ಚಿಕ್ಕಮಗಳೂರು

ತಂಬಾಕು ವಿರೋಧಿ ದಿನಾಚರಣೆ

Published On :

ನರಸಿಂಹರಾಜಪುರ: ತಂಬಾಕಿನಲ್ಲಿ ನಿಕೋಟಿನ್ ಎಂಬ ವಿಷ ಪದಾರ್ಥ ಇದ್ದು, ತಂಬಾಕು ಸೇವನೆಯಿಂದ ಕ್ಯಾನ್ಸರ್ ರೋಗ ದಂತಹ ಮಾರಕ ರೋಗ ಬರಲಿದೆ ಎಂದು ತಾಪಂ ಉಪಾಧ್ಯಕ್ಷೆ ಸುಮಿತ್ರ ತಿಳಿಸಿದರು. ಅವರು ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಮಂಗಳವಾರ ನಡೆದ ಸ್ವಚ್ಛತಾ  ಆಂದೋಲನ ಹಾಗೂ ತಂಬಾಕು ವಿರೋಧಿ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಮಕ್ಕಳು ತಮ್ಮ ಮನೆಯ ಪೋಷಕರಿಗೆ ತಂಬಾಕು, ಬೀಡಿ, ಸಿಗರೇಟಿನಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ತಿಳಿಸಬೇಕು ಎಂದು ಅವರು ಹೇಳಿದರು. ಪೋಷಕ ಪ್ರಭಾಕರ್ ಮಾತನಾಡಿ, ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಅವರು ಯುವ ಜನರ ಆರೋಗ್ಯ, ಗುಣಾತ್ಮಕ ಶಿಕ್ಷಣದ ಬಗ್ಗೆ ಕನಸು ಕಂಡಿದ್ದರು. ಸರ್ಕಾರ ಕಲಾಂ ಅವರ ಕನಸನ್ನು ನನಸು ಮಾಡಬೇಕು ಎಂದು ಆಗ್ರಹಿಸಿದರು. ತಾಲೂಕು ದೈಹಿಕ ಪರಿವೀಕ್ಷಕ ಕೆ. ಮೌನೇಶ್ವರಾಚಾರ್ ಮಾತನಾಡಿ, ಉತ್ತಮ ಆರೋಗ್ಯವಂತ ಮಕ್ಕಳೇ ದೇಶದ ಸಂಪತ್ತಾಗಿದ್ದು, ಮಕ್ಕಳು ತಮ್ಮ ಆರೋಗ್ಯದ ಬಗ್ಗೆ ಗಮನ ನೀಡಬೇಕು ಎಂದು ಸಲಹೆ ನೀಡಿದರು.ಶಾಲಾ ಎಸ್.ಡಿ.ಎಂ.ಸಿ. ಸದಸ್ಯರಾದ ರೂಪಾ, ಚೈತ್ರಾ ಉಪಸ್ಥಿತರಿದ್ದರು. ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕ ಬಿ.ಆರ್. ಉ ಮೇಶ್ ಸ್ವಾಗತಿಸಿದರು. ಶಶಿಧರ ಆರಾಧ್ಯ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.