ಚಿಕ್ಕಮಗಳೂರು

ಬಾಲಕಿಗೆ ಲೈಂಗಿಕ ದೌರ್ಜನ್ಯ: 3 ವರ್ಷ ಜೈಲು

Published On :

ಚಿಕ್ಕಮಗಳೂರು: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 3 ವರ್ಷ ಕಠಿಣ ಶಿಕ್ಷೆ ಹಾಗೂ 5 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ. 2013ರ ಜನವರಿ 16 ರಂದು ಮೂಡಿಗೆರೆ ತಾಲೂಕಿನ ಕೆಲ್ಲೂರು ಗ್ರಾಮದಲ್ಲಿ ಆರೋಪಿ ಬಿ.ಸಿ. ರವಿ ಕರೆಂಟ್ ಬಿಲ್ ಕೊಡಲು ಹೋದಾಗ ಬಾಲಕಿ ಒಬ್ಬಳೇ ಮನೆಯಲ್ಲಿರುವುದನ್ನು ಗಮನಿಸಿ ಲೈಂಗಿಕ ದೌರ್ಜನ್ಯವೆಸಗಿದ ಹಿನ್ನೆಲೆಯಲ್ಲಿ ಮೂಡಿಗೆರೆ ಠಾಣಾ ಪೊಲೀಸರು ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಹೆಚ್.ಎಸ್. ಕಮಲ ಅವರು ಪ್ರಕರಣ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿ ಬಿ.ಸಿ. ರವಿಗೆ 3 ವರ್ಷ ಕಠಿಣ ಶಿಕ್ಷೆ ಹಾಗೂ 5 ಸಾವಿರ ದಂಡ ವಿಧಿಸಿದ್ದು, ದಂಡದ ಮೊತ್ತದಲ್ಲಿ 4 ಸಾವಿರ ಲೈಂಗಿಕ ಹಲ್ಲೆಗೊಳಗಾದ ಬಾಲಕಿಗೆ ಪರಿಹಾರವಾಗಿ ನೀಡುವಂತೆ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ವಿ.ಆರ್. ಉಪಾಧ್ಯೆ ಮೊಕದ್ದಮೆ ನಡೆಸಿದ್ದರು.

ಬಿಂದು ದ್ವಿತೀಯ
ತರೀಕೆರೆ: ಪಟ್ಟಣದ ಎನ್ಇಪಿಎಸ್ ಶಾಲೆಯಲ್ಲಿ ನಡೆದ ಪ್ರಾಥಮಿಕ ಶಾಲೆಗಳ ಗ್ರಾಮಾಂತರ ಕ್ಸಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ವಿದ್ಯಾರ್ಥಿನಿ  ಬಿಂದು ನವಲೆ ರಚಿಸಿದ, ಪರಿಸರ ಉಳಿಸಿ, ಪ್ಸಾಸ್ಟಿಕ್ನಿಂದ ಪರಿಸರ ನಾಶ ಛದ್ಮವೇಷ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನ ಮತ್ತು ವಿದ್ಯಾರ್ಥಿ ರೋಹನ್ ನವಲೆಗೆ ರಸಪ್ರಶ್ನೆಯಲ್ಲಿ ಪ್ರಥಮ ಬಹುಮಾನ ದೊರಕಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.