಧ 8 ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ರೋಟರಿ, ಲಯನ್ಸ್ ಹಾಗೂ ಇನ್ನರ್ ವೀಲ್ ಕ್ಲಬ್ ವತಿಯಿಂದ ಬಹುಮಾನ ನೀಡಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

