ಚಿಕ್ಕಮಗಳೂರು

ಮೆಸ್ಕಾಂ ಕಚೇರಿಗೆ ಬೀಗ ಹಾಕಿ ಧರಣಿ

Published On :

ಮೂಡಿಗೆರೆ: ವಿದ್ಯುತ್ ಸಮಸ್ಯೆಯಿಂದ ಹುಲ್ಲೆಮನೆ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು, ಇದನ್ನು ಸರಿಪಡಿಸುವಂತೆ ಒತ್ತಾಯಿಸಿ ಗ್ರಾಮದ ಹುಲ್ಲೆಮನೆ ಚಂದ್ರು, ಸುದರ್ಶನ  ಮತ್ತು ರವಿ ಮೆಸ್ಕಾಂ ಕಚೇರಿಗೆ ಆಗಮಿಸಿ ಬಾಗಿಲಿಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದ ಪ್ರಕರಣ ಮಂಗಳವಾರ ನಡೆದಿದೆ.
ಹುಲ್ಲೇಮನೆ ಗ್ರಾಮದಲ್ಲಿ ಕಳೆದ ಒಂದು ವರ್ಷದಿಂದ ಕುಡಿವ ನೀರಿನ ಸಮಸ್ಯೆಯಿದ್ದು, ಸರಿಪಡಿಸುವಂತೆ ದೂರವಾಣಿ ಮೂಲಕ ಮತ್ತು ನೇರವಾಗಿ ತಿಳಿಸಿದರೂ, ಅಧಿಕಾರಿಗಳು ಸ್ಪಂದಿಸದೇ ಇರುವುರಿಂದ ಕಚೇರಿಗೆ ಬೀಗ ಹಾಕಲಾಗುತ್ತಿದೆ ಎಂದರು. ಅಷ್ಟರಲ್ಲಿ ಪೊಲೀಸರು ಆಗಮಿಸಿ ಯಾವುದೇ ಅನುಮತಿ ರಹಿತ ಪ್ರತಿಭಟನೆ ನಡೆಸಿ ಬೀಗ ಹಾಕುವುದು ತಪ್ಪು. ತಕ್ಷಣವೇ ಬೀಗ ತೆಗೆದು ಸಿಬ್ಬಂದಿಗೆ ಕಾರ್ಯಕ್ಕೆ ಅಡ್ಡಿ ಉಂಟುಮಾಡದಂತೆ ತಿಳಿ ಹೇಳಿದ ಹಿನ್ನೆಲೆಯಲ್ಲಿ ಬೀಗ ತೆರೆದು ಸಿಬ್ಬಂದಿ ಕೆಲಸ ನಿರ್ವಹಿಸಲು ಅನುವು ಮಾಡಿಕೊಟ್ಟರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.